16 C
Bangalore
Saturday, December 7, 2019

ಎಕ್ಸ್​ಪೋಗೆ ಹರಿದು ಬಂದ ಜನಸಾಗರ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹುಬ್ಬಳ್ಳಿ:ನಂ. 1 ದಿನಪತ್ರಿಕೆ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ ಇಲ್ಲಿನ ವಿದ್ಯಾನಗರದ ರಾಯ್ಕರ್ ಮೈದಾನದಲ್ಲಿ ಹಮ್ಮಿಕೊಂಡಿರುವ ಎಜ್ಯುಕೇಶನ್ ಎಕ್ಸ್​ಪೋಕ್ಕೆ ಎರಡನೇ ದಿನವಾದ ಶನಿವಾರ ಜನಸಾಗರವೇ ಹರಿದುಬಂತು.

ಎಕ್ಸ್​ಪೋದಲ್ಲಿ ರಾಜ್ಯದ ವಿವಿಧೆಡೆಯ 40ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಮಳಿಗೆ ತೆರೆದಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ವಿವಿಧ ಮಾಹಿತಿಯನ್ನು ನೀಡುತ್ತಿವೆ. ಇಂಜಿನಿಯರಿಂಗ್, ಡಿಪ್ಲೋಮಾ, ಜಾನಪದ, ವಾಣಿಜ್ಯಕ್ಕೆ ಸಂಬಂಧಿಸಿದ ಕೋರ್ಸ್​ಗಳು, ವಿವಿಧ ವೃತ್ತಿಪರ ಕೋರ್ಸ್​ಗಳು, ಪಠ್ಯೇತರ ಹಾಗೂ ಪ್ರಾಯೋಗಿಕ ತರಗತಿಯ ವಿಶೇಷತೆಗಳ ಕುರಿತು ಆಸಕ್ತರು ವಿವರವಾದ ಮಾಹಿತಿ ಪಡೆದರು. ಐಎಎಸ್, ಕೆಎಎಸ್, ಎಫ್​ಡಿಎ, ಎಸ್​ಡಿಎ, ರೈಲ್ವೆ, ಪೊಲೀಸ್ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಿಗುವ ಉದ್ಯೋಗಗಳ ಸಮಗ್ರ ಮಾಹಿತಿಯನ್ನು ಸಂಬಂಧಪಟ್ಟ ಸಂಸ್ಥೆಯವರು ನೀಡುತ್ತಿದ್ದು, ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಬಹು ಉಪಯೋಗವಾಗುತ್ತಿದೆ. ವಿವಿಧ ಸ್ಪರ್ಧಾತ್ಷಕ ಪರೀಕ್ಷೆಗಳಿಗೆ ಹಾಗೂ ಕ್ಯಾಂಪಸ್ ಸಂದರ್ಶನದ ತಯಾರಿ, ವಿದ್ಯಾರ್ಥಿ ವೇತನ, ವಸತಿ ನಿಲಯದ ವ್ಯವಸ್ಥೆ ಸೇರಿದಂತೆ ಒಂದೇ ಸೂರಿನಡಿ ಎಲ್ಲ ಮಾಹಿತಿ ಸಿಗುತ್ತಿರುವುದರಿಂದ ವೀಕ್ಷಕರು ಸಂತಸದಿಂದಲೇ ಪಾಲ್ಗೊಂಡರು. ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಭವಿಷ್ಯ ಉಜ್ವಲವಾಗುತ್ತದೆ? ಎಲ್ಲೆಲ್ಲಿ ಯಾವ ಸೌಲಭ್ಯಗಳಿವೆ? ಮುಂದಿನ ದಿನಗಳ ಸವಾಲುಗಳಿಗೆ ಸಿದ್ಧವಾಗುವುದು ಹೇಗೆ? ಎಂಬುದರ ಕುರಿತು ತಿಳಿವಳಿಕೆ ಪಡೆದುಕೊಂಡರು.

ಶನಿವಾರ ತರಗತಿಗಳು ಬೇಗ ಮುಗಿದಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ತಂಡೋಪತಂಡವಾಗಿ ಎಕ್ಸ್​ಪೋಕ್ಕೆ ಆಗಮಿಸಿದರು. ಶಿಕ್ಷಣ ತಜ್ಞರು, ಸ್ಪರ್ಧಾತಕ್ಷ ಪರೀಕ್ಷೆಗಳ ತರಬೇತುದಾರರು, ಶಿಕ್ಷಣ ಸಂಸ್ಥೆಗಳ ಪ್ರಮುಖರು ನೀಡಿದ ಉಪನ್ಯಾಸ ಪಾಲಕರು ಹಾಗೂ ವಿದ್ಯಾರ್ಥಿಗಳ ಅರಿವಿನ ಹಸಿವು ಹಿಂಗಿಸಿದವು.

ಕ್ಲಾಸಿಕ್​ನಿಂದ ಉಚಿತ ಬಸ್ ಸೌಲಭ್ಯ:ವಿಜಯವಾಣಿ-ದಿಗ್ವಿಜಯ ಸುದ್ದಿವಾಹಿನಿ ಸಹಭಾಗಿತ್ವದಲ್ಲಿ ಹುಬ್ಬಳ್ಳಿಯ ರಾಯ್ಕರ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ಎಜ್ಯುಕೇಶನ್ ಎಕ್ಸ್​ಪೋದಲ್ಲಿ ಭಾಗವಹಿಸಲಿಚ್ಛಿಸುವವರಿಗೆ ‘ದಿ ಕ್ಲಾಸಿಕ್ ಸ್ಟಡಿ ಸರ್ಕಲ್’ ವತಿಯಿಂದ ಉಚಿತವಾಗಿ ಬಸ್ ಸೌಲಭ್ಯ ಒದಗಿಸಲಾಗಿದೆ.

ಧಾರವಾಡದ ಕಲಾ ಭವನದಿಂದ ಇಲ್ಲಿನ ಎಕ್ಸ್​ಪೋವರೆಗೆ ಮೇ 12ರಂದು ಬಸ್ ಬರಲಿದೆ. ಬೆಳಗ್ಗೆ 10, ಮಧ್ಯಾಹ್ನ 12, 2 ಹಾಗೂ 4 ಗಂಟೆಗೆ ಧಾರವಾಡದಿಂದ ಹಾಗೂ ಹುಬ್ಬಳ್ಳಿಯಿಂದ ಮಧ್ಯಾಹ್ನ 1, 3 ಹಾಗೂ 5 ಗಂಟೆಗೆ ಬಸ್ಸುಗಳು ಧಾರವಾಡ ತಲುಪುತ್ತವೆ. ಎಜ್ಯುಕೇಶನ್ ಎಕ್ಸ್​ಪೋಕ್ಕೆ ಆಗಮಿಸಬೇಕೆನ್ನುವವರು ಇದರ ಸದುಪಯೋಗ ಪಡೆಯಬಹುದು. ಮಾಹಿತಿಗೆ ಮೊ.ಸಂ. 8884432382ಗೆ ಸಂರ್ಪಸಬಹುದು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...