ಚಿಕ್ಕಮಗಳೂರು: ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದ ಹಿನ್ನೆಲೆಯಲ್ಲಿ ಕಾಫಿ ನಾಡು ಚಿಕ್ಕಮಗಳೂರು ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಹಾಗೂ ಪೊಲೀಸ್ ಠಾಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಿದರು.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಆಪರೇಷನ್ ಸಿಂಧೂರದ ಮೂಲಕ ಭಾರತ ತಕ್ಕ ಪ್ರತಿಕಾರ ತೀರಿಸಿಕೊಂಡಿದೆ. ಭಾರತದ ವಿರುದ್ಧ ಷಡ್ಯಂತರ ನಡೆಸುತ್ತಿರುವ ಭಯೋತ್ಪಾದಕರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿರುವುದು ಸ್ವಾಗತಾರ್ಹ ಎಂದು ಸಂತಸ ವ್ಯಕ್ತಪಡಿಸಿದರು.
ಭಯೋತ್ಪಾದಕರು ಮಾತ್ರವಲ್ಲದೆ ಅವರಿಗೆ ಕುಮ್ಮಕ್ಕು ನೀಡುವ ದೇಶಗಳು ಹಾಗೂ ಸಂಘಟನೆಗಳ ವಿರುದ್ಧವು ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಕಠಿಣ ಕ್ರಮ ಕೈಗೊಳ್ಳಬೇಕು. ಈ ಮೂಲಕ ಮುಂದಿನ ದಿನಗಳಲ್ಲಿ ದೇಶದಲ್ಲಿ ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ರಾಕೇಶ್ ಮರಡಿ, ಪ್ರಾಂತ ಸಂಚಾಲಕ ನಂದನ್, ಪ್ರಮುಖರಾದ ಪ್ರೇಕ್ಷಿತ್, ಸೂರ್ಯ, ನಿರುಪಮ ಮತ್ತಿತರರಿದ್ದರು.