ಬಸವಕಲ್ಯಾಣ: ಎಚ್‌ಐವಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಜತೆಗೆ ಸೋಂಕಿತರಿಗಾಗಿ ಸರ್ಕಾರದ ಆರೋಗ್ಯ ಸೌಲಭ್ಯಗಳ ಮಾಹಿತಿ ನೀಡುವುದು ಅವಶ್ಯಕ ಎಂದು ನ್ಯಾಯವಾದಿ ಎ.ಎನ್.ದೇಶಪಾಂಡೆ ಹೇಳಿದರು.
ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯ ಇಲಾಖೆ ಹಾಗೂ ಇಲ್ಲಿಯ ಸಾರ್ವಜನಿಕ ಆಸ್ಪತ್ರೆ ಸಹಗಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೆ ಕಾನೂನಿನ ಅರಿವು ಮತ್ತು ಸರ್ಕಾರದ ಸೌಲಭ್ಯಗಳ ಮಾಹಿತಿ ಅವಶ್ಯಕವಾಗಿದ್ದು, ಈ ಕುರಿತು ಗ್ರಾಮೀಣ ಪ್ರದೇಶದಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಮಾಹಿತಿ ನೀಡುವ ಕೆಲಸ ನಡೆಯಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರೆ ಮಾತನಾಡಿ, ತಾಲೂಕಿನಲ್ಲಿ ಎಚ್‌ಐವಿ, ಏಡ್ಸ್ ಕುರಿತು ಅಂಕಿ-ಅಂಶ, ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಹಮ್ಮಿಕೊಳ್ಳುತ್ತಿರುವ ಐಇಸಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಅಪರ್ಣಾ ಮಹಾನಂದ ಮಾತನಾಡಿ, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಂಕಿತರಿಗಾಗಿ ಲಭ್ಯವಿರುವ ಸೇವಾ ಸೌಲಭ್ಯಗಳ ಮಾಹಿತಿ ನೀಡಿದರು. ವೈದ್ಯಾಧಿಕಾರಿ ಡಾ.ಮಹೇಶ್ವರಿ ಗೋರಮುಡೆ ಮಾತನಾಡಿ, ಸೋಂಕು ಹರಡುವ ಮಾರ್ಗ, ಲಕ್ಷಣ, ಚಿಕಿತ್ಸೆ ವಿಧಾನ ಕುರಿತು ಮಾಹಿತಿ ನೀಡಿದರು.
ತಾಲೂಕು ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಈಶ್ವರ ವಾಗಮಾರೆ, ಆರೋಗ್ಯಇಲಾಖೆ ಸಿಬ್ಬಂದಿ ಸೀತಮ್ಮ, ಆಶಾ, ಮೇಂಟರ, ಗೀತಾ, ಮಹಾದೇವಿ, ವೀರಶೆಟ್ಟಿ ಹೂಗಾರ, ನಾಗರಾಜ, ರಮೇಶ, ವಿಜಯಲಕ್ಷ್ಮೀ, ಲ್ಯಾಬ್ ಟೆಕ್ನಿಷಿಯನ್‌ಗಳಾದ ವಿಶ್ವನಾಥ, ವಿಜಯಕುಮಾರ ಕೆರೆನೂರ, ಅರವಿಂದ ಇತರರಿದ್ದರು. ಐಸಿಟಿಸಿ ಆಪ್ತ ಸಮಾಲೋಚಕಿ ಶಿವಲೀಲಾ ಪಾಟೀಲ್ ಪ್ರತಿಜ್ಞಾ ವಿಧಿ ಬೋಧಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿ ರಾಜಕುಮಾರ ನಿರೂಪಣೆ ಮಾಡಿದರು.