ಎರಡು ಬಣವೆಗಳು ಬೆಂಕಿಗಾಹುತಿ

ಗಜೇಂದ್ರಗಡ: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಎರಡು ಮೇವಿನ ಬಣವೆ ಸುಟ್ಟ ಘಟನೆ ಸಮೀಪದ ಗೋಗೇರಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಸಕ್ರಗೌಡ ನಾಗನಗೌಡ ಪಾಟೀಲ ಅವರಿಗೆ ಸೇರಿದ ಬಣವೆಗಳು ಬೆಂಕಿಗಾಹುತಿಯಾಗಿವೆ. ರೋಣ ಅಗ್ನಿ ಶಾಮಕ ದಳದ ಸಿಬ್ಬಂದಿ ಗ್ರಾಮಸ್ಥರ ಸಹಕಾರದಿಂದ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ಪ್ರತ್ಯಕ್ಷದರ್ಶಿ ಶಿವಪುತ್ರಯ್ಯ ಗುರುವಿನಮಠ ತಿಳಿಸಿದರು. ಪಿಎಸ್​ಐ ಆರ್.ವೈ. ಜಲಗೇರಿ, ಗ್ರಾಮ ಲೆಕ್ಕಾಧಿಕಾರಿ ಎಂ. ಮುಲ್ಲಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸುಮಾರು 3 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.