More

  ಉಪ್ಪಾರ ಮಹಾಸಭಾದಿಂದ ಹುಬ್ಬಳ್ಳಿಯಲ್ಲಿ ಪ್ರತಿಭಾ ಪುರಸ್ಕಾರ 

  ದಾವಣಗೆರೆ: ಉಪ್ಪಾರ ಮಹಾಸಭಾದಿಂದ ಅಕ್ಟೋಬರ್ 1 ರಂದು ಹುಬ್ಬಳ್ಳಿಯ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ರಾಜ್ಯಾಧ್ಯಕ್ಷ ವಿಷ್ಣು ರಾ ಲಾತೂರ್ ಹೇಳಿದರು.
  ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮಾಜದ 2 ಸಾವಿರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಹಾಗೂ ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಶಾಸಕ ಪುಟ್ಟರಂಗಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
  ಸಮಾಜದ ಮಠಾಧೀಶರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಚಿವರಾದ ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಮಹೇಶ್ ತೆಂಗಿನಕಾಯಿ, ಅರವಿಂದ ಬೆಲ್ಲದ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
  ಚಾಮರಾಜನಗರ ಕ್ಷೇತ್ರದಿಂದ 4ನೇ ಬಾರಿ ಜಯಗಳಿಸಿರುವ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಸರ್ಕಾರಕ್ಕೆ ಹಕ್ಕೊತ್ತಾಯ ಮಾಡಲಾಗುವುದು ಎಂದರು.
  ಪ್ರತಿಭಾ ಪುರಸ್ಕಾರಕ್ಕೆ ಈಗಾಗಲೇ ಆನ್‌ಲೈನ್ ಅರ್ಜಿ ಸ್ವೀಕರಿಸಲಾಗಿದ್ದು ನೇರವಾಗಿಯೂ ನೋಂದಾಯಿಸಬಹುದು. ಕಾರ್ಯಕ್ರಮಕ್ಕೆ ಬರುವ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್, ಜೆರಾಕ್ಸ್ ಪ್ರತಿ ತರಬೇಕು ಎಂದು ಹೇಳಿದರು.
  ಮಹಾಸಭಾ ಪ್ರಧಾನ ಕಾರ್ಯದರ್ಶಿ ಭರತ್ ಎಸ್. ಮೈಲಾರ್, ಈಶ್ವರ್ ಶಿರಕೋಳ, ಮಂಜುನಾಥ ಉಪ್ಪಾರ, ರಾಮಕೃಷ್ಣ ಬಬ್ಬಲಿ ಸುದ್ದಿಗೋಷ್ಠಿಯಲ್ಲಿದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts