Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ಎನ್​ಆರ್​ಐಗಳಿಗೆ ಆನ್​ಲೈನ್

Thursday, 09.03.2017, 7:49 AM       No Comments

ಬೆಂಗಳೂರು: ಅನಿವಾಸಿ ಭಾರತೀಯರು ತೆರಿಗೆ ಪಾವತಿಸಲು ಹಾಗೂ ಹಡಗು ಮಾಲೀಕರು ಬಂದರು ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಸುಲಭವಾಗಿ ಪಡೆಯಲು ಅನುಕೂಲವಾಗುವಂತೆ ಆದಾಯ ತೆರಿಗೆ ಇಲಾಖೆ ಆನ್​ಲೈನ್ ಸೇವೆ ಆರಂಭಿಸಿದೆ.

ಆದಾಯ ತೆರಿಗೆ ಕೇಂದ್ರ ಕಚೇರಿಯಲ್ಲಿ ಬುಧವಾರ ಕರ್ನಾಟಕ ಮತ್ತು ಗೋವಾ ರಾಜ್ಯಗಳ ಪ್ರಧಾನ ಮುಖ್ಯ ಆಯುಕ್ತ ನೂತನ್ ಒಡೆಯರ್ ಆನ್​ಲೈನ್ ಸೇವೆಗೆ ಚಾಲನೆ ನೀಡಿದರು.

ವಿದೇಶದಲ್ಲಿ ನೆಲೆಸಿರುವ ಭಾರತೀಯರು ಇದ್ದಲ್ಲಿಂದಲೇ ಕರ ಪಾವತಿ ಮಾಡಬಹುದಾಗಿದೆ. ಆಸ್ತಿ ತೆರಿಗೆ, ವಾಣಿಜ್ಯ ತೆರಿಗೆ ಸೇರಿ ಎಲ್ಲ ರೀತಿಯ ತೆರಿಗೆಗಳನ್ನು ಸುಲಭವಾಗಿ ಪಾವತಿಸಬಹುದಾಗಿದೆ. ನಗದು ರಹಿತ ವ್ಯವಹಾರಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಈ ಆನ್​ಲೈನ್ ಸೇವೆ ಆರಂಭಿಸಲಾಗಿದ್ದು, ಜನರ ಅಲೆದಾಟ, ಪಾರದರ್ಶಕತೆ ತರುವ ನಿಟ್ಟಿನಲ್ಲಿ ಜಾರಿ ಮಾಡಲಾಗಿದೆ. ಆನ್​ಲೈನ್ ಮುಖಾಂತರ ಸರಳವಾಗಿ ಟಿಡಿಎಸ್ ಪ್ರಮಾಣಪತ್ರ ಪಡೆಯಬಹುದಾಗಿದೆ ಎಂದು ನೂತನ್ ಒಡೆಯರ್ ತಿಳಿಸಿದರು. ಮಂಗಳೂರು, ಕೊಚ್ಚಿ ಹಾಗೂ ಪಣಜಿ ಬಂದರುಗಳಿಂದ ಬೇರೆ ದೇಶಗಳಿಗೆ ಸಾಮಾಗ್ರಿ ಸಾಗಿಸುವ ಹಡಗುಗಳು ಆದಾಯ ತೆರಿಗೆ ಇಲಾಖೆಯಿಂದ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಕಡ್ಡಾಯ. ಈ ಹಿಂದೆ ಪ್ರಮಾಣಪತ್ರ ಪಡೆಯಲು ಬೆಂಗಳೂರು ಕೇಂದ್ರ ಕಚೇರಿಗೆ ಅಲೆದಾಡಬೇಕಾಗಿತ್ತು. ಆದರೆ ಈ ವೆಬ್​ಸೈಟ್ ಮೂಲಕ ಎನ್​ಒಸಿ ಪಡೆಯಬಹುದಾಗಿದೆ ಎಂದರು. www.incometaxbengaluru.in ವೆಬ್​ಸೈಟ್ ಮೂಲಕ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *

Back To Top