ಉತ್ತಮ ಆಡಳಿತ ನಡೆಸಿದ ಕೀರ್ತಿ ಕೃಷ್ಣರದ್ದು

12bhr 1 krishna

ಬಾಳೆಹೊನ್ನೂರು: ರಾಜ್ಯದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಉತ್ತಮ ಆಡಳಿತ ನಡೆಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ್ ಹೇಳಿದರು.
ಪಟ್ಟಣದ ಬಿ.ಕಣಬೂರು ಗ್ರಾಪಂಯ ರಾಜೀವ್‌ಗಾಂಧಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿ, ಸಿಲಿಕಾನ್ ಸಿಟಿಯ ಯೋಜನೆ ರೂಪಿಸಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದರು ಎಂದರು.
ಎಂಎಡಿಬಿ ಮಾಜಿ ಅಧ್ಯಕ್ಷೆ ಬಿ.ಸಿ.ಗೀತಾ ಮಾತನಾಡಿ, ಐಟಿಬಿಟಿ ಮೂಲಕ ಬೆಂಗಳೂರನ್ನು ವಿಶ್ವದ ಗಮನ ಸೆಳೆದು ಉದ್ಯೋಗ ಸೃಷ್ಟಿಸಿದ್ದ ಮಹಾನ್ ವ್ಯಕ್ತಿ. ಸರಳ ಸಜ್ಜನಿಕೆಯ ವ್ಯಕ್ತಿ ನಮ್ಮ ಮನೆಗೆ ಬಂದಿದ್ದು ಇನ್ನು ಹಸಿರಾಗಿದೆ ಎಂದರು.
ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಯಜ್ಞಪುರುಷಭಟ್ ಮಾತನಾಡಿ, ರಾಜ್ಯದಲ್ಲಿ ಮುಂದುವರೆದ ಜನಾಂಗವೆಂಬ ಹಣೆಪಟ್ಟಿ ಕಟ್ಟಿಕೊಂಡ ಹಾಗೂ ಮೀಸಲಾತಿ ಇಲ್ಲದ ಬ್ರಾಹ್ಮಣ ಸಮುದಾಯದ ಯುವಕರಿಗೆ ಐಟಿಬಿಟಿ ಮೂಲಕ ಬದುಕನ್ನು ಕಟ್ಟಿಕೊಟ್ಟ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಬಿಸಿಯೂಟದ ಪರಿಕಲ್ಪನೆ ಬಗ್ಗೆ ಉಲ್ಲೇಖಿಸಿ ಮಾತನಾಡಿ, ಬೆಳಗಿನ ಹೊತ್ತು ಕಾರವಾರಕ್ಕೆ ಹೋಗುವಾಗ ದಾರಿಯಲ್ಲಿ ಹೋಗುತ್ತಿರುವ ವಿದ್ಯಾರ್ಥಿಯನ್ನು ಕಂಡು ಕಾರು ನಿಲ್ಲಿಸಿ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ನಂತರ ಸಂಪುಟ ಸಭೆಯಲ್ಲಿ ಚರ್ಚಿಸಿ ಬಿಸಿಯೂಟ ಯೋಜನೆಯನ್ನು ಜಾರಿಗೊಳಿಸಿದ್ದು ಶ್ಲಾಘನೀಯವಾಗಿದೆ ಎಂದರು.
ಪ್ರಮುಖರಾದ ಟಿ.ಎಂ.ಉಮೇಶ್, ಕೆ.ಟಿ.ಗೋವಿಂದೇಗೌಡ, ಕೆ.ಎನ್.ಮರಿಗೌಡ, ಜಿಪಂ ಮಾಜಿ ಸದಸ್ಯರಾದ ಮಹಮ್ಮದ್ ಇ್ತೆಕಾರ್ ಆದಿಲ್, ಚಂದ್ರಮ್ಮ, ಜಿ.ಎಂ.ನಟರಾಜ್, ಮಹಮ್ಮದ್ ಹನ್ೀ, ಸದಾಶಿವ ಆಚಾರ್ಯ, ಮಧುಸೂದನ್, ಎಂ.ಎಸ್.ಅರುಣೇಶ್, ಜಾನಕಿ, ಮಹಮ್ಮದ್ ಜುಹೇಬ್, ಶಶಿಕಲಾ, ಇಬ್ರಾಹಿಂ ಶಾಫಿ, ಎಂ.ಜೆ.ಮಹೇಶ್ ಆಚಾರ್ಯ ಮತ್ತಿತರರಿದ್ದರು.

Share This Article

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆ ಕುಡಿದರೆ ಏನಾಗುತ್ತೆ ಗೊತ್ತಾ? Coconut Oil Benefits

Coconut Oil Benefits:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಆಹಾರವೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.…

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…