More

  ಉತ್ಸವಕ್ಕೆ ತಹಸೀಲ್ದಾರ್ ನರಸಿಂಹಮೂರ್ತಿ ಚಾಲನೆ


  ಮದ್ದೂರು: ಹನುಮ ಜಯಂತಿ ಅಂಗವಾಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಹನುಮ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿತು.

  ಹೊಳೆ ಆಂಜನೇಯಸ್ವಾಮಿ ದೇವಾಲಯ: ಪಟ್ಟಣದ ಪುರಾಣ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಲ್ಲಿ ಹನುಮದ್ ವ್ರತ ಅಂಗವಾಗಿ ಮುಂಜಾನೆಯಿಂದಲೇ ದೇವರಿಗೆ ಮಧು, ಪಂಚಾಮೃತ ಅಭಿಷೇಕ, ವಿಶೇಷವಾಗಿ ಹೂವಿನ ಅಲಂಕಾರ, ಮಹಾ ಮಂಗಳಾರತಿ ನೆರವೇರಿತು. ಮಧ್ಯಾಹ್ನ ದೇಗುಲದ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಮ, ಲಕ್ಷ್ಮಣ, ಸೀತಾ ಹಾಗೂ ಆಂಜನೇಯರ ಉತ್ಸವಕ್ಕೆ ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಚಾಲನೆ ನೀಡಿದರು. ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆ ಹಾಗೂ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

  ಗಣ್ಯರದಿಂದ ವಿಶೇಷ ಪೂಜೆ: ಹನುಮದ್ ವ್ರತದ ಅಂಗವಾಗಿ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಆಗಮಿಸಿ ಮೂಲ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀಗಳು ದೇವಾಲಯಕ್ಕೆ ಆಗಮಿಸಿದಾಗ ದೇಗುಲದ ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ನೇತೃತ್ವದಲ್ಲಿ ಪೂರ್ಣಕುಂಭ ಸ್ವಾಗತ ನೀಡಿ ವಿಶೇಷವಾಗಿ ಅಭಿನಂದಿಸಲಾಯಿತು. ಇದೇ ವೇಳೆ ಶ್ರೀಗಳು ಭಕ್ತರಿಗೆ ಅಶೀರ್ವಚನ ನೀಡಿದರು. ದೇಗುಲದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

  ಹೈಕೋರ್ಟ್ ನ್ಯಾಯಾಧೀಶ ಇಂದ್ರೇಶ್, ಶಾಸಕ ಡಿ.ಸಿ.ತಮ್ಮಣ್ಣ, ಮನ್‌ಮುಲ್ ವ್ಯವಸ್ಥಾಪಕ ನಿದೇಶಕ ಡಾ.ಮಂಜೇಶ್, ಮನ್‌ಮುಲ್ ನಿರ್ದೇಶಕಿ ರೂಪ, ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ ಸೇರಿದಂತೆ ಹಲವಾರು ಗಣ್ಯರು ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

  ಜನವರಿ ಅಂತ್ಯಕ್ಕೆ ರಾಮಮಂದಿರ ಉದ್ಘಾಟನೆ: ಮದ್ದೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ರಾಮಮಂದಿರ 2024ರ ಜನವರಿಯಲ್ಲಿ ಸಂಕ್ರಾಂತಿ ನಂತರ ಲೋಕಾರ್ಪಣೆಗೊಳ್ಳಲಿದೆ ಎಂದು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು.

  ಪಟ್ಟಣದ ಪುರಾಣ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಲ್ಲಿ ಹನುಮದ್ ವ್ರತದ ಅಂಗವಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರದೊಂದಿಗೆ ಮಾತನಾಡಿದ ಅವರು, ಶ್ರೀರಾಮಂದಿರ ಸುಸಜ್ಜಿತ ಹಾಗೂ ಸುಂದರವಾಗಿ ನಿರ್ಮಾಣವಾಗುತ್ತಿದ್ದು, ಜನವರಿ ಅಂತ್ಯಕ್ಕೆ ರಾಮಮಂದಿರ ಉದ್ಘಾಟನೆಗೊಳ್ಳುವ ಮೂಲಕ ಕೋಟ್ಯಂತರ ರಾಮ ಭಕ್ತರಿಗೆ ಸಂತೋಷ ತರಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts