ಐಟಿ ದಾಳಿ ಖಂಡಿಸಿ ರಸ್ತೆ ಸಂಚಾರ ತಡೆ

ಹುಬ್ಬಳ್ಳಿ: ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ ಆತ್ಮಹತ್ಯೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ಸಂಚಾರ ತಡೆ ನಡೆಸಿದರು.

ಐಟಿ ದಾಳಿ ನಡೆಸುವ ಮೂಲಕ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಆತ್ಮಸ್ಥೈರ್ಯ ಕುಗ್ಗಿಸಲು ಬಿಜೆಪಿ ನಡೆಸಿರುವ ಷಡ್ಯಂತ್ರ ಎಂದು ಕಾಂಗ್ರೆಸ್ ಅಭಿಪ್ರಾಯಿಸಿದೆ.

ಮಾಜಿ ಸಂಸದ ಐ.ಜಿ. ಸನದಿ ಮಾತನಾಡಿ, ಆದಾಯ ತೆರಿಗೆ ಅಧಿಕಾರಿಗಳು ನಡೆಸಿರುವ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಅಣತಿಯಂತೆ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಕೇಂದ್ರೀಯ ತನಿಖಾದಳ ಹಾಗೂ ಭಾರತೀಯ ಚುನಾವಣೆ ಆಯೋಗ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.

ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ರಾಜಶೇಖರ ಮೆಣಸಿನಕಾಯಿ, ಅನ್ವರ ಮುಧೋಳ, ಬಾಬಾಜಾನ ಮುಧೋಳ, ಶಾಕಿರ ಸನದಿ, ವಸಂತ ಲದವಾ, ಶರಣಪ್ಪ ಕೊಟಗಿ, ಮಹೇಶ ದಾಬಡೆ, ಶೋಭಾ ಕಮತರ, ಇತರರು ಇದ್ದರು.

Leave a Reply

Your email address will not be published. Required fields are marked *