ಎಸ್ಸೆಸ್ಸೆಲ್ಸಿ,ಪಿಯುಸಿ ಫಲಿತಾಂಶ ಹೆಚ್ಚಿಸಲು ಬೇಕು ಶ್ರಮ

blank

ಚಿತ್ರದುರ್ಗ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಸೆಕೆಂಡ್ ಪಿಯುಸಿ ಫಲಿತಾಂಶಕ್ಕೆ ಹೆಚ್ಚಳಕ್ಕೆ ಶ್ರಮಿಸುವಂತೆ,ಶಿಕ್ಷಕರು,ಉಪನ್ಯಾಸಕರಿಗೆ ಪಿಯು ಡಿ ಡಿ ಆರ್.ಪುಟ್ಟಸ್ವಾಮಿ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ,ಜಿಲ್ಲೆಯ ಎಸ್‌ಎಸ್‌ಎಲ್‌ಸಿ,ಪಿಯುಸಿ ಫಲಿತಾಂಶ ಬಹಳ ಕಡಿಮೆ ಇ ದ್ದು,ಈ ಬಾರಿ ಫಲಿತಾಂಶ ಹೆಚ್ಚಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಇದಕ್ಕೆ ವಿದ್ಯಾರ್ಥಿಗಳ ಸಹಕಾರವೂ ಮುಖ್ಯವಾಗಿ ಬೇಕು. ಅಧ್ಯ ಯನದಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ ಎಂದರು.
ಪ್ರಾಂಶುಪಾಲ ಎಚ್.ಬಿ.ನರಸಿಂಹಮೂರ್ತಿ ಮಾತನಾಡಿ,ಸರ್ಕಾರಿ ಶಾಲೆ,ಕಾಲೇಜುಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಬ ಹಳ ಪ್ರಾಮಾಣಿಕವಾಗಿ ಓದಿ ಇಲ್ಲಿಗೆ ಬಂದಿರುತ್ತಾರೆ. ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉದ್ಯೋಗಕ್ಕೆ ಸೇರಿರುತ್ತಾರೆ. ಸ ರ್ಕಾರಿ ಶಾಲೆಗಳಲ್ಲಿ ಓದಿದವರೇ ವಿವಿಧ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿದ್ದು, ಸರ್ಕಾರಿ ಶಾಲೆ ಎಂದು ಮೂಗು ಮುರಿಯುವ ಮನಸ್ಥಿತಿ ಯಿಂದ ಜನ ಹೊರ ಬರಬೇಕೆಂದರು.
ಹಿರಿಯ ಉಪನ್ಯಾಸಕ ಪ್ರೊ.ಬಿ.ಕೃಷ್ಣಪ್ಪ,ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಬಿ.ಆರ್.ಶಿವಕುಮಾರ್ ಮಾತನಾಡಿದರು. ಸಾಹಿತಿ ಪ್ರೊ. ಎಂ.ಜಿ.ರಂಗಸ್ವಾಮಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್, ಎನ್.ನರಸಿಂಹಮೂರ್ತಿ,ಪುಟ್ಟ ಮಕ್ಮ,ಸಂತೋಷ್,ದೊಡ್ಡಯ್ಯ,ಚನ್ನಬಸಪ್ಪ,ಡಾ.ಹೇಮಂತರಾಜ್,ಇ.ಮಹೇಶಬಾಬು ಇತರರಿದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…