ಸುಂಟಿಕೊಪ್ಪ: ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಶೋದಯ ಸಂಯುಕ್ತಾಶ್ರಯದಲ್ಲಿ ಮಂಡ್ಯದ ಚಿಂತನ ಸಾಂಸ್ಕೃತಿಕ ಕಲಾ ತಂಡ ಎಚ್‌ಐವಿ ಸೋಂಕು ಕುರಿತು ಮಂಗಳವಾರ ಸಾರ್ವಜನಿಕರಿಗೆ ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಿದರು.
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಎಚ್‌ಐವಿ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಎಚ್‌ಐವಿ ಸೋಂಕಿತರಿಗೆ ಧೈರ್ಯ ತುಂಬಿದರು. ಸೋಂಕು ತಗುಲಿದ ಸಮಯದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುವುದರಿಂದ ರೋಗವನ್ನು ತಡೆಗಟ್ಟಬಹುದು. ಹಾಗೆಯೇ ಆಶೋದಯ ಕಾರ್ಯಕರ್ತರು ಮತ್ತು ಇಲಾಖೆ ಸಿಬ್ಬಂದಿ ಭೇಟಿ ನೀಡಿದಾಗ ಸೋಂಕಿತರು ಅವರೊಂದಿಗೆ ಸಹಕರಿಸುವುದರ ಜತೆಗೆ ಅವರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸದ್ದಲ್ಲಿ ರೋಗವನ್ನು ಯಾವುದೇ ಭಯವಿಲ್ಲದೆ ತಡೆಗಟ್ಟಲು ಸಾಧ್ಯ ಎಂದು ನಾಟಕದ ಮೂಲಕ ಮಾಹಿತಿ ನೀಡಿದರು.
ಜಿಲ್ಲಾ ಆಶೋದಯ ಕಾರ್ಯಕರ್ತೆ ನಾಗರತ್ನ ಸುರೇಶ್, ಮಂಡ್ಯದ ಸಿಂಚನಾ ಸಾಂಸ್ಕೃತಿಕ ಕಲಾ ತಂಡದವರು ಇದ್ದರು.
ಎಚ್‌ಐವಿ ಸೋಂಕು ಕುರಿತು ಬೀದಿ ನಾಟಕ
You Might Also Like
ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits
fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…
ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign
Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…
ಪೇನ್ ಕಿಲ್ಲರ್ ಮಾತ್ರೆ vs ಜೆಲ್… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel
Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…