Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಉದ್ಯಮಿ ಸುನೀಲ್ ಚಾತ್ರ ನಿಧನ

Saturday, 15.09.2018, 2:03 AM       No Comments

ಕುಂದಾಪುರ: ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಹಳ್ಳಿಹೊಳೆ ಬರೆಗುಂಡಿ ಸಚ್ಚಿದಾನಂದ ಚಾತ್ರ ಅವರ ಪುತ್ರ, ಶ್ರೀ ದುರ್ಗಾಂಬಾ ಮೋಟಾರ್ಸ್ ಆಡಳಿತ ಪಾಲುದಾರ ಸುನೀಲ್ ಚಾತ್ರ(42) ಶುಕ್ರವಾರ ಮಧ್ಯಾಹ್ನ ಚೆನ್ನೈನ ಕರೂರು ಬಳಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಪುತ್ರಿ, ತಂದೆ, ತಾಯಿ ಹಾಗೂ ಸಹೋದರ, ಸಹೋದರಿ ಇದ್ದಾರೆ.

ವ್ಯವಹಾರ ನಿಮಿತ್ತ ಚೆನ್ನೈಗೆ ತೆರಳಿದ್ದ ಅವರು ಅಲ್ಲಿಂದ ಬಸ್ ಬಾಡಿ ನಿರ್ಮಾಣ ಮಾಡುವ ಕರೂರಿಗೆ ಪಜೆರೋ ಸ್ಪೋರ್ಟ್ಸ್ ಕಾರಿನಲ್ಲಿ ಹೊರಟಿದ್ದರು. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿ, ಸುನೀಲ್ ಚಾತ್ರ ಸ್ಥಳದಲ್ಲೇ ಅಸುನೀಗಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹ ಭಾನುವಾರ ಹುಟ್ಟೂರಿಗೆ ಬರಲಿದ್ದು, ಅಂತ್ಯ ಸಂಸ್ಕಾರ ನಡೆಯಲಿದೆ.

ಖ್ಯಾತ ಉದ್ಯಮಿ: ಸುನೀಲ್ ಚಾತ್ರ ಅವರು ಛತ್ತೀಸ್​ಗಢ, ಪಂಜಾಬ್, ಹರ್ಯಾಣದಲ್ಲೂ ಸಾರಿಗೆ ಉದ್ಯಮ ಆರಂಭಿಸಿದ್ದರು. ಛತ್ತೀಸ್​ಗಢದ ಗ್ರಾಮೀಣ ಪ್ರದೇಶಗಳಿಗೆ ಅವರು ಆರಂಭಿಸಿದ ಸಾರಿಗೆ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಎರಡು ತಿಂಗಳ ಹಿಂದೆ ಗಜಾನನ ಮೋಟಾರ್ಸ್ ಕಂಪನಿ ಖರೀದಿಸಿದ್ದು, ಕಳೆದ ವಾರವಷ್ಟೇ ತನ್ನ 41ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

ಸಂಕೇಶ್ವರರ ಕಂಬನಿ

ಸುನೀಲ್ ಚಾತ್ರ ಅವರ ಅಕಾಲಿಕ ನಿಧನಕ್ಕೆ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕ ಆನಂದ ಸಂಕೇಶ್ವರ ಕಂಬನಿ ಮಿಡಿದಿದ್ದಾರೆ. ಭಗವಂತ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ, ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಕೋರಿದ್ದಾರೆ.

Leave a Reply

Your email address will not be published. Required fields are marked *

Back To Top