18 C
Bangalore
Friday, December 6, 2019

ಈ ಬಾರಿಯೂ ಬಾಲಕಿಯರೇ ಮೇಲುಗೈ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಹಾವೇರಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜಿಲ್ಲೆಯ ಫಲಿತಾಂಶ ಶೇ. 79.75ರಷ್ಟಾಗಿದೆ. ರಾಜ್ಯ ಮಟ್ಟದಲ್ಲಿ ಜಿಲ್ಲೆಯು 19ನೇ ಸ್ಥಾನಕ್ಕೇರಿದೆ. ಕಳೆದ ವರ್ಷ 23ನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 3 ಸ್ಥಾನ ಜಿಗಿತ ಕಂಡಿದೆ.

ಜಿಲ್ಲೆಯಲ್ಲಿ ಒಟ್ಟು 9,159 ಬಾಲಕರು, 9,775 ಬಾಲಕಿಯರು ಸೇರಿ 18,934 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 15,244 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 79.75ರಷ್ಟು ಫಲಿತಾಂಶ ದಾಖಲಾಗಿದೆ. ಕಳೆದ ವರ್ಷದ ಫಲಿತಾಂಶ ಶೇ. 76.76ರಷ್ಟಾಗಿತ್ತು.

ಪ್ರತಿ ವರ್ಷದಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 9,775ರಲ್ಲಿ 8,259 ಬಾಲಕಿಯರು ಪಾಸಾಗಿದ್ದಾರೆ. ಶೇ. 84.49ರಷ್ಟು ಫಲಿತಾಂಶ ಬಂದಿದೆ. 9,159ರಲ್ಲಿ 6,985 ಬಾಲಕರು ಪಾಸಾಗಿದ್ದು, ಶೇ. 76.26ರಷ್ಟು ಫಲಿತಾಂಶ ಬಂದಿದೆ. ಒಟ್ಟು 36ಪ್ರೌಢಶಾಲೆಗಳು ನೂರರಷ್ಟು ಫಲಿತಾಂಶ ಗಳಿಸಿವೆ. ಇದರಲ್ಲಿ ಸರ್ಕಾರಿ 19, ಅನುದಾನಿತ 5, ಅನುದಾನರಹಿತ 12 ಪ್ರೌಢಶಾಲೆಗಳು ಸೇರಿವೆ.

ಜಿಲ್ಲೆಗೆ ಹಾವೇರಿ ಫಸ್ಟ್, ಸವಣೂರ ಲಾಸ್ಟ್:ಜಿಲ್ಲೆಯ 7 ತಾಲೂಕುಗಳಲ್ಲಿ ಹಾವೇರಿ ತಾಲೂಕು 88.82ರಷ್ಟು ಫಲಿತಾಂಶ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದೆ. ಪರೀಕ್ಷೆಗೆ ಹಾಜರಾದ 3,123ರಲ್ಲಿ 2,774 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಬ್ಯಾಡಗಿ ತಾಲೂಕು ಶೇ. 85.80 ಫಲಿತಾಂಶ ಗಳಿಸಿ ದ್ವಿತೀಯ ಸ್ಥಾನದಲ್ಲಿದೆ. ಪರೀಕ್ಷೆಗೆ ಹಾಜರಾಗಿದ್ದ 1,874ರಲ್ಲಿ 1,608 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೂರನೇ ಸ್ಥಾನದಲ್ಲಿ ರಾಣೆಬೆನ್ನೂರ ತಾಲೂಕಿದ್ದು, ಶೇ. 84.32ರಷ್ಟು ಫಲಿತಾಂಶ ದಾಖಲಾಗಿದೆ. 3,986ರಲ್ಲಿ 3,361 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಹಿರೇಕೆರೂರ ತಾಲೂಕಿದ್ದು, ಶೇ. 79.79ರಷ್ಟು ಫಲಿತಾಂಶ ಬಂದಿದೆ. 3,001ರಲ್ಲಿ 2,400 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಾನಗಲ್ಲ ತಾಲೂಕಿನಲ್ಲಿ ಶೇ. 76.11ರಷ್ಟು ಫಲಿತಾಂಶ ದಾಖಲಾಗಿದೆ. 2,843ರಲ್ಲಿ 1,271 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶಿಗ್ಗಾಂವಿ ತಾಲೂಕಿನಲ್ಲಿ ಶೇ. 72.94ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾಗಿದ್ದ 2,425ರಲ್ಲಿ 1,769 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಸವಣೂರ ತಾಲೂಕು ಕೊನೇ ಸ್ಥಾನದಲ್ಲಿದ್ದು, ಶೇ. 69.44ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 1,682ರಲ್ಲಿ 1,168 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಜಿಲ್ಲೆಗೆ ಇಬ್ಬರು ಫಸ್ಟ್:ಹಾನಗಲ್ಲ ಶೇಷಗಿರಿ ಸರ್ಕಾರಿ ಪ್ರೌಢಶಾಲೆಯ ಸಿಂಧು ಬಸವರಾಜ ಹಾವೇರಿ ಶೇ. 98.72, ಶಿಗ್ಗಾಂವಿ ಜೆಎಂಜೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪೃಥ್ವಿ ರಾವಸಾಹೇಬ ಧರ್ವರ ಶೇ. 98.72 ಅಂಕ ಗಳಿಸಿ ಜಿಲ್ಲೆಯಲ್ಲಿ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಮಾಧ್ಯಮವಾರು ಜಿಲ್ಲೆಗೆ ಮೊದಲ 3 ಸ್ಥಾನ ಪಡೆದವರು:ಕನ್ನಡ ಮಾಧ್ಯಮದಲ್ಲಿ ಹಾನಗಲ್ಲ ತಾಲೂಕಿನ ಶೇಷಗಿರಿ ಸರ್ಕಾರಿ ಪ್ರೌಢಶಾಲೆಯ ಸಿಂಧು ಬಸವರಾಜ ಹಾವೇರಿ ಶೇ. 98.72, ಹಾನಗಲ್ಲ ತಾಲೂಕಿನ ಮಹಾರಾಜಪೇಟ ಸರ್ಕಾರಿ ಪ್ರೌಢಶಾಲೆಯ ಧನಲಕ್ಷಿ್ಮ ಮಲ್ಲಿಕಾರ್ಜುನ ಹುಣಸಿಕಟ್ಟಿ ಶೇ. 98.56, ಹಾವೇರಿ ತಾಲೂಕಿನ ಗುತ್ತಲದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಮಮತಾ ನಿಂಗಪ್ಪ ಕುಮ್ಮೂರ ಶೇ. 98.24 ಅಂಕ ಗಳಿಸಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ.

ಆಂಗ್ಲ ಮಾಧ್ಯಮದಲ್ಲಿ ಶಿಗ್ಗಾಂವಿ ಜೆಎಂಜೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪೃಥ್ವಿ ರಾವಸಾಹೇಬ ಧರ್ವರ ಶೇ. 98.72, ಪುನೀತ ಶಿವಪ್ರಕಾಶ ಹಿರೇಮಠ ಶೇ. 98.56, ನೇಹಾ ಎಸ್.ಎಂ., ಶೇ. 98.56, ರಾಣೆಬೆನ್ನೂರ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಅಕ್ಷಯ ಕೊರ್ಲಹಳ್ಳಿ ಶೇ. 98.41 ಅಂಕ ಗಳಿಸಿ ಮೊದಲ ಮೂರು ಸ್ಥಾನ ಗಳಿಸಿದ್ದಾರೆ.

ಉರ್ದು ಮಾಧ್ಯಮದಲ್ಲಿ ಹಿರೇಕೆರೂರ ಸರ್ಕಾರಿ ಉರ್ದು ಪ್ರೌಢಶಾಲೆಯ ಝುಯಾ ಖಾಜಿ ಶೇ. 96.96, ಹಿರೇಕೆರೂರ ತಾಲೂಕಿನ ಕೋಡದ ಸರ್ಕಾರಿ ಉರ್ದು ಪ್ರೌಢಶಾಲೆಯ ಸಾನಿಯಾ ಬಾಳಿಕಾಯಿ ಶೇ. 96.96, ಶೀಬಾಬಾನು ನಸೂರ್ ಶೇ. 96.48, ನಾಝಿಯಾ ಪರ್ವಿನ್ ಶೆರೇಗಾರ ಶೇ. 95.84, ಹಾವೇರಿ ತಾಲೂಕಿನ ಕನವಳ್ಳಿಯ ಸರ್ಕಾರಿ ಉರ್ದು ಪ್ರೌಢಶಾಲೆಯ ರಿಹಾನ್​ಬಾನು ಅಗಡಿ ಶೇ. 95.84 ಅಂಕ ಗಳಿಸಿ ಕ್ರಮವಾಗಿ ಮೊದಲ ಮೂರು ಸ್ಥಾನ ಗಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ನಿರಂತರವಾಗಿ ಪ್ರಯತ್ನಿಸಿದ್ದೇವೆ. ಶಿಕ್ಷಕರು ಉತ್ತಮ ಕೆಲಸ ಮಾಡಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಫಲಿತಾಂಶ ಬಂದಿದೆ. ಇನ್ನೂ ಹೆಚ್ಚಿನ ಸುಧಾರಣೆ ಅಗತ್ಯವಿದೆ. ಜಿಲ್ಲೆಯ ಶಿಕ್ಷಕರ ಪ್ರಯತ್ನಗಳು ಫಲ ನೀಡಿದೆ. ಫಲಿತಾಂಶ ಸುಧಾರಣೆಗೆ ಇನ್ನೂ ಹೆಚ್ಚಿನ ಗಮನ ವಹಿಸಲಾಗುವುದು.

| ಅಂದಾನಪ್ಪ ವಡಗೇರಿ, ಡಿಡಿಪಿಐ ಹಾವೇರಿ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...