Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಏತ ನೀರಾವರಿ ಅವ್ಯವಹಾರ ಪ್ರಕರಣ, ಭಾಗಿಯಾದವರ ವಿರುದ್ಧ ಕೇಸು

Tuesday, 25.10.2016, 12:18 PM       No Comments

Shivamogga Web

ಶಿವಮೊಗ್ಗ: ಕೊಮ್ಮನಾಳು ಬೂದಿಗೆ ಏತ ನೀರಾವರಿ ಅವ್ಯವಹಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುತ್ತೇವೆ. ಜತೆಗೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಹೊಳಲೂರಿನಲ್ಲಿರುವ ಏತ ನೀರಾವರಿಯ ಪಂಪ್ ಹೌಸ್​ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008ರಲ್ಲಿ ಕಾಮಗಾರಿ ಆರಂಭಗೊಂಡಾಗಿನಿಂದ ಇದುವರೆಗೆ ಎಷ್ಟು ಮಂದಿ ಇಂಜಿನಿಯರ್​ಗಳು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಸದ್ಯದಲ್ಲೇ ಸಿಗಲಿದೆ. ಜತೆಗೆ ಈಗಲೇ ಗುತ್ತಿಗೆದಾರ ಪಾವತಿಸಿದ ಇಎಂಡಿ ಹಣ ಒಂದೂವರೆ ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಜತೆಗೆ ಯೋಜನೆ ಅನುಷ್ಠಾನಕ್ಕೆ ತಗಲುವ ಹೆಚ್ಚುವರಿ ಹಣವನ್ನು ಗುತ್ತಿಗೆದಾರರಿಂದಲೇ ವಸೂಲಿ ಮಾಡಲು ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು.

ಕಾಮಗಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ತಂತ್ರಜ್ಞರ ತಂಡ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಿದೆ. ಅದರಲ್ಲಿ ಈಗಾಗಲೇ ನಡೆದಿರುವ ಕಾಮಗಾರಿಯಲ್ಲಿ ಆಗಿರುವ ಲೋಪದೋಷಗಳನ್ನೂ ತಿಳಿಸಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರೊದಗಿಸಲು ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮೂಲ ಯೋಜನೆಯಂತೆ ಕಾಮಗಾರಿ ನಡೆಸದೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಈಗಾಗಲೇ ಪರಿಶೀಲನೆ ನಡೆಸಿರುವ ತಂತ್ರಜ್ಞರ ಸಮಿತಿ ಪರಿಪೂರ್ಣ ವರದಿ ಸಲ್ಲಿಸಿದ ಬಳಿಕ ಯೋಜನೆ ಪೂರ್ಣಗೊಳ್ಳಲು ಎಷ್ಟು ಅನುದಾನ ಬೇಕಾಗುತ್ತದೆ ಎಂಬುದು ತಿಳಿಯುತ್ತದೆ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ಭರಪೂರ ನೀರಿದೆ. ಆದರೆ ನೀರಾವರಿ ಯೋಜನೆಗಳು ಅನುಷ್ಠಾನಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಚೆಕ್ ಡ್ಯಾಂ ಸೇರಿದಂತೆ ನೀರಾವರಿ ಯೋಜನೆ ಅನುಷ್ಠಾನಕ್ಕೆ 76 ಕೋಟಿ ರೂ. ಬಿಡುಗಡೆ ಮಾಡಿದ್ದೇನೆ ಎಂದರು.

ಈರುಳ್ಳಿಗೆ ಬೆಂಬಲ ಬೆಲೆ

ಈರುಳ್ಳಿ ಬೆಳೆ ಸಂಪೂರ್ಣ ಕುಸಿದಿದೆ. ಐರುಳ್ಳಿ ಪ್ರತಿ ಕೆ.ಜಿಗೆ 11 ರೂ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರಸರ್ಕಾರದ ಮೇಲೆ ಒತ್ತಡ ಹೇರಿದ್ದೇವೆ. ರೈತರು ಈರುಳ್ಳಿ ಮಾರದೇ ಸ್ವಲ್ಪ ದಿನ ಕಾಯಬೇಕು. ಶೀಘ್ರವೇ ಬೆಂಬಲ ಬೆಲೆ ನಿಗದಿಯಾಗಲಿದೆ ಎಂದರು.

ಅಡಕೆ, ಕೊಬ್ಬರಿಗೂ ಬೆಂಬಲ ಬೆಲೆ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಇವುಗಳಿಗೂ ಶೀಘ್ರವೇ ಬೆಂಬಲ ಬೆಲೆ ಘೊಷಣೆಯಾಗಲಿದೆ ಎಂದು ತಿಳಿಸಿದರು.

Shivamogga 1 New Shivamogga 3 New

(ವಿವರ, ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top