ಉಚಿತ ಬಸ್ ಪಾಸ್ ಕೊಡಿ

ಯಾದಗಿರಿ: ಪ್ರಸಕ್ತ ಶೈಕ್ಷಣಿಕ ವರ್ಷ ರಾಜ್ಯದ ಎಲ್ಲ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವಂತೆ ಸಕರ್ಾರದ ಮೇಲೆ ಒತ್ತಡ ಹೇರಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾಥರ್ಿ ಪರಿಷತ್ (ಎಬಿವಿಪಿ) ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಶಾಸಕ ವೆಂಕಟರಡ್ಡಿ ಮುದ್ನಾಳ್ ಅವರಿಗೆ ಮನವಿಪತ್ರ ಸಲ್ಲಿಸಿತು.
ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸಕರ್ಾರ 2018-19ರ ಬಜೆಟ್ನಲ್ಲಿ ಪರಿಶಿಷ್ಟ ಜಾತಿ, ಪಂಗಡ ಸೇರಿದಂತೆ ರಾಜ್ಯದ ಎಲ್ಲ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ಈಗಿನ ಸಮ್ಮಿಶ್ರ ಸಕರ್ಾರ ಹಿಂದಿನ ಸಕರ್ಾರದ ಯೋಜನೆ ಜಾರಿಗೊಳಿಸದೆ ಕೇವಲ ಎಸ್ಸಿ, ಎಸ್ಟಿ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನೀಡಿ ಉಳಿದವರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಪ್ರಸಕ್ತ ವರ್ಷ 22 ಲಕ್ಷಕ್ಕೂ ಹೆಚ್ಚು ವಿದ್ಯಾಥರ್ಿಗಳು ಬಸ್ ಪಾಸ್ಗೆ ಅಜರ್ಿ ಸಲ್ಲಿಸಿದ್ದಾರೆ. ಗ್ರಾಮೀಣ ಭಾಗದ ಬಡ ವಿದ್ಯಾಥರ್ಿಗಳಿಗೆ ಉಚಿತ ಬಸ್ ಪಾಸ್ ನೀಡುವುದರಿಂದ ಶಾಲಾ-ಕಾಲೇಜುಗಳಿಗೆ ಹೋಗಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಉಚಿತ ಬಸ್ ಪಾಸ್ ವಿತರಣೆಯಿಂದ ರಾಜ್ಯದ ಬೊಕ್ಕಸಕ್ಕೆ ಹೆಚ್ಚು ಹೊರೆಯಾಗುವುದಿಲ್ಲ ಎಂದು ಗಮನ ಸೆಳೆದರು.

Leave a Reply

Your email address will not be published. Required fields are marked *