18.1 C
Bangalore
Saturday, December 7, 2019

ಉ.ಕ.ಮೀನುಗಾರರು ಮಲ್ಪೆಗೆ ವಿಮುಖ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

<ತಿಂಗಳು ಕಳೆದರೂ ದೂರವಾಗದ ಆತಂಕ * ಆತ್ಮವಿಶ್ವಾಸ ಹೆಚ್ಚಿಸುತ್ತಿರುವ ಮುಖಂಡರು>

ಉಡುಪಿ: ಸುವರ್ಣ ತ್ರಿಭುಜ ಬೋಟು ಸಹಿತ ನಾಪತ್ತೆಯಾದ 7 ಮೀನುಗಾರರ ಪೈಕಿ ಐವರು ಉತ್ತರ ಕನ್ನಡ ಜಿಲ್ಲೆಯವರು. ಒಂದು ತಿಂಗಳು ಕಳೆದರೂ, ಅವರ ಸುಳಿವು ಲಭಿಸಿದ ಕಾರಣ ಮೀನುಗಾರಿಕೆಗೆ ತೆರಳಲು ಉ.ಕ.ದಿಂದ ಮೀನುಗಾರರು ಮಲ್ಪೆಗೆ ಬರುತ್ತಿಲ್ಲ. ಆತಂಕ ದೂರವಾಗದಿರುವುದೇ ಇದಕ್ಕೆ ಕಾರಣ ಎನ್ನುತ್ತಾರೆ ಮೀನುಗಾರ ಮುಖಂಡರು. ]

ಮಲ್ಪೆ ಬಂದರಿನ ಮೀನುಗಾರಿಕೆ ಬೋಟುಗಳಲ್ಲಿ ಹೊನ್ನಾವರ, ಕುಮಟಾ, ಭಟ್ಕಳದ ಶೇ.60 ಮೀನುಗಾರರು ಕಲಾಸಿಗಳಾಗಿ, ತಾಂಡೇಲರಾಗಿ ಕಾರ್ಯನಿರ್ವಹಿಸುತ್ತಾರೆ. ಬಹುತೇಕ ಆಳ ಸಮುದ್ರ ಬೋಟುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರೇ ಅಧಿಕ. ನಾಪತ್ತೆಯಾದವರು ಖಂಡಿತ ವಾಪಸ್ ಬರುತ್ತಾರೆ ಎಂದು ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಿದ್ದೇವೆ ಎನ್ನುತ್ತಾರೆ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಮುಖಂಡರು.

ಮಲ್ಪೆಯಲ್ಲಿ ಎರಡು ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಕೆಲವರಷ್ಟೇ ಬಂದಿದ್ದಾರೆ. ಇದುವರೆಗೆ ಹಂತಹಂತವಾಗಿ 350 ಬೋಟುಗಳು ಮೀನುಗಾರಿಕೆ ತೆರಳಿದ್ದು, ಮಂಗಳವಾರ ರಾತ್ರಿ 150 ಬೋಟುಗಳು ತೆರಳಲಿವೆ ಎಂದು ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ತಿಳಿಸಿದ್ದಾರೆ.

ಮನೆಯಲ್ಲಿ ಕಣ್ಣೀರು: ನಾಪತ್ತೆಯಾದವರಲ್ಲಿ ಕುಮಟಾ ನಿವಾಸಿಗಳಾದ ಲಕ್ಷ್ಮಣ್, ಸತೀಶ್, ಭಟ್ಕಳ ನಿವಾಸಿಗಳಾದ ಹರೀಶ್, ರಮೇಶ್, ಹೊನ್ನಾವರ ಮಂಕಿಯ ನಿವಾಸಿ ರವಿ ತೀರಾ ಬಡತನ ಹಿನ್ನೆಲೆಯವರು. ಕುಟುಂಬಗಳಿಗೆ ಅವರೇ ಆಧಾರವಾಗಿದ್ದರು. 5 ಕುಟುಂಬಗಳು ಮನೆಯಲ್ಲಿ ಸರಿಯಾಗಿ ಅಡುಗೆಯನ್ನು ಮಾಡುತ್ತಿಲ್ಲ, ಊಟ ಮಾಡಲು ಕೇಳುತ್ತಿಲ್ಲ ಎನ್ನುತ್ತಾರೆ ಸ್ಥಳೀಯ ಮೀನುಗಾರರು.

ಸ್ಪಂದಿಸದ ಕೇಂದ್ರ ಸಚಿವ: ನಮ್ಮ ಜಿಲ್ಲೆಯ ಐವರು ಮೀನುಗಾರರು ನಾಪತ್ತೆಯಾಗಿದ್ದಾರೆ. ಉಡುಪಿ ಮಲ್ಪೆಯ ಇಬ್ಬರೂ ಸೇರಿದ್ದಾರೆ. ಇದೊಂದು ಗಂಭೀರ ಪ್ರಕರಣ. ಆದರೆ, ಜಿಲ್ಲೆಯ ಸಂಸದ, ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗ್ಡೆ ಇದನ್ನು ಗಂಭಿರವಾಗಿ ಪರಿಗಣಿಸಿದಂತಿಲ್ಲ ಎಂಬುದು ಉತ್ತ ರ ಕನ್ನಡ ಜಿಲ್ಲೆ ಮೀನುಗಾರರ ಆರೋಪ. ಮೀನುಗಾರರ ಪತ್ತೆಗೆ ಉಡುಪಿ, ದ.ಕ ಜಿಲ್ಲೆಯ ಸಂಸದರು ಕೇಂದ್ರದ ಮೇಲೆ ಸಾಕಷ್ಟು ಒತ್ತಡ ಹೇರಲು ಶ್ರಮಿಸಿದ್ದಾರೆ. ನಮ್ಮ ಜಿಲ್ಲೆಯ ಸಂಸದರು ನಾಪತ್ತೆಯಾದ ಮೀನುಗಾರರ ಮನೆಗೂ ಭೇಟಿ ನೀಡಿಲ್ಲ ಎಂದು ಜಿಲ್ಲೆಯ ಮೀನುಗಾರ ಮುಖಂಡ ಗಣಪತಿ ಮಾಂಗ್ರೆ ಬೇಸರ ವ್ಯಕ್ತಪಡಿಸಿದರು.

ದೊಡ್ಡ ಹೋರಾಟದತ್ತ  ಉ.ಕ.ಮೀನುಗಾರರು:ಇಷ್ಟು ದಿನ ಕಾದಿದ್ದೇವೆ, ಇನ್ನೊಂದು ಮಟ್ಟದ ದೊಡ್ಡ  ಹೋರಾಟಕ್ಕೆ ಕರಾವಳಿ ಮೀನುಗಾರರು ಅಣಿಯಾಗುತ್ತೇವೆ. ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಳ ಸಮುದ್ರ ಮೀನುಗಾರಿಕೆ ಆರಂಭವಾಗಿದ್ದು, ಎಲ್ಲ ಬೋಟುಗಳು ಮೀನುಗಾರಿಕೆ ನಡೆಸುತ್ತ, ಶೋಧ ಕಾರ್ಯದಲ್ಲಿ ತೊಡಗಿವೆ. ಮಲ್ಪೆಯಲ್ಲಿ ನಮ್ಮ ಜಿಲ್ಲೆಯ ಹೆಚ್ಚಿನವರು ಕೆಲಸ ಮಾಡುತ್ತಾರೆ, ಆತಂಕ ನಿವಾರಣೆಯಾಗಿಲ್ಲ ಹೀಗಾಗಿ ಸಾಕಷ್ಟು ಮೀನುಗಾರ ಕಾರ್ಮಿಕರು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಉ.ಕ.ಜಿಲ್ಲೆ ಮೀನುಗಾರ ಮುಖಂಡ ಗಣಪತಿ ಮಾಂಗ್ರೆ ಹೇಳಿದ್ದಾರೆ.

ನಾಪತ್ತೆಯಾದ ಮೀನುಗಾರರ ಪತ್ತೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಗಂಭೀರವಾಗಿ ಪರಿಗಣಿಸಿ ಪತ್ತೆ ಕಾರ್ಯಚರಣೆ ನಡೆಸುತ್ತಿವೆ. ಆದರೆ ಉನ್ನತ ಮಟ್ಟದ ವೈಜ್ಞಾನಿಕ ಶೋಧನೆ ಆಗುತ್ತಿಲ್ಲ. ಕೇಂದ್ರ, ರಾಜ್ಯ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಬೇಕಿದೆ. ಮೀನುಗಾರರ ಪತ್ತೆಗಾಗಿ ರಕ್ಷಣಾ ಸಚಿವಾಲಯ ತನ್ನಲ್ಲಿರುವ ಎಲ್ಲ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕು.
|  ಗಣಪತಿ ಮಾಂಗ್ರೆ, ಮೀನುಗಾರ ಮುಖಂಡ, ಉ.ಕ.ಜಿಲ್ಲೆ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...