ಹೊಸಪೇಟೆ: ಶೈಕ್ಷಣ ಕ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ವಿಜಯನಗರ ಜಿಲ್ಲಾಕೇಂದ್ರ ಸೇರಿದಂತೆ ವಿವಿಧ ಕಡೆಯ ಪರೀಕ್ಷಾ ಕೇಂದ್ರಗಳಲ್ಲಿ 20297 ವಿದ್ಯಾರ್ಥಿಗಳು ಉತ್ಸಾಹದಿಂದ ಹಾಜರಾಗಿ ಮೊದಲ ದಿನದ ಪರೀಕ್ಷೆ ಬರೆದರು.
ಮಾ.21 ರಿಂದ ಏ.04 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 71 ಕೇಂದ್ರಗಳಲ್ಲಿ ಮೊದಲ ದಿನವೇ ಪ್ರಥಮ ಭಾಷಾ ವಿಷಯ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಕನ್ನಡ ಮಾಧ್ಯಮದ ಬಹುತೇಕರಿಗೆ ಕನ್ನಡ ಪರೀಕ್ಷೆ. ಉಳಿದಂತೆ ಆಯಾ ಮಾಧ್ಯಮಗಳ ವಿಷಯದ ಪರೀಕ್ಷೆ ನಡೆಯಿತು. 20763 ವಿದ್ಯಾರ್ಥಿಗಳು ನೋಂದಾಣ ಆಗಿದ್ದರು. ಈ ಪೈಕಿ 20297 ವಿದ್ಯಾರ್ಥಿಗಳು ಹಾಜರಿದ್ದರು. 466 ವಿದ್ಯಾರ್ಥಿಗಳು ಗೈರು ಹಾಜರಿದ್ದರು. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯಲು ಬೇಕಾದ ಎಲ್ಲ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಯಿತು. ಪರೀಕ್ಷ ಕೇಂದ್ರಗಳ ಮುಂದೆ ಪೊಷಕರು ತಮ್ಮ ಮಕ್ಕಳ ನೋಂದಣ ಸಂಖೆ ಹುಡುಕಿ ಪಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದರು. ಕೇಂದ್ರದಿAದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಜೆರಾಕ್ಸ್ ಅಂಗಡಿ ಬಂದ್ ಆಗಿದ್ದವು. ವಿದ್ಯಾರ್ಥಿ, ಪರೀಕ್ಷಾ ನಿರ್ವಹಣೆ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಒಳಗೆ ಪ್ರವೇಶ ಇರಲಿಲ್ಲ. ಹಲವು ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಿದರು.
ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಮಾಡಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಓಆರ್‌ಎಸ್, ಪ್ರಥಮ ಚಿಕಿತ್ಸೆ ಕಿಟ್ ಇರಿಸಿಕೊಳ್ಳಲು ಸೂಚಿಸಲಾಗಿದೆ. ಕಳೆದ ವರ್ಷದಿಂದ ಪ್ರತಿ ಕೊಠಡಿಯಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ವೆಬ್ ಕಾಸ್ಟಿಂಗ್‌ನಲ್ಲಿ 3 ಹಂತದಲ್ಲಿ ವೀಕ್ಷಣೆ ಮಾಡಲಾಗುತ್ತಿದೆ. ಈ ಬಾರಿ ಕೃತಕ ತಂತ್ರಜ್ಞಾನ ಬಳಸಿ ಫೇಸ್ ಡಿಟೆಕ್ಷನ್ ಮಾಡಲಾಗುತ್ತಿದೆ. ಆದ್ದರಿಂದ ಎಲ್ಲ ವಿದ್ಯಾರ್ಥಿಗಳು ಕೊಠಡಿಯಲ್ಲಿ ಶಿಸ್ತನ್ನು ಕಾಪಾಡಿಕೊಂಡಿದ್ದಾರೆ. ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಸೂಸುತ್ರವಾಗಿ ನಡೆಯಿತು.