ಎರಡು ದಿನದಲ್ಲಿ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಮೇಯರ್ ಎಚ್ಚರಿಕೆ

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಗುಂಡಿಗಳನ್ನು ಇನ್ನೆರಡು ದಿನಗಳಲ್ಲಿ ಮುಚ್ಚದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮೇಯರ್ ಎಚ್ಚರಿಕೆ ನೀಡಿದ್ದಾರೆ.

ಬಿಇಎಲ್ ವೃತ್ತದಿಂದ ಹೊರವರ್ತಲ ರಸ್ತೆಯ ಗುಣಮಟ್ಟ ಪರಿಶೀಲಿಸಿದ ಗಂಗಾಂಬಿಕೆ, ರಸ್ತೆಗಳಲ್ಲಿ ಗುಂಡಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಸ್ತೆಯಲ್ಲಿ ಗುಂಡಿಗಳು ಮತ್ತು ಪಾದಚಾರಿ ಮಾರ್ಗ ಹಾಳಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ದುರಸ್ತಿಗೆ ಏಕೆ ಮುಂದಾಗಿಲ್ಲ? ಸವಾರರು ಬಿದ್ದು ಅವಘಡ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಸಂಬಂಧಪಟ್ಟ ಗುತ್ತಿಗೆದಾರರಿಗೆ ರಸ್ತೆ ದುರಸ್ತಿ ಮಾಡುವಂತೆ ಸೂಚನೆ ನೀಡಿದರು. ಇನ್ನೆರಡು ದಿನದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು ವರದಿ ನೀಡಬೇಕು. ಇಲ್ಲದಿದ್ದರೆ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ರಿಂಗ್​ರಸ್ತೆಯಲ್ಲಿ ವೈಟ್​ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳ ಲಾಗಿದ್ದು, ಹೆಬ್ಬಾಳ ಕಡೆಯಿಂದ ನಡೆಯುತ್ತಿರುವ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. ಉಳಿದಂತೆ ಕಾಮಗಾರಿ ಆರಂಭವಾಗದ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲಾಗುವುದು ಎಂದು ಮೇಯರ್​ಗೆ ಕಾರ್ಯನಿರ್ವಾಹಕ ಇಂಜಿನಿಯರ್ ನಂದೀಶ್ ಮಾಹಿತಿ ನೀಡಿದರು.

ಗೊರಗುಂಟೆಪಾಳ್ಯ ಸಮೀಪದ ರೈಲ್ವೆ ಮೇಲ್ಸೇತುವೆ ಬಳಿ ನೀರು ನಿಂತಿರುವುದು ಮತ್ತು ಮೇಲ್ಸೇತುವೆ ರಸ್ತೆ ಹಾಳಾಗಿರುವ ಬಗ್ಗೆ ಮೇಯರ್ ಅಸಮಾಧಾನ ವ್ಯಕ್ತಪಡಿಸಿದರು. ಮೇಲ್ಸೇತುವೆ ಡಾಂಬರೀಕರಣ ನಡೆಸಲು ಅನುದಾನ ಬಿಡುಗಡೆಯಾಗಿದೆ. ರಿಂಗ್​ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುವ ಪರಿಣಾಮ ಸಂಚಾರ ಪೊಲೀಸರು ದುರಸ್ತಿ ಕೆಲಸಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಪೊಲೀಸರೊಂದಿಗೆ ಸಭೆ ನಡೆಸಿ ಅನುಮತಿ ಪಡೆಯುವಂತೆ ಯೋಜನಾ ವಿಭಾಗದ ಮುಖ್ಯ ಇಂಜಿನಿಯರ್​ಗೆ ಮೇಯರ್ ಸೂಚಿಸಿದರು.

One Reply to “ಎರಡು ದಿನದಲ್ಲಿ ರಸ್ತೆ ಗುಂಡಿ ಮುಚ್ಚದಿದ್ದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಮೇಯರ್ ಎಚ್ಚರಿಕೆ”

  1. In this rainy season, traffic is increased due to bad roads, last year at least BBMP put an effort to patch the roads, this year we are not at all seeing that effort.

    We are from arekere mico layout, please instruct the concerned officers to at least close the holes in the road, because of this daam roads our life become hell. 🙁

Leave a Reply

Your email address will not be published. Required fields are marked *