ಎಲ್ಲ ಸಮುದಾಯ, ಸಮಾಜಗಳ ಸಭೆಗೆ ನಿರ್ಧಾರಮಡಿಕೇರಿ: ಜಿಲ್ಲೆಯ ಎಲ್ಲ ಸಮುದಾಯ ಹಾಗೂ ಸಮಾಜಗಳ ಸಭೆ ಕರೆದು, ಕಳೆದ ವರ್ಷ ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪ ಸೇರಿದಂತೆ ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿ, ಸೂಕ್ತ ಪರಿಹಾರ ಕಂಡುಕೊಳ್ಳಲು ಕೊಡವ ಸಮಾಜಗಳ ಒಕ್ಕೂಟದ ಮಾಸಿಕ ಸಭೆಯಲ್ಲಿ ನಿರ್ಧರಿಸಲಾಯಿತು.
ಬಾಳುಗೋಡುವಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೊಡವ ಸಮಾಜಗಳ ಒಕ್ಕೂಟದ ಮಾಸಿಕ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಸಮಾಲೋಚಿಸಿದ ಪ್ರಮುಖರು, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 19 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಗಳಂತೆ ಒಟ್ಟು 1.90 ಲಕ್ಷ ರೂ. ನೀಡಲು ತಿರ್ಮಾನಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಪ್ರಕೃತಿ ವಿಕೋಪ ಸಂದರ್ಭ ತಕ್ಷಣ ಸ್ಪಂದಿಸಿ ಪರಿಹಾರ ಕಾರ್ಯಕ್ಕೆ ಸಹಕಾರ ನೀಡಿದ ಸಂಘ-ಸಂಸ್ಥೆ, ಸಮಾಜ, ಸಾರ್ವಜನಿಕರು ಅಭಿನಂದನಾರ್ಹರು ಎಂದರು.
ಮಕ್ಕಂದೂರು ಕೊಡವ ಸಮಾಜದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಕಾಳಜಿ ತೋರಿದ ಒಕ್ಕೂಟದ ಕಾರ್ಯ ಶ್ಲಾಘನೀಯವೆಂದರು.
ಮದ್ಯ ಬೇಡ: ಕೊಡವ ಜನಾಂಗದ ಮದುವೆ ಕಾರ್ಯಕ್ರಮದ ಗಂಗಾಪೂಜೆ (ನೀರ್‌ಎಡ್‌ಪೊ) ಸಂದರ್ಭ ಮದ್ಯ ಬಳಕೆ ನಿಷೇಧ ಕುರಿತು ಅಮ್ಮತ್ತಿ ಕೊಡವ ಸಮಾಜ ತೆಗೆದುಕೊಂಡಿರುವ ಮಹತ್ವದ ತೀರ್ಮಾನವನ್ನು ಒಕ್ಕೂಟ ಸ್ವಾಗತಿಸಿತು. ಅಲ್ಲದೆ ಈ ಐತಿಹಾಸಿಕ ನಿರ್ಧಾರವನ್ನು ಎಲ್ಲ ಕೊಡವ ಸಮಾಜಗಳು ಹಾಗೂ ಕಲ್ಯಾಣ ಮಂಟಪಗಳು ಪಾಲಿಸಿ, ಸಹಕರಿಸುವಂತೆ ಮನವಿ ಮಾಡಲಾಯಿತು.
ಒಕ್ಕೂಟದ ಉಪಾಧ್ಯಕ್ಷ ಮಲಚ್ಚೀರ ಬೋಸ್, ಖಜಾಂಚಿ ಚಿರಿಯಪಂಡ ಕಾಶಿಯಪ್ಪ, ಪೋಷಕ ಸದಸ್ಯ ಮೇರಿಯಂಡ ಸಿ.ನಾಣಯ್ಯ, ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿ ಕೋದಂಡ ಸನ್ನು ಉತ್ತಪ್ಪ, ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಹಾಜರಿದ್ದರು.

ಜಿಲ್ಲೆಯ ಎಲ್ಲ ಸಮುದಾಯ ಹಾಗೂ ಸಮಾಜಗಳ ಸಭೆ ಕರೆದು, ಕಳೆದ ವರ್ಷ ಕೊಡಗಿನಲ್ಲಿ ಉಂಟಾದ ಪ್ರಾಕೃತಿಕ ವಿಕೋಪ ಸೇರಿದಂತೆ ಜಿಲ್ಲೆಯನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿ, ಸೂಕ್ತ ಪರಿಹಾರ ಕಂಡುಕೊಳ್ಳಲು ಕೊಡವ ಸಮಾಜಗಳ ಒಕ್ಕೂಟದ ಮಾಸಿಕ ಸಭೆಯಲ್ಲಿ ನಿರ್ಧರಿಸಲಾಯಿತು.
ಬಾಳುಗೋಡುವಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕೊಡವ ಸಮಾಜಗಳ ಒಕ್ಕೂಟದ ಮಾಸಿಕ ಸಭೆಯಲ್ಲಿ ವಿವಿಧ ವಿಷಯಗಳ ಕುರಿತು ಸಮಾಲೋಚಿಸಿದ ಪ್ರಮುಖರು, ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 19 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಗಳಂತೆ ಒಟ್ಟು 1.90 ಲಕ್ಷ ರೂ. ನೀಡಲು ತಿರ್ಮಾನಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಪ್ರಕೃತಿ ವಿಕೋಪ ಸಂದರ್ಭ ತಕ್ಷಣ ಸ್ಪಂದಿಸಿ ಪರಿಹಾರ ಕಾರ್ಯಕ್ಕೆ ಸಹಕಾರ ನೀಡಿದ ಸಂಘ-ಸಂಸ್ಥೆ, ಸಮಾಜ, ಸಾರ್ವಜನಿಕರು ಅಭಿನಂದನಾರ್ಹರು ಎಂದರು.
ಮಕ್ಕಂದೂರು ಕೊಡವ ಸಮಾಜದ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಕಾಳಜಿ ತೋರಿದ ಒಕ್ಕೂಟದ ಕಾರ್ಯ ಶ್ಲಾಘನೀಯವೆಂದರು.
ಮದ್ಯ ಬೇಡ: ಕೊಡವ ಜನಾಂಗದ ಮದುವೆ ಕಾರ್ಯಕ್ರಮದ ಗಂಗಾಪೂಜೆ (ನೀರ್‌ಎಡ್‌ಪೊ) ಸಂದರ್ಭ ಮದ್ಯ ಬಳಕೆ ನಿಷೇಧ ಕುರಿತು ಅಮ್ಮತ್ತಿ ಕೊಡವ ಸಮಾಜ ತೆಗೆದುಕೊಂಡಿರುವ ಮಹತ್ವದ ತೀರ್ಮಾನವನ್ನು ಒಕ್ಕೂಟ ಸ್ವಾಗತಿಸಿತು. ಅಲ್ಲದೆ ಈ ಐತಿಹಾಸಿಕ ನಿರ್ಧಾರವನ್ನು ಎಲ್ಲ ಕೊಡವ ಸಮಾಜಗಳು ಹಾಗೂ ಕಲ್ಯಾಣ ಮಂಟಪಗಳು ಪಾಲಿಸಿ, ಸಹಕರಿಸುವಂತೆ ಮನವಿ ಮಾಡಲಾಯಿತು.
ಒಕ್ಕೂಟದ ಉಪಾಧ್ಯಕ್ಷ ಮಲಚ್ಚೀರ ಬೋಸ್, ಖಜಾಂಚಿ ಚಿರಿಯಪಂಡ ಕಾಶಿಯಪ್ಪ, ಪೋಷಕ ಸದಸ್ಯ ಮೇರಿಯಂಡ ಸಿ.ನಾಣಯ್ಯ, ಮಾಜಿ ಅಧ್ಯಕ್ಷ ಮಲ್ಲೇಂಗಡ ದಾದ ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿ ಕೋದಂಡ ಸನ್ನು ಉತ್ತಪ್ಪ, ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ಹಾಜರಿದ್ದರು.

Leave a Reply

Your email address will not be published. Required fields are marked *