ಎಲ್ಲ ಕ್ಷೇತ್ರಗಳಲ್ಲೂ ಭಾರತದ ಶಕ್ತಿ ಅನಾವರಣ

ಶಿವಮೊಗ್ಗ: ವಿಶ್ವ ಮಟ್ಟದಲ್ಲಿ ಭಾರತ ಪ್ರಮುಖ ಶಕ್ತಿಯಾಗಿ ಬೆಳೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತನ್ನದೇ ಆದ ವರ್ಚಸ್ಸು ಹೊಂದಿದೆ. ಒಳ್ಳೆಯ ಹೆಸರು ಗಳಿಸಿದ್ದೇವೆ. ಕೃಷಿ, ವಿಜ್ಞಾನ-ತಂತ್ರಜ್ಞಾನ, ಮೂಲ ಸೌಕರ್ಯ ವಲಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.</p><p>ನಗರದ ಡಿಎಆರ್ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ 73ನೇ ಸ್ವಾತಂತ್ರ್ಯೊತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಭಾರತೀಯ ಭೂಸೇನೆ, ವಾಯುಸೇನೆ, ನೌಕಾಸೇನೆ ಪ್ರಬಲ ಶಕ್ತಿಯಾಗಿ ಬೆಳೆದಿವೆ. ಬಹುಮುಖ್ಯವಾಗಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಿ, ಸೈನಿಕರಲ್ಲಿ ಭರವಸೆ ಮೂಡಿಸುವ, ಅವರಲ್ಲಿ ವಿಶ್ವಾಸ ತುಂಬುವ ಕಾರ್ಯ ಮಾಡಲಾಗುತ್ತಿದೆ ಎಂದರು.</p><p>ಈ ದೇಶವನ್ನು ಬ್ರಿಟಿಷರ ಆಡಳಿತದಿಂದ ಮುಕ್ತಗೊಳಿಸಲು, ಸಾವಿರಾರು ಭಾರತೀಯರು ತನು, ಮನ, ಧನ ತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಸಾವಿರಾರು ದೇಶಪ್ರೇಮಿಗಳ ಬಲಿದಾನವಿದೆ. ಅದನ್ನು ಸಾರ್ಥಕಗೊಳಿಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.

ಜಿಲ್ಲೆಯ ಕೊಡುಗೆ ಅನನ್ಯ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಶಿವಮೊಗ್ಗ ಜಿಲ್ಲೆ ಕೊಡುಗೆ ಅನನ್ಯವಾದುದು. ಶಿಕಾರಿಪುರ ತಾಲೂಕು ದೇಶದ ಪ್ರಥಮ ಸ್ವಾತಂತ್ರ್ಯ ಗ್ರಾಮ ಎಂಬ ಹೆಗ್ಗಳಿಕೆ ನಮ್ಮದು. ಈಸೂರು ಹೋರಾಟದಲ್ಲಿ ಐದು ಮಂದಿ ದೇಶಕ್ಕಾಗಿ ತಮ್ಮ ಜೀವವನ್ನೇ ಸಮರ್ಪಿಸಿದ್ದರು. ಮಹಿಳೆಯರು ಹಾಗೂ ತಾಯಂದಿರ ಪಾತ್ರವೂ ಮಹತ್ತರವಾಗಿತ್ತು ಎಂದು ಜಿಲ್ಲಾಧಿಕಾರಿ ಸ್ಮರಿಸಿದರು.

ಶಿವಮೊಗ್ಗ ಸಾಂಸ್ಕೃತಿಕ ಮತ್ತು ಸಮಾಜವಾದಿ ಚಿಂತನೆಗಳ ನೆಲೆಗಟ್ಟಿನ ಜಿಲ್ಲೆಯಾಗಿದೆ. ಸಾಹಿತ್ಯ ಕ್ಷೇತ್ರದ ದಿಗ್ಗಜರಾದ ಕುವೆಂಪು, ಯು.ಆರ್.ಅನಂತಮೂರ್ತಿ, ಜಿ.ಎಸ್.ಶಿವರುದ್ರಪ್ಪ, ಪಿ.ಲಂಕೇಶ್, ಪೂರ್ಣಚಂದ್ರ ತೇಜಸ್ವಿ ಮುಂತಾದ ಮಹಾನ್ ಸಾಹಿತಿಗಳ ತವರು ಎಂಬ ಹೆಮ್ಮೆ ನಮ್ಮದಾಗಿದೆ ಎಂದರು.

ಕೃಷಿಕರು-ದುರ್ಬಲರ ಪರ ಸರ್ಕಾರ:</p><p>ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರು, ಮೀನುಗಾರರು, ನೇಕಾರರು ಸೇರಿ ಶೋಷಿತರ, ದುರ್ಬಲ ವರ್ಗದವರ ಏಳಿಗೆಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅವರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಿವೆ. ರೈತರಿಗೆ ಕೇಂದ್ರ ಸರ್ಕಾರ ಘೊಷಿಸಿರುವ ಕಿಸಾನ್ ಸನ್ಮಾನ್ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ರೈತರ ಖಾತೆಗಳಿಗೆ 4 ಸಾವಿರ ರೂಪಾಯಿ ಜಮೆ ಮಾಡುತ್ತಿದೆ ಎಂದು ತಿಳಿಸಿದರು.

</p><p>ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ, ಮೇಯರ್ ಲತಾ ಗಣೇಶ್, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಪಂ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಉಪಮೇಯರ್ ಎಸ್.ಎನ್.ಚನ್ನಬಸಪ್ಪ, ಎಸ್ಪಿ ಕೆ.ಎಂ.ಶಾಂತರಾಜು, ಜಿಪಂ ಸಿಇಒ ಕೆ.ಶಿವರಾಮೇಗೌಡ, ನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಇತರರಿದ್ದರು.