More

  ಐಪಿಎಲ್ ಬೆಟ್ಟಿಂಗ್‌ನಿಂದ ಸಾಲ: ಯುವಕ ಆತ್ಮಹತ್ಯೆ

  ರಾಯಚೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಿಂದಾಗಿ ಲಕ್ಷಾಂತರ ರೂ. ಮಾಡಿಕೊಂಡಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಲಾಡ್ಜ್‌ನಲ್ಲಿ ಭಾನುವಾರ ಜರುಗಿದೆ.
  ಮಸ್ಕಿ ತಾಲೂಕಿನ ಉದ್ಭಾಳ ಗ್ರಾಮದ ಮುದಿಬಸವ (29) ಲಾಡ್ಜ್‌ನ ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾಡ್ಜ್‌ನ ರೂಮ್ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಸಿಬ್ಬಂದಿ ಬಾಗಿಲು ತೆಗೆದು ಒಳಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
  ಈ ಬಾರಿಯ ಐಪಿಎಲ್ ಸರಣಿಯಲ್ಲಿ ಬೆಟ್ಟಿಂಗ್‌ಗಾಗಿ ಮುದಿಬಸವ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಆದರೆ ಆ ಬೆಟ್ಟಿಂಗ್ ಕಟ್ಟಿದ್ದ ಪಂದ್ಯಗಳು ಸೋತಿದ್ದರಿಂದ ಲಕ್ಷಾಂತರ ರೂ. ಸಾಲವಾಗಿತ್ತು. ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
  ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts