ಎಸ್‌ಸಿ, ಎಸ್ಟಿ ಕ್ಷೇಮಾಭಿವೃದ್ಧಿ ಸಂಸದೀಯ ಸಮಿತಿ ಸಭೆ

blank

ಚಿತ್ರದುರ್ಗ: ಕೋಲ್ಕತ್ತಾದಲ್ಲಿ ಸೋಮವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಂಸದೀಯ ಸಮಿತಿ ಅಧ್ಯಯನ ಪ್ರವಾಸ ಸಭೆ ಜರುಗಿತು.
ಈ ಸಭೆಯಲ್ಲಿ ಸಂಸದ ಗೋವಿಂದ ಎಂ. ಕಾರಜೋಳ ಅವರು ಭಾಗವಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ನೌಕರರಿಗೆ ವಿವಿಧ ಕಂಪನಿಗಳು, ಇಲಾಖೆಗಳು ತೆಗೆದುಕೊಂಡಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕಾರಿಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿ, ಶಿಕ್ಷಣ, ಮೀಸಲಾತಿ, ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಮೀಸಲು ಹುದ್ದೆಗಳ ಕುರಿತು ಕೂಲಂಕಶವಾಗಿ ಚರ್ಚಿಸಲಾಯಿತು.
ಸಮಿತಿ ಅಧ್ಯಕ್ಷ ಫಗ್ಗನ್‌ಸಿಂಗ್ ಕುಲಸ್ತೆ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಸದಸ್ಯರು, ಸಂಸದರಾದ ಎ. ರಾಜಾ, ಹರಿಶ್ಚಂದ್ರ ಮೀನಾ, ಸೆಸಿಕಾಂತ್‌ಸೆಂಥಿಲ್, ಕೋಲ್‌ಇಂಡಿಯಾ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಪಿ.ಎಂ. ಪ್ರಸಾದ್, ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಿಇಒ ಅಶೋಕ್ ಚಂದ್ರ, ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿ.ಪಿ. ಗೋಪಾಲಿಕಾ ಮತ್ತಿತರ ಹಿರಿಯ ಅಧಿಕಾರಿಗಳಿದ್ದರು. ಜ.17ರಂದು ಆರಂಭವಾಗಿರುವ ಈ ಸಭೆ 22ರವರೆಗೆ ರಾಂಚಿ ಮತ್ತು ರಾಯ್‌ಪುರದಲ್ಲಿ ನಡೆಯಲಿದೆ.

Share This Article

ಏಳನೇ ತಿಂಗಳಲ್ಲಿ ಹೆರಿಗೆಯಾದರೆ ಏನಾಗುತ್ತದೆ?; ಮಗುವಿನ ಆರೋಗ್ಯದ ಮೇಲಾಗುವ ಪರಿಣಾಮವೇನು.. ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಗರ್ಭಾವಸ್ಥೆಯಲ್ಲಿ ಮಗುವನ್ನು 9 ತಿಂಗಳುಗಳ ಕಾಲ ಇಟ್ಟುಕೊಳ್ಳುವುದು ಮುಖ್ಯ ಎಂದು ವೈದ್ಯರು ಸೇರಿದಂತೆ ಎಲ್ಲಾ ತಜ್ಞರು…

ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗಬೇಕೇ?; ಅಡುಗೆಮನೆಯಲ್ಲಿನ ಈ 2 ವಸ್ತುಗಳನ್ನು ತಪ್ಪದೆ ಬಳಸಿ | Health Tips

ಇತ್ತೀಚಿನ ದಿನಗಳಲ್ಲಿ ಕಳಪೆ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಯಿಂದಾಗಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ ಸಮಸ್ಯೆ…

ಚಳಿಗಾಲದಲ್ಲಿ ಹುಣಸೆಹಣ್ಣು ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? health benefits of tamarind

health benefits of tamarind : ನಮ್ಮ ದಿನನಿತ್ಯದ ಅಡುಗೆಯಲ್ಲಿ ಹುಣಸೆಹಣ್ಣನ್ನು ಬಳಸುವುದರಿಂದ ನಮಗೆ ಅರಿವಿಲ್ಲದೆಯೇ…