Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಈಶಾನ್ಯ ಪದವೀಧರ ಮತಕ್ಷೇತ್ರ ಕೈ ಹಿಡಿದ ಪದವೀಧರ 

Wednesday, 13.06.2018, 11:27 PM       No Comments

ಕಲಬುರಗಿ: ವಿಧಾನ ಪರಿಷತ್ತಿಗೆ ಈಶಾನ್ಯ ಪದವೀಧರ ಮತ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯಥರ್ಿ ಡಾ.ಚಂದ್ರಶೇಖರ ಪಾಟೀಲ್ ಹುಮನಾಬಾದ್ ಗೆಲುವು ಸಾಧಿಸುವ ಮೂಲಕ ಬಿಜೆಪಿ ಭದ್ರಕೋಟೆ ಮೊದಲ ಬಾರಿಗೆ ಛಿದ್ರಗೊಳಿಸಿದ್ದಾರೆ.
ಸಮೀಪದ ಪ್ರತಿಸ್ಪಧರ್ಿ ಬಿಜೆಪಿಯ ಕೆ.ಬಿ.ಶ್ರೀನಿವಾಸ ಅವರನ್ನು 321 ಮತಗಳ ಅಂತರದಿಂದ ಪರಾಭವಗೊಳಿಸುವ ಮೂಲಕ ವಿಜಯದ ಪತಾಕೆ ಹಾರಿಸಿದ್ದಾರೆ.
ಹೈದರಾಬಾದ್ ಕನರ್ಾಟಕದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಹರಪನಹಳ್ಳಿ ಒಳಗೊಂಡ ಈಶಾನ್ಯ ಪದವೀಧರ ಮತಕ್ಷೇತ್ರ ಈ ಚುನಾವಣೆಯಲ್ಲಿ ಭಾರಿ ಸ್ಪಧರ್ೆ ಏರ್ಪಟ್ಟಿತ್ತು. ಕಳೆದ ಮೂರು ದಶಕಗಳಿಂದ ಬಿಜೆಪಿ ಈ ಕ್ಷೇತ್ರ ಬಿಟ್ಟುಕೊಟ್ಟಿರಲಿಲ್ಲ.
ವಿಜೇತ ಅಭ್ಯಥರ್ಿ ಡಾ.ಚಂದ್ರಶೇಖರ ಪಾಟೀಲ್ 18768 ಮತಗಳನ್ನು ಪಡೆದರೆ, ಬಿಜೆಪಿಯ ಕೆ.ಬಿ.ಶ್ರೀನಿವಾಸ 18447 ಮತಗಳನ್ನು ಪಡೆಯುವ ಮೂಲಕ 321 ಮತಗಳ ಅಂತದಿಂದ ಸೋಲೊಪ್ಪಿಕೊಂಡಿದ್ದಾರೆ. ಮತ ಎಣಿಕೆ ಆರಂಭದಲ್ಲಿ ಭಾರಿ ಸದ್ದು ಮಾಡಿದ್ದ ಜೆಡಿಎಸ್ ಅಭ್ಯಥರ್ಿ ಕೊನೆ ಘಳಿಗೆಯಲ್ಲಿ ಕೈಚೆಲ್ಲಬೇಕಾಯಿತು.
2ನೇ ಪ್ರಾಶಸ್ತ್ಯದ ಮತದ ಆಧಾರದ ಮೇಲೆ ಕಾಂಗ್ರೆಸ್ ಅಭ್ಯಥರ್ಿ ಗೆಲುವು ಸಾಧಿಸಿದರು. ಮೊದಲು ಮತ್ತು 2ನೇ ಸುತ್ತಿನಲ್ಲಿ ಜೆಡಿಎಸ್ ಅಭ್ಯಥರ್ಿ ಪ್ರತಾಪರೆಡ್ಡಿ ಮುನ್ನಡೆ ಸಾಧಿಸಿದ್ದರು. ಮೂರು ಮತ್ತು ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿತ್ತು. ಪ್ರಥಮ ಪ್ರಾಶಸ್ತ್ರದ ಮತ ಎಣಿಕೆಯಲ್ಲಿ ಬಿಜೆಪಿ ಮುಂದಿತ್ತು. ದ್ವಿತೀಯ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಬಹುತೇಕ ಗೆಲುವಿನತ್ತ ಹೆಜ್ಜೆ ಇರಿಸಿತು.
ಈ ಕ್ಷೇತ್ರದಿಂದ ಬಿಜೆಪಿಯ ದಿ.ಡಾ.ಎಂ.ಆರ್.ತಂಗಾ ನಿರಂತರ ಮೂರು ಬಾರಿ ಆಯ್ಕೆಯಾಗಿದ್ದರು. ನಂತರ ಮನೋಹರ ಮಸ್ಕಿ, ಆ ನಂತರ ಅಮರನಾಥ ಪಾಟೀಲ್ ಆಯ್ಕೆಯಾಗಿದ್ದರು. ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದ ಬಿಜೆಪಿ ಅಭ್ಯಥರ್ಿ ಆಯ್ಕೆ ವಿಚಾರದಲ್ಲಿನ ಗಡಿಬಿಡಿಯಿಂದಾಗಿ ಸ್ಥಾನ ಕಳೆದುಕೊಂಡಿದೆ.
ನೋಟಾ 62, ತಿರಸ್ಕೃತ ಮತಗಳು 6583 ಮತಗಳು. ಸಾರ್ವತ್ರಿಕ ಚುನಾವಣೆಯಲ್ಲೂ ಇಷ್ಟೊಂದು ಪ್ರಮಾಣದ ಮತಗಳೂ ತಿರಸ್ಕೃತಗೊಳ್ಳುವುದಿಲ್ಲ. ಆದರೆ ಮತದಾರ ಪದವೀಧರನಾಗಿದ್ದರೂ ಇಷ್ಟೊಂದು ದೊಡ್ಡ ಪ್ರಮಾಣದ ಮತಗಳು ತಿರಸ್ಕೃತಗೊಂಡಿರುವುದು ಅಚ್ಚರಿ ಮೂಡಿಸಿದೆ.
ಚುನಾವಣಾಧಿಕಾರಿ ಪಂಕಜಕುಮಾರ ಪಾಂಡೆ ವಿಜೇತ ಅಭ್ಯಥರ್ಿಗೆ ಪ್ರಮಾಣಪತ್ರ ವಿತರಿಸಿದರು. ಮಂಗಳವಾರ ಬೆಳಗ್ಗೆ 8ಕ್ಕೆ ಪ್ರಾರಂಭವಾದ ಮತ ಎಣಿಕೆಯು ರಾತ್ರಿ ಇಡೀ ನಡೆದು ಬುಧವಾರ ಬೆಳಗ್ಗೆ 6ಕ್ಕೆ ಪೂರ್ಣಗೊಂಡಿತು. ಮತ ಎಣಕೆ ಪ್ರಕ್ರಿಯೆಯಲ್ಲಿ ಚುನಾವಣಾ ವೀಕ್ಷಕಿ ಮಂಜುಳಾ, ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಸಹಾಯಕ ಆಯುಕ್ತೆ ಬಿ. ಸುಶೀಲಾ, ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂತರ್ಿ, ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ, ಬೀದರ ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಬಿ. ರಾಚಪ್ಪ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ ಇತರರು ಇದ್ದರು.

Leave a Reply

Your email address will not be published. Required fields are marked *

Back To Top