22.5 C
Bengaluru
Sunday, January 19, 2020

ಎಣಿಕೆ ಕೇಂದ್ರದ ಎದುರು ಸಂಭ್ರಮ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಹಾವೇರಿ: ಉಪಚುನಾವಣೆಯಲ್ಲಿ ರಾಣೆಬೆನ್ನೂರ ಹಾಗೂ ಹಿರೇಕೆರೂರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಸೋಮವಾರ ಭರ್ಜರಿ ವಿಜಯೋತ್ಸವ ಆಚರಿಸಿದರು.

ತಾಲೂಕಿನ ದೇವಗಿರಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಮತ ಕೇಂದ್ರದ ಎದುರು ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ ಎಂದು ಧ್ವನಿವರ್ಧಕದಲ್ಲಿ ಘೊಷಿಸುತ್ತಿದ್ದಂತೆ ಹರ್ಷ ವ್ಯಕ್ತಪಡಿಸಿದ ಕಾರ್ಯಕರ್ತರು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ಅಭ್ಯರ್ಥಿಗಳಾದ ಅರುಣಕುಮಾರ ಪೂಜಾರ, ಬಿ.ಸಿ. ಪಾಟೀಲ ಪರ ಘೊಷಣೆ ಕೂಗಿ ಸಂಭ್ರಮಿಸಿದರು.

ಒಬ್ಬರಿಗೊಬ್ಬರು ಗುಲಾಲ್ ಎರಚಿಕೊಂಡು, ಪಟಾಕಿ ಸಿಡಿಸಿ ಸಂತಸ ಹೊರ ಹಾಕಿದರು. ಸ್ಥಳಕ್ಕೆ ಬಂದ ಅರುಣಕುಮಾರ ಪೂಜಾರ, ಬಿ.ಸಿ. ಪಾಟೀಲ, ಮಾಜಿ ಶಾಸಕ ಯು.ಬಿ. ಬಣಕಾರ, ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಹರಿಹರದ ಮಾಜಿ ಶಾಸಕ ಬಿ.ಪಿ. ಹರೀಶ ಸೇರಿ ಹಲವು ನಾಯಕರನ್ನು ಹೊತ್ತು ಕುಣಿದು ಕುಪ್ಪಳಿಸಿದರು. ಬಿಜೆಪಿ ಮುನ್ನಡೆ ಎನ್ನುವ ಧ್ವನಿ ಹೊರ ಬರುತ್ತಿದ್ದಂತೆ ಕೇಕೇ, ಸಿಳ್ಳೆಗಳು ಮುಗಿಲು ಮುಟ್ಟಿದವು. ರಾಣೆಬೆನ್ನೂರನ ಬಿಜೆಪಿ ಮುಖಂಡರು ನೆರೆದಿದ್ದ ಜನತೆಗೆ ಉಪ್ಪಿಟ್ಟು, ಬಾಳೆಹಣ್ಣು, ನೀರು ವಿತರಿಸಿದರು.

ರಾಣೆಬೆನ್ನೂರಿನಲ್ಲಿಯೂ ಭರ್ಜರಿ ಮೆರವಣಿಗೆ: ಬಿಜೆಪಿಯ ಅರುಣಕುಮಾರ ಪೂಜಾರ ಅವರನ್ನು ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಮೂಲಕ ರಾಣೆಬೆನ್ನೂರಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಪಿ.ಬಿ. ರಸ್ತೆ ಮೂಲಕ ಎಂ.ಜಿ. ರಸ್ತೆ, ದುರ್ಗಾ ವೃತ್ತ, ಪೋಸ್ಟ್ ವೃತ್ತ, ಬಸ್ ನಿಲ್ದಾಣ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು. ನಗರದ ಪ್ರಮುಖ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಸಿಎಂ ಸಂಸದೀಯ ಕಾರ್ಯದರ್ಶಿ ರೇಣುಕಾಚಾರ್ಯ, ಮಾಜಿ ಸಚಿವ ಆರ್. ಶಂಕರ, ಪಕ್ಷದ ಪ್ರಮುಖರಾದ ಪ್ರಕಾಶ ಬುರಡಿಕಟ್ಟಿ, ವಿಶ್ವನಾಥ ಪಾಟೀಲ, ಚೋಳಪ್ಪ ಕಸವಾಳ, ಕೆ. ಶಿವಲಿಂಗಪ್ಪ, ಎಸ್.ಎಸ್. ರಾಮಲಿಂಗಣ್ಣನವರ, ಮಂಜುನಾಥ ಓಲೇಕಾರ, ಪ್ರಕಾಶ ಪೂಜಾರ, ಮೈಲಪ್ಪ ದಾಸಪ್ಪನವರ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...