ಹರಪನಹಳ್ಳಿ: ಭರತ ಹುಣ್ಣಿಮೆ ಪ್ರಯುಕ್ತ ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಿ ದರ್ಶನಕ್ಕೆ ಬುಧವಾರ ಅಪಾರ ಭಕ್ತರು ಅಗಮಿಸಿದ್ದರು. ದಾವಣಗೆರೆ, ಹಾವೇರಿ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ಚಿತ್ರದುರ್ಗ ಸೇರಿದಂತೆ ನಾಡಿನ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.
ಉತ್ಸವಾಂಬ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಮಲ್ಲಪ್ಪ ಮಾತನಾಡಿ, ಭಕ್ತಾದಿಗಳಿಗೆ ಮೂಲ ಸೌಕರ್ಯಗಳ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ಸಿಪಿಐ ನಾಗರಾಜ್ ಕಮ್ಮಾರ್ ನೇತೃತ್ವದ ತಂಡ ಮೂರು ದಿನ ಬಂದೋಬಸ್ತ್ ವ್ಯವಸ್ಥೆ ಮಾಡಿತ್ತು.