21.4 C
Bangalore
Wednesday, November 13, 2019

ಉರ್ದು ಶಾಲೆಗಳ ಅಭಿವೃದ್ಧಿಗೆ ಕ್ರಮ ಅಗತ್ಯ

Latest News

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹೇಳಿಕೆಗೆ ಆಕ್ರೋಶ

ಗಂಗಾವತಿ: ಸಂವಿಧಾನ ರಚನೆ ಕುರಿತು ವಿವಾದಾತ್ಮಾಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ...

ಕೂಲಿ ಲೈನ್ ವಾಸಿಗಳಿಗೆ ನಿವೇಶನ ಕಲ್ಪಿಸಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪರಿಶಿಷ್ಟ ಪಂಗಡ ಮತ್ತು ಜಾತಿಗೆ ಸೇರಿದ ಕಾಫಿ ತೋಟಗಳ ಲೈನ್​ವುನೆ, ಬಾಡಿಗೆ ಮನೆ ನಿವಾಸಿಗಳಿಗೆ ಮನೆ ನಿವೇಶನ ಹಾಗೂ...

ಶಾರದಾ ಪೀಠದಲ್ಲಿ ಲಕ್ಷ ದೀಪೋತ್ಸವ

ಶೃಂಗೇರಿ: ಕಾರ್ತಿಕ ಹುಣ್ಣಿಮೆ ಅಂಗವಾಗಿ ಮಂಗಳವಾರ ಶ್ರೀಮಠದಲ್ಲಿ ಲಕ್ಷದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಸಾಂಪ್ರದಾಯಿಕ ಪೂಜೆ, ಶ್ರೀ ರುದ್ರಯಾಗದ ಪೂರ್ಣಾಹುತಿ ಮತ್ತಿತರೆ ಧಾರ್ವಿುಕ ಕಾರ್ಯಕ್ರಮಗಳು...

ಜನವರಿಗೆ ಸೊಲ್ಲಾಪುರದಲ್ಲಿ ಗುರು ಸಿದ್ಧರಾಮ ಜಯಂತಿ

ಅಜ್ಜಂಪುರ: ಜನವರಿಯಲ್ಲಿ ಸೊಲ್ಲಾಪುರದಲ್ಲಿ ನಡೆಯಲಿರುವ ಕರ್ಮಯೋಗಿ ಗುರು ಸಿದ್ಧರಾಮ ಶಿವಯೋಗಿಗಳ ಜಯಂತ್ಯುತ್ಸವಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ...

ಬಿಸಿಯೂಟ ನೌಕರರ ಧರಣಿ ಅಂತ್ಯ

ಮಂಡ್ಯ: ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಬಿಸಿಯೂಟದ ಟೆಂಡರನ್ನು ಇಸ್ಕಾನ್ ಸಂಸ್ಥೆಗೆ ಕೊಟ್ಟಿರುವುದನ್ನು ವಿರೋಧಿಸಿ ನಗರದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ...

ಮುಳಬಾಗಿಲು: ತಾಲೂಕಿನಲ್ಲಿ ಸರ್ಕಾರಿ ಉರ್ದು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದರೂ ಶೈಕ್ಷಣಿಕ ಸಾಧನೆ ಇಳಿಮುಖವಾಗುತ್ತಿದೆ. ಇದನ್ನು ಶಿಕ್ಷಕರು ಗಂಭೀರವಾಗಿ ಪರಿಗಣಿಸಿ ಉರ್ದು ಶಾಲೆಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಬಿಇಒ ಪಿ.ಸೋಮೇಶ್ ತಿಳಿಸಿದರು.

ನಗರದ ಡಿವಿಜಿ ಗಡಿಕನ್ನಡ ಭವನದಲ್ಲಿ ಬುಧವಾರ ಕರ್ನಾಟಕ ಉರ್ದು ಅಕಾಡೆಮಿ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಮುಳಬಾಗಿಲು ತಾಲೂಕುಮಟ್ಟದ ಉರ್ದು ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಉರ್ದು ಶಾಲೆ ಬಗ್ಗೆ ಪಾಲಕರಿಂದ ದೂರು ಬರುತ್ತಿವೆ. ಶಿಕ್ಷಕರು ಶಾಲೆಗೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಮಕ್ಕಳ ಕಲಿಕಾ ಪ್ರಮಾಣ ಕುಂಠಿತವಾಗುತ್ತಿರುವುದು ಆತಂಕಕಾರಿ ವಿಷಯ. ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕೆ ಲಕ್ಷಾಂತರ ರೂಪಾಯಿ ನೀಡುತ್ತಿದೆ. ಶಿಕ್ಷಕರು ಇದನ್ನರಿತು ಜವಾಬ್ದಾರಿ ನಿರ್ವಹಿಸಿದಾಗ ಅಭಿವೃದ್ಧಿ ಸಾಧ್ಯ ಎಂದರು.

ಕರ್ನಾಟಕ ಉರ್ದು ಅಕಾಡೆಮಿ ಅಧ್ಯಕ್ಷ ಮುಬೀನ್ ಮುನಾವರ್ ಮಾತನಾಡಿ, ರಾಜ್ಯದಲ್ಲಿರುವ ಸರ್ಕಾರಿ ಉರ್ದು ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಿದೆ, ಉರ್ದು ಭಾಷೆಯೊಂದಿಗೆ ಇತರ ಪಠ್ಯ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಪಾಠ ಪ್ರವಚನ ಮಾಡಬೇಕು. ಉರ್ದು ಭಾಷೆ, ಸಾಹಿತ್ಯವನ್ನು ಪ್ರಾಥಮಿಕ ಶಿಕ್ಷಣದಿಂದಲೇ ನೀಡಬೇಕು ಎಂದರು.

ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ.ಜಗನ್ನಾಥ್, ತಾಲೂಕು ಗೌರವಾಧ್ಯಕ್ಷ ಎನ್.ಶಿವಣ್ಣ, ಅಧ್ಯಕ್ಷ ಎನ್.ರೆಡ್ಡಪ್ಪ, ಶಿಕ್ಷಕರ ಸಂಘದ ಪ್ರತಿನಿಧಿಗಳಾದ ಎಚ್.ವೆಂಕಟಗಿರಿಯಪ್ಪ, ಎಚ್.ಭಾಸ್ಕರ್​ರೆಡ್ಡಿ, ನೌಕರರ ಸಂಘದ ಪ್ರತಿನಿಧಿ ಎನ್.ಆನಂದ್, ದೈಹಿಕ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ರಹೀಮ್ ಶರೀಫ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಹಬಾಜ್ ಖಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪಿ.ವಾಜೀದ್, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಮೊಹಮದ್ ಜಬೀವುಲ್ಲ, ರೋಷನ್ ಎಜುಕೇಷನಲ್ ಹೆಲ್ತ್ ಕೇರ್ ಟ್ರಸ್ಟ್​ನ ಅಧ್ಯಕ್ಷ ಎಂ.ಜಬೀವುಲ್ಲಾ, ನಗರಸಭೆ ಮಾಜಿ ಅಧ್ಯಕ್ಷ ಜಹೀರ್ ಮತ್ತಿತರರು ಇದ್ದರು.

- Advertisement -

Stay connected

278,453FansLike
559FollowersFollow
606,000SubscribersSubscribe

ವಿಡಿಯೋ ನ್ಯೂಸ್

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...

VIDEO: ದುರ್ಗಾಪೂಜಾ ಥೀಮ್​...

ಕೋಲ್ಕತ: ತೃಣಮೂಲ ಕಾಂಗ್ರೆಸ್​ನಿಂದ ನೂತನವಾಗಿ ಆಯ್ಕೆಯಾದ ಸಂಸದೆಯರಾದ ನುಸ್ರತ್ ಜಹಾನ್​ ಹಾಗೂ ಮಿಮಿ ಚಕ್ರಬರ್ತಿ ದುರ್ಗಾಪೂಜಾ ಹಾಡಿಗೆ ಮನಮೋಹಕವಾಗಿ ನೃತ್ಯ ಮಾಡಿದ್ದು ವಿಡಿಯೋ ಭರ್ಜರಿ ವೈರಲ್​ ಆಗಿದೆ. ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರುವ ಈ...