25.9 C
Bengaluru
Wednesday, January 22, 2020

ಈ ಸಲ ಯಾರು ಆರಿಸಿ ಬರಬಹುದ್ರಿ!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಹಾವೇರಿ: ಜಿಲ್ಲೆಯ 2 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಎರಡೂ ಕ್ಷೇತ್ರದಲ್ಲಿ ಈ ಬಾರಿ ಯಾರು ಗೆಲ್ತಾರೆ ಎಂದು ಬೆಟ್ಟಿಂಗ್ ಭರಾಟೆ ಜೋರಾಗಿದೆ.

ಕ್ಷೇತ್ರದ ಓಣಿಗಳಲ್ಲಿ, ಊರುಗಳಲ್ಲಿ ಜನ ಗುಂಪುಗುಂಪಾಗಿ ಚುನಾವಣಾ ಫಲಿತಾಂಶದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ತಮಗೆ ಪರಿಚಯಸ್ಥ ಯಾರೇ ಕಂಡರೂ ಯಾರು ಗೆಲ್ತಾರ್ರಿ ಈ ಬಾರಿ, ರಿಸಲ್ಟ್ ಏನಾಗತೈತ್ರಿ, ನಿಮ್ಮೂರಾಗ ಯಾವ ಕಡೆ ಹೆಚ್ಚಾಗೈತ್ರಿ ಎಂಬ ಮಾತಿನೊಂದಿಗೆ ಚರ್ಚೆಗಿಳಿಯುತ್ತಿದ್ದಾರೆ. ಇಬ್ಬರ ನಡುವೆ ವಿಶ್ಲೇಷಣೆಯಲ್ಲಿ ವ್ಯತ್ಯಾಸ ಬಂದರೂ ನಾ ಅನ್ಕೊಂಡಂಗಾ ಆಗತೈತಿ, ಬೇಕಾದ್ರ ಬೆಟ್ಟಿಂಗ್ ಮಾಡೋಣ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಪಾನ್​ಅಂಗಡಿ, ಹೋಟೆಲ್, ಅಂಗಡಿ, ಕಚೇರಿ ಎನ್ನದೇ ‘ಎಲ್ಲೆಡೆ ನಿಮ್ ಪ್ರಕಾರ ಈ ಸಲ ಯಾರು ಆರಿಸಿ ಬರಬಹುದ್ರಿ’ ಎಂಬ ಚರ್ಚೆ ನಡೆಯುತ್ತಿದೆ.

ಈ ಉಪಚುನಾವಣೆ ಜನಸಾಮಾನ್ಯರಿಂದ ಹಿಡಿದು ಮುಖಂಡರವರೆಗೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಕ್ಷೇತ್ರದ ಮೂಲೆ ಮೂಲೆಗಳಲ್ಲಿ ನಡೆಯುತ್ತಿರುವ ಈ ಚರ್ಚೆಯಲ್ಲಿ ಕೆಲವರು ತಮ್ಮ ಗೆಲುವಿನ ಅಭ್ಯರ್ಥಿ ಮತ್ತು ಪಕ್ಷದ ಬಗ್ಗೆ ನೀಡುವ ಸಮರ್ಥನೆಯ ಅಂಶಗಳು ಕುತೂಹಲಕಾರಿಯಾಗಿವೆ.

ಹಿರೇಕೆರೂರ ಕ್ಷೇತ್ರದಲ್ಲಿ ಕಳೆದ ಒಂದೂವರೆ ದಶಕದಿಂದ ಪರಸ್ಪರ ಪೈಪೋಟಿ ನಡೆಸುತ್ತಿದ್ದ ಬಿ.ಸಿ. ಪಾಟೀಲ, ಯು.ಬಿ. ಬಣಕಾರ ಒಂದಾಗಿದ್ದಾರೆ. ಹೀಗಾಗಿ ಈ ಬಾರಿ ಗೆಲುವು ನಮ್ಮದೇ ಆಗಲಿದೆ. ಕಾಂಗ್ರೆಸ್​ಗೆ ಕೆಲ ಬೂತ್​ಗಳಲ್ಲಿ ಏಜೆಂಟ್​ರು ಸಹ ಇರಲಿಲ್ಲ. ಯಡಿಯೂರಪ್ಪ ಅವರ ಪ್ರಭಾವ ಕ್ಷೇತ್ರದಲ್ಲಿ ಬೀರಿದ್ದು, ಅತಿಹೆಚ್ಚು ಮತಗಳು ಬಿಜೆಪಿಗೆ ಬಿದ್ದಿವೆ. ‘ಬಿಸಿಪಿ ಮತ್ ಗೆಲ್ಲೋದು ಗ್ಯಾರಂಟಿ’ ಎಂದು ಬಿಜೆಪಿ ಕಾರ್ಯಕರ್ತರು ಹೇಳುತ್ತಿದ್ದಾರೆ. ‘ಇಲ್ಲಪಾ ಯು.ಬಿ. ಬಣಕಾರ, ಬಿ.ಸಿ. ಪಾಟೀಲ ಒಂದಾದ್ರೂ ಕಾರ್ಯಕರ್ತರು ಒಂದಾಗಿಲ್ಲ. ಒಳಹೊಡೆತ ಜಾಸ್ತಿಯಾಗಿದೆ. ಗೆಲುವು ನಮ್ಮದೇ’ ಎಂದು ಕಾಂಗ್ರೆಸ್​ನವರು ಹೇಳುತ್ತಿದ್ದಾರೆ.

ರಾಣೆಬೆನ್ನೂರ ಕ್ಷೇತ್ರದಲ್ಲಿಯೂ ಇದೇ ಸ್ಥಿತಿಯಿದ್ದು, ಕೊನೆ ಕ್ಷಣದಲ್ಲಿ ಭಾರಿ ಬದಲಾವಣೆಯಾಗಿದೆ. ‘ಗೆಲುವು ನಮ್ಮದೇ ಬೆಟ್ಟಿಂಗ್ ಕಟ್ಟೋರು ಕಟ್ಟಬಹುದು’ ಎಂದು ಬಿಜೆಪಿ ಪರವಾಗಿರುವವರು ಬಹಿರಂಗವಾಗಿ ಹೇಳುತ್ತಿದ್ದಾರೆ. ಕಾಂಗ್ರೆಸ್ ಕಡೆಯವರು ‘ಅದೆಲ್ಲ ಸಾಧ್ಯವೇ ಇಲ್ಲ. ಕೊನೆಕ್ಷಣದಲ್ಲಿ ಏನೇ ಕರಾಮತ್ತು ನಡೆದಿದ್ದರೂ ಜನ ಮಾತ್ರ ಕೋಳಿವಾಡರನ್ನು ಕೈಬಿಟ್ಟಿಲ್ಲ. ಕಟ್ಟಿ ಬೆಟ್ಟಿಂಗ್’ ಎಂದು ಸವಾಲೆಸೆಯುತ್ತಿರುವುದು ಕ್ಷೇತ್ರದಲ್ಲಿ ಕಂಡುಬರುತ್ತಿದೆ.

ಇನ್ನು ತಟಸ್ಥವಾಗಿದ್ದವರು, ‘ಈ ಬಾರಿ ಈಗಲೇ ಏನೂ ಹೇಳೋಕಾಗಲ್ಲ. ಬಹಳ ತುರುಸಿನ ಸ್ಪರ್ಧೆ ನಡೆದಿದೆ. ಕೊನೆಕೊನೆಗೆ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಆಗಿದೆ. ಹೀಗಾಗಿ ಬೆಟ್ಟಿಂಗ್ ಕಟ್ಟೋರು ಲೆಕ್ಕಾಚಾರ ಮಾಡಿ ಕಟ್ಟಬೇಕು’ ಎಂಬುವರ ಸಂಖ್ಯೆಯೂ ಅಧಿಕವಾಗಿದೆ.

ರಾಜಕೀಯ ಮುಖಂಡರು, ಕಾರ್ಯಕರ್ತರು, ಜನಸಾಮಾನ್ಯರು, ಉದ್ಯೋಗಿಗಳು, ಅಧಿಕಾರಿಗಳು, ನೌಕರರು, ವ್ಯಾಪಾರಸ್ಥರು, ಕೂಲಿಕಾರರು ಹೀಗೆ ಎಲ್ಲ ವರ್ಗದ ಜನರಲ್ಲೂ ಚರ್ಚೆಗೆ ಗ್ರಾಸವಾಗಿರುವ ಈ ಚುನಾವಣೆ ಈಗ ಬೆಟ್ಟಿಂಗ್​ಗೆ ಇಂಬು ನೀಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಕೆಲವರು ಇದನ್ನು ದಂಧೆಯನ್ನಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ. ಮೂರು ವರ್ಗದ ಜನರ ಲೆಕ್ಕಾಚಾರವನ್ನು ಅಳೆದು ತೂಗುತ್ತಿರುವ ಬೆಟ್ಟಿಂಗ್ ಗಿರಾಕಿಗಳು, ತಮ್ಮದೇ ಆದ ಲೆಕ್ಕಾಚಾರದಲ್ಲಿ ಲಕ್ಷಾಂತರ ರೂ.ಗಳ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ಗ್ರಾಮದ ಕಟ್ಟೆಯಿಂದ ಹಿಡಿದು ಬಾರ್​ಗಳ ಟೇಬಲ್​ಗಳವರೆಗೆ ವ್ಯಾಪಕವಾಗಿ ನಡೆಯುತ್ತಿದೆ. ಕಿರಾಣಿ ಅಂಗಡಿ, ಪಾನ್​ಅಂಗಡಿ, ಹೋಟೆಲ್, ಬಾರ್​ಗಳು ಬೆಟ್ಟಿಂಗ್​ನ ಪ್ರಮುಖ ಅಡ್ಡೆಗಳಾಗುತ್ತಿವೆ. ಬೆಟ್ಟಿಂಗ್​ನಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಉದ್ಯಮಿಗಳು, ಗುತ್ತಿಗೆದಾರರು ಸಹ ಪಾಲ್ಗೊಳ್ಳುತ್ತಿದ್ದಾರೆ. ಲಕ್ಷಗಟ್ಟಲೆ ನಗದು, ಸೈಟು, ಚಿನ್ನ, ವಾಹನಗಳನ್ನು ಇಡಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಿಂತ ಬಿಜೆಪಿ ಅಭ್ಯರ್ಥಿ ಪರ ಹೆಚ್ಚಿನ ಜನ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂರನೇಯವರ ಮಧ್ಯಸ್ಥಿಕೆ: ಬೆಟ್ಟಿಂಗ್ ಕಟ್ಟುವ ಇಬ್ಬರ ನಡುವೆ ಮೂರನೇ ವ್ಯಕ್ತಿಯೊಬ್ಬರು ಇಬ್ಬರ ಹಣವನ್ನು ಈಗಲೇ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶ ಬಂದ ನಂತರ ಯಾರು ಬೆಟ್ಟಿಂಗ್ ಗೆಲ್ತಾರೆ ಅವರಿಗೆ ಹಣವನ್ನು ಅವರು ನೀಡುತ್ತಾರೆ. ಹೀಗೆ ಮಧ್ಯಸ್ಥಿಕೆ ವಹಿಸುವವರಿಗೂ ಶೇ. 5ರಷ್ಟು ಕಮಿಶನ್ ಸಹ ನೀಡಲಾಗುತ್ತಿದೆ.

ಬೆಟ್ಟಿಂಗ್ ಕಾನೂನುಬಾಹಿರವಾಗಿದೆ. ಇದು ನಮ್ಮ ಗಮನಕ್ಕೆ ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬೆಟ್ಟಿಂಗ್ ನಡೆಸುವವರ ಮೇಲೆ ನಿಗಾ ಇಡಲು ಅಧಿಕಾರಿ, ಸಿಬ್ಬಂದಿಗೆ ಸೂಚಿಸಲಾಗಿದೆ. ಬೆಟ್ಟಿಂಗ್ ನಡೆಸುತ್ತಿರುವ ಮಾಹಿತಿ ದೊರೆತರೆ ಸಾರ್ವಜನಿಕರು ಸಹ ಪೊಲೀಸ್ ಇಲಾಖೆ ಗಮನಕ್ಕೆ ತರಬಹುದು. ಹೆಸರು ಗೌಪ್ಯವಾಗಿಟ್ಟು ಬೆಟ್ಟಿಂಗ್​ಕೋರರ ಮೇಲೆ ಕ್ರಮ ಕೈಗೊಳ್ಳಲಾಗುವುದು.
| ಕೆ.ಜಿ. ದೇವರಾಜ್, ಎಸ್​ಪಿ ಹಾವೇರಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...