ಎಬಿಬಿ ಕಾರ್ಖಾನೆ ವಿರುದ್ಧ ಗುತ್ತಿಗೆ ನೌಕರರ ಪ್ರತಿಭಟನೆ

ನೆಲಮಂಗಲ: ಎಬಿಬಿ ಖಾಸಗಿ ಕಾರ್ಖಾನೆಯ ಆಡಳಿತ ವರ್ಗ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಗುತ್ತಿಗೆ ನೌಕರರು ಸೋಮವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಬಸವನಹಳ್ಳಿ ಗ್ರಾಪಂ ವ್ಯಾಪ್ತಿಯ ಎಬಿಬಿ ಕಾರ್ಖಾನೆಯ ಬಳಿ ಸವಾವೇಶಗೊಂಡ ನೂರಾರು ಗುತ್ತಿಗೆ ನೌಕರರು ಆಡಳಿತ ವರ್ಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯಲ್ಲಿ 10 ವರ್ಷಗಳಿಂದ ಕೆಲಸ ವಾಡಿಕೊಂಡು ಬರುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನ, ಉಗ್ಯೋಗ ಭದ್ರತೆ ಹಾಗೂ ಮೂಲ ಸೌಕರ್ಯ ಕಲ್ಪಿಸುವಲ್ಲಿ ಆಡಳಿತ ಮಂಡಳಿ ವಿಲವಾಗಿದೆ. ಈ ಬಗ್ಗೆ ಕಾರ್ಮಿಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಕಾರ್ಮಿಕರ ಸಂಟನೆ ರಚನೆಯಾಗಿದ್ದನ್ನೇ ಮುಂದಿಟ್ಟುಕೊಂಡ ಆಡಳಿತ ವರ್ಗ 40ಕ್ಕೂ ಹೆಚ್ಚು ಕಾರ್ಮಿಕರನ್ನು ದೂರದ ಟಕಗಳಿಗೆ ಏಕಾಏಕಿ ವರ್ಗಾವಣೆ ವಾಡಿದೆ. ಕೆಲವರನ್ನು ಅವಾನತುಗೊಳಿಸಲಾಗಿದೆ. ಈ ಬಗ್ಗೆ ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆಗೆ ದೂರು ನೀಡಿದರೂ ಸೂಕ್ತ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಕಾರ್ಮಿಕರ ಒತ್ತಾಯ: ತಕ್ಷಣ ಕಾರ್ಖಾನೆ ಆಡಳಿತ ವರ್ಗ ಹೊರಡಿಸಿರುವ ವರ್ಗಾವಣೆ, ಅವಾನುತ್ತು ಆದೇಶವನ್ನು ಹಿಂಪಡೆಯಬೇಕು. ಕಾರ್ಮಿಕ ಸಂ ವಾನ್ಯ ವಾಡುವುದು ಸೇರಿದಂತೆ ಕಾರ್ಮಿಕರ ಸಮಸ್ಯೆಗಳನ್ನು ವಾತುಕತೆ ಮೂಲಕ ಬಗೆಹರಿಸಿಕೊಡಬೇಕು. ಕಾರ್ಮಿಕರ ವಿರೋಧಿ ನೀತಿಯಿಂದಾಗಿ ನೂರಾರು ಕಾರ್ಮಿಕರ ಕುಟುಂಬಗಳು ಬೀದಿಪಾಲಾಗಿದ್ದು, ಕೂಡಲೇ ಎಲ್ಲ ಕಾರ್ಮಿಕರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

Leave a Reply

Your email address will not be published. Required fields are marked *