25.9 C
Bengaluru
Wednesday, January 22, 2020

ಏಕಾಗ್ರತೆ ಸಾಧಿಸಿದರೆ ಜೀವನದಲ್ಲಿ ಯಶಸ್ಸು

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಮೂಡಿಗೆರೆ: ಮಾಡುವ ಕೆಲಸದಲ್ಲಿ ಏಕಾಗ್ರತೆ ಸಾಧಿಸುವ ಸಾಮರ್ಥ್ಯ ಯಾರಲ್ಲಿ ಇರುತ್ತೋ ಅಂಥವರು ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು.

ಪಟ್ಟಣದ ಬಿಜಿಎಸ್ ಶಾಲೆ ಆವರಣದಲ್ಲಿ ಶನಿವಾರ ತಾಲೂಕು ಪತ್ರಕರ್ತರ ಸಂಘ, ಜಿಲ್ಲಾ ಚೆಸ್ ಅಸೋಸಿಯೇಷನ್ ಮತ್ತು ಬಿಜಿಎಸ್ ಶಿಕ್ಷಣ ಸಂಸ್ಥೆಯಿಂದ ಏರ್ಪಡಿಸಿದ್ದ ಅಂತರ್ ಜಿಲ್ಲಾ ಶಾಲೆಗಳ ಚೆಸ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ಚದುರಂಗ ಮನಸ್ಸನ್ನು ಕೇಂದ್ರೀಕರಿಸುವಂತ ಕ್ರೀಡೆ. ಮನಸ್ಸಿನ ಮೇಲೆ ಹಿಡಿತ ಸಾಧಿಸುವ ಶಕ್ತಿಯನ್ನು ಪ್ರಾಥಮಿಕ ಹಂತದಲ್ಲೇ ಸಂಪಾದಿಸಿದರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಚದುರಂಗ ಬುದ್ಧಿವಂತರ ಕ್ರೀಡೆ. ಮನಸ್ಸನ್ನು ಕೇಂದ್ರೀಕರಿಸಿಕೊಂಡು ಜೀವನದಲ್ಲಿ ಗುರಿ ತಲುಪಲು ಚದುರಂಗದಾಟ ಪೂರಕವಾಗಿದೆ. ಈ ಆಟ ಪ್ರತಿಯೊಬ್ಬ ಮನುಷ್ಯನ ಜೀವನಕ್ಕೆ ಸಂಬಂಧಿಸಿರುತ್ತದೆ. ರಾಜಕಾರಣಿಗಳು ಮೊದಲು ಇಂತಹ ಕ್ರೀಡೆಯನ್ನು ಕಲಿತಿರಬೇಕು. ಅಲ್ಲದೆ ಚದುರಂಗದಾಟದ ಬಗ್ಗೆ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಲಿಸಿಕೊಡಬೇಕು ಎಂದು ಸಲಹೆ ನೀಡಿದರು.

ತಾಪಂ ಅಧ್ಯಕ್ಷ ಕೆ.ಸಿ.ರತನ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಆರ್.ನಾಗರತ್ನಾ, ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಸುಧೀರ್ ಕಡಿದಾಳ್, ಡಿಸ್ಟ್ರಿಕ್ ಚೆಸ್ ಅಸೋಸಿಯೇಷನ್ ಅಧ್ಯಕ್ಷ ನಯನ ತಳವಾರ, ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಷನ್ ಉಪ ಕಾರ್ಯದರ್ಶಿ ತ್ಯಾಗರಾಜು, ಬಿಜಿಎಸ್ ಶಾಲೆ ಪ್ರಾಚಾರ್ಯ ರವೀಂದ್ರಕುಮಾರ್ ಶ್ರೀವಾತ್ಸವ್, ಪಿಯು ಕಾಲೇಜಿನ ಪ್ರಾಚಾರ್ಯ ಸಂದೇಶ್, ಅಮರ್​ನಾಥ್ ಇತರರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...