Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಎಸ್ಸೆನ್ನಾರ್ ಆಸ್ಪತ್ರೆಗೆ ಜಿಪಂ ಸಿಇಒ ಭೇಟಿ

Thursday, 14.06.2018, 3:00 AM       No Comments

ಕೋಲಾರ: ಬಡರೋಗಿಗಳ ಆರೋಗ್ಯ ಸುಧಾರಣೆಗೆ ಎಸ್ಸೆನ್ನಾರ್ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿಗೆ ಪೂರಕವಾಗಿ ಕ್ರಮ ಕೈಗೊಳ್ಳುವ ಜತೆಗೆ ರಜಾದಿನಗಳಲ್ಲಿ ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಲು ಜಿಲ್ಲಾ ಸರ್ಜನ್​ಗೆ ಸೂಚಿಸಿರುವುದಾಗಿ ಜಿಪಂ ಸಿಇಒ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಎಸ್ಸೆನ್ನಾರ್ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿ ಡಿಎಚ್​ಒ ಡಾ. ಎಸ್.ಎನ್. ವಿಜಯಕುಮಾರ್ ಮತ್ತು ಜಿಲ್ಲಾ ಸರ್ಜನ್ ಸಂತೋಷ್ ಡಿ.ಪ್ರಭುಗೆ ಸಲಹೆ ಸೂಚನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಆಸ್ಪತ್ರೆಗೆ ನಿರೀಕ್ಷೆಗಿಂತ ರೋಗಿಗಳ ಸಂಖ್ಯೆ ಅಧಿಕವಾಗಿದೆ. ರೋಗಿಗಳಿಗೆ ಸರ್ಕಾರದ ಎಲ್ಲ ಯೋಜನೆ ಸೌಲಭ್ಯ ನೀಡಬೇಕು. ಎಂಆರ್​ಐ ಮತ್ತು ಸಿಟಿ ಸ್ಕ್ಯಾನ್ ಉಚಿತವಾಗಿ ಮಾಡಲಾಗುತ್ತಿದೆ ಎಂದರು.

ರೋಗಿಗಳಿಗೆ ಹಾಗೂ ಅವರೊಂದಿಗೆ ಬರುವವರಿಗೆ ಊಟ ಮತ್ತು ವಿಶ್ರಾಂತಿಗೆ ಕನಿಷ್ಠ ಸೌಲಭ್ಯ ಕಲ್ಪಿಸುವ ಜತೆಗೆ ನೆರಳಿನ ಆಶ್ರಯಕ್ಕೆ ಶೆಡ್ ನಿರ್ವಿುಸುವಂತೆ ಸೂಚಿಸಿರುವುದಾಗಿ ತಿಳಿಸಿದರು.ಆಸ್ಪತ್ರೆಯಲ್ಲಿ ಕೆಲ ತಜ್ಞ ವೈದ್ಯರ ಕೊರತೆ ಇದೆ. 80 ಡಿ ಗ್ರೂಪ್ ನೌಕರರ ಹುದ್ದೆ ಇದ್ದು, 30 ಮಂದಿ ಕಾರ್ಯನಿರ್ವಹಿಸುತ್ತಿದ್ದು, ಉಳಿದ ಹುದ್ದೆಗಳು ಭರ್ತಿಯಾಗಬೇಕಿದೆ. ಸಿಬ್ಬಂದಿ ಕೊರತೆ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದ್ದು, ಕ್ರಮ ಕೈಗೊಳ್ಳುವ ಕೆಲಸ ಪ್ರಗತಿಯಲ್ಲಿದೆ. ಈ ಬಾರಿ ಬಜೆಟ್​ನಲ್ಲಿ ಎಲ್ಲ ಕೊರತೆ ನೀಗಿಸಲು ಪೂರ್ವಭಾವಿಯಾಗಿ ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದರು.

ಆಸ್ಪತ್ರೆಯಲ್ಲಿ ಶನಿವಾರ ಮತ್ತು ಭಾನುವಾರ ವೈದ್ಯ ಮತ್ತು ಸಿಬ್ಬಂದಿ ಇಲ್ಲದಿರುವ ಬಗ್ಗೆ ದೂರು ವ್ಯಕ್ತವಾಗಿದೆ. ವೈದ್ಯ, ಸಿಬ್ಬಂದಿಗಎ ವಾರಕ್ಕೊಮ್ಮೆಯಾದರೂ ಬಿಡುವು ಬೇಕು. ಆದರೆ ಒಂದೇ ದಿನ ರಜೆ ಹಾಕುವ ಬದಲು ರೊಟೇಷನ್ ಬೇಸಿಸ್​ನಲ್ಲಿ ವಾರದಲ್ಲಿ ಒಂದು ದಿನ ರಜೆ ತೆಗೆದುಕೊಂಡು ದೂರು ನಿವಾರಿಸುವಂತೆ ಜಿಲ್ಲಾ ಸರ್ಜನ್​ಗೆ ಸೂಚನೆ ನೀಡಲಾಗಿದೆ

Leave a Reply

Your email address will not be published. Required fields are marked *

Back To Top