ಹನಗೋಡು: ಒಂಬತ್ತು ತಿಂಗಳ ತುಂಬು ಗರ್ಭಿಣಿ ಎಚ್1ಎನ್1(ಹಂದಿ ಜ್ವರ)ನಿಂದ ಬುಧವಾರ ಮೃತಪಟ್ಟಿದ್ದಾರೆ.
ಹುಣಸೂರು ತಾಲೂಕು ಹನಗೋಡು ಹೋಬಳಿಯ ಕೋಣನಹೊಸಹಳ್ಳಿ ಗ್ರಾಮದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಟ್ಟನಾಯಕರ ಸಹೋದರ ಸ್ವಾಮಿನಾಯಕರ ಪುತ್ರಿ ಛಾಯಾ (28) ಮೃತಪಟ್ಟವರು. ಛಾಯಾ ಅವರಿಗೆ 4 ವರ್ಷದ ಪುತ್ರ ಹಾಗೂ ಪತಿ ಇದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕುಟುಂಬವಿತ್ತು.
ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಅವರಿಗೆ ಎಚ್1ಎನ್1 ಸೋಂಕು ತಗುಲಿತ್ತು. ಅವರನ್ನು ಮೈಸೂರಿನ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಕೋಣನಹೊಸಹಳ್ಳಿ ಗ್ರಾಮಕ್ಕೆ ಶಾಸಕ ಎಚ್.ಪಿ.ಮಂಜುನಾಥ್, ಮಾಜಿ ಶಾಸಕ ದಿ.ಚಿಕ್ಕಮಾದು ಅವರ ಪತ್ನಿ ನಾಗಮ್ಮ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಗುರುವಾರ ಮೃತರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.