Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಐಫೆಲ್​ಗೆ ಮುಸುಕಿದ ಮಂಜು

Tuesday, 13.02.2018, 3:00 AM       No Comments

ವಿಶ್ವದ ಏಳು ಅದ್ಭುತಗಳಲ್ಲಿ ಒಂದಾದ ಪ್ಯಾರಿಸ್​ನ ಐಫೆಲ್ ಟವರ್ ಚಳಿಗೆ ನಡುಗುತ್ತಿದೆ. ಅರ್ಥಾತ್ ಹಿಮಪಾತ ಮತ್ತು ಮಂಜು ಮುಸುಕಿದೆ. ಈ ಕಾರಣದಿಂದ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಿಮ ಬಿದ್ದಿರುವುದರಿಂದ ಪ್ರವಾಸಿಗರು ಜಾರಿ ಬೀಳುವ ಆತಂಕದ ಕಾರಣ ಎಲಿವೇಟರ್​ಗಳು ಕೂಡ ಕಾರ್ಯನಿರ್ವಹಿಸಲು ಶಕ್ತವಾಗಿಲ್ಲ ಹೀಗಾಗಿ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲಸಗಾರರು ಮಂಜನ್ನು ತೆಗೆಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮಂಜು ತೆಗೆಯಲು ಸಾಮಾನ್ಯವಾಗಿ ಉಪ್ಪನ್ನು ಬಳಸಲಾಗುತ್ತದೆ. ಆದರೆ, ಉಪ್ಪು ಬಳಸಿದರೆ ಲೋಹ ಸವೆದು ಹೋಗುವ ಆತಂಕವಿರುವುದರಿಂದ ಇದನ್ನು ಬಳಸುತ್ತಿಲ್ಲ. ಇದರಿಂದ ಐಫೆಲ್ ಟವರ್ ವೀಕ್ಷಣೆಗಾಗಿ ಆಗಮಿಸುತ್ತಿರುವ ಪ್ರವಾಸಿಗರಿಗೆ ನಿರಾಸೆಯಾಗಿದೆ. ಪ್ಯಾರಿಸ್​ನಲ್ಲಿ ರಾತ್ರಿ ಬೆಳಗಾಗುವುದರೊಳಗೆ ಆಗಿರುವ ಭಾರಿ ಹಿಮಮಳೆ ಸಂಚಾರಕ್ಕೂ ಅಡ್ಡಿ ಉಂಟು ಮಾಡಿದೆ. ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ರಸ್ತೆಗಳು ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲದ ಕಾರಣದಿಂದ ಜನರು ಕಾರುಗಳಲ್ಲಿ, ರೈಲು ನಿಲ್ದಾಣಗಳಲ್ಲೇ ದಿನ ಕಳೆಯುವಂತಾಗಿದೆ. ಹೀಗಾಗಿ ಜನರಿಗೆ ಆಶ್ರಯ ಕಲ್ಪಿಸುವ ವ್ಯವಸ್ಥೆಗಳನ್ನೂ ಮಾಡಲಾಗಿದೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top