ಸಿನಿಮಾ

ಎಲ್ಲರ ಪರಿಶ್ರಮದಿಂದ ಪಿರಿಯಾಪಟ್ಟಣ ತಾಲೂಕಿಗೆ ಉತ್ತಮ ಫಲಿತಾಂಶ

ಪಿರಿಯಾಪಟ್ಟಣ: ಗುಣಮಟ್ಟದ ಬೋಧನೆಯೊಂದಿಗೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಅಭ್ಯಾಸದಿಂದ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಪಿರಿಯಾಪಟ್ಟಣ ತಾಲೂಕು ಸತತ ಒಂಬತ್ತನೇ ಬಾರಿಯೂ ಜಿಲ್ಲೆಗೆ ಮೊದಲ ಸ್ಥಾನ ಪಡೆಯಲು ಸಾಧ್ಯವಾಯಿತು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಅಭಿಪ್ರಾಯಪಟ್ಟರು.

ಪಟ್ಟಣದ ಬಿಆರ್‌ಸಿ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು.

ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಷಯವಾರು ವಿಶೇಷ ಕಾರ್ಯಾಗಾರ, ರಾತ್ರಿ ಪಾಠ ಹಾಗೂ ವಿಶೇಷ ತರಗತಿಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಪೂರಕ ವಾತಾವರಣ ಕಲ್ಪಿಸಲಾಗಿತ್ತು ಎಂದರು.

ಉತ್ತಮ ಅಂಕ ಪಡೆದ ಹಾಗೂ ತೆರ್ಗಡೆಯಾದ ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಜೀವನದಲ್ಲೂ ಕಲಿಕೆಗೆ ಹೆಚ್ಚಿನ ಮಹತ್ವ ನೀಡುವಂತಾಗಬೇಕು ಎಂದರು.

ಹೆಚ್ಚು ಅಂಕ ಪಡೆದ ಬೆಟ್ಟದಪುರದ ಡಿಟಿಎಂಎನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾದ ಎಲ್.ಪಿ ಧನ್ಯಾ (612), ಕೆ.ಎಸ್.ವೇಣ ುಗೋಪಾಲ್(612), ಡಿ.ಚಂದ್ರಕಲಾ(611), ಜೆ.ಸಿಂಚನ(611) ಹಾರನಹಳ್ಳಿ ಕೆಪಿಎಸ್ ಶಾಲೆಯ ರಂಜಿತ(606), ಬೆಟ್ಟದಪುರ ಸರ್ಕಾರಿ ಪ್ರೌಢಶಾಲೆಯ ಎಂ.ಆರ್.ಚೇತನ್ ಗೌಡ(603), ಚಿಕ್ಕನೇರಳೆ ಪ್ರೌಢಶಾಲೆಯ ವಿ.ಎಂ.ಸುಚಿತ್ರ (603) ಅವರನ್ನು ಸನ್ಮಾನಿಸಲಾಯಿತು.

ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ ವತಿಯಿಂದ ಬಿಇಒ ಬಸವರಾಜು ಹಾಗೂ ಪರೀಕ್ಷೆ ನೋಡಲ್ ಅಧಿಕಾರಿ ಇಸಿಒ ಗಣೇಶ್ ಅವರನ್ನು ಸನ್ಮಾನಿಸಲಾಯಿತು. ಬಿಆರ್ ಸಿ ಶಿವರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಪ್ರಶಾಂತ್, ಇಸಿಒಸತೀಶ್ ಕುಮಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗಶೆಟ್ಟಿ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲೇಶ್, ಖಾಸಗಿ ಶಾಲೆಗಳ ಮುಖ್ಯ ಶಿಕ್ಷಕರ ಒಕ್ಕೂಟ ಅಧ್ಯಕ್ಷ ಕಿಶೋರ್ ಆರಾಧ್ಯ , ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಸುರೇಶ್, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಶಂಕರ್, ಮುಖ್ಯ ಶಿಕ್ಷಕರಾದ ರಾಜಯ್ಯ, ಡಿಟಿಎಂಎನ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಮುರಳಿ ಇದ್ದರು.

Latest Posts

ಲೈಫ್‌ಸ್ಟೈಲ್