26.8 C
Bangalore
Friday, December 13, 2019

ಐಶ್ವರ್ಯ, ಪದವಿಗಳು ನಿಜವಾದ ಸಂಪತ್ತಲ್ಲ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಹಣ, ಐಶ್ವರ್ಯ, ಪದವಿಗಳೆಲ್ಲ ಸಂಪತ್ತಲ್ಲ. ಜ್ಞಾನವೇ ನಿಜವಾದ ಸಂಪತ್ತು. ಇಂಥ ಸಂಪತ್ತನ್ನು ವಿದ್ಯಾರ್ಥಿಗಳು ಉಳಿಸಿಕೊಳ್ಳಬೇಕು ಎಂದು ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಸಲಹೆ ನೀಡಿದರು.

ವಿದ್ಯಾನಗರದ ಬಿವಿಬಿ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಶನಿವಾರ ನಡೆದ ಕೆಎಲ್​ಇ ತಾಂತ್ರಿಕ ವಿವಿಯ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಪದವಿ ಮುಗಿದ ನಂತರ ವಿದ್ಯಾರ್ಥಿಗಳು ಕಷ್ಟಗಳನ್ನು ಎದುರಿಸಬೇಕಾಗಬಹುದು. ಆಗ ಸವಾಲು ಸ್ವೀಕರಿಸಿ ಯಶಸ್ಸು ಸಾಧಿಸಬೇಕು. ಕಷ್ಟಪಟ್ಟು ಕೆಲಸ ಮಾಡುವುದಲ್ಲದೇ ಕಂಪನಿಗಳಿಗೆ ಹಾಗೂ ದೇಶಕ್ಕೆ ಆಸ್ತಿಯಾಗಬೇಕು. ನೀವು ಪಡೆಯುವ ಪದವಿ, ಗಳಿಸುವ ಹಣಕ್ಕಿಂತ ಆತ್ಮವಿಶ್ವಾಸ ದೊಡ್ಡದು. ಸಾವಿರ ಜನ ನಿಮ್ಮ ವಿರುದ್ಧ ಕೈ ತೋರಿಸಿದರೂ ನಿಮ್ಮ ನಂಬಿಕೆ ಗಟ್ಟಿಯಾಗಿದ್ದರೆ ಯಶಸ್ಸು ಸಾಧಿಸಲು ಸಾಧ್ಯ. ನೀವು ಗಳಿಸುವ ಅಂಕ, ಸಂಪಾದಿಸುವ ಜ್ಞಾನಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾಧನೆ ಮಾಡಲು ಬಯಸುವವರು ಮೊದಲು ಪುಸ್ತಕಗಳನ್ನು ತಮ್ಮ ಸಂಗಾತಿಗಳನ್ನಾಗಿ ಮಾಡಿಕೊಳ್ಳಬೇಕು. ಹಣ, ಕೀರ್ತಿ ಸಂಪಾದಿಸಲು ಅಡ್ಡ ಹಾದಿ ಹಿಡಿಯಬಾರದು. ಹಣ ಮದ್ಯವಿದ್ದಂತೆ, ಅದು ಬೇಗನೆ ಅಮಲೇರುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಕಿವಿ ಮಾತು ಹೇಳಿದರು. ಬಿವಿಬಿ ಕಾಲೇಜ್​ನಲ್ಲಿ ಇಂಜಿನಿಯರಿಂಗ್​ಗೆ ಸೇರಿದ ಮೊದಲ ವಿದ್ಯಾರ್ಥಿನಿ ನಾನಾಗಿದ್ದೆ. ಏಕೈಕ ವಿದ್ಯಾರ್ಥಿನಿಯೂ ಆಗಿದ್ದೆ. ಕೆಲವರು ಕುಹಕವಾಡಿದರು. ಅದ್ಯಾವುದಕ್ಕೂ ಕುಂದದೇ ಪದವಿ ಪೂರೈಸಿ ಬೇರೆ ಬೇರೆ ಕಡೆ ಕೆಲಸ ಮಾಡಿದೆ ಎಂದು ತಾವು ಕಲಿತ ದಿನಗಳನ್ನು ಸುಧಾಮೂರ್ತಿ ಅವರು ಮೆಲಕು ಹಾಕಿದರು.

ಕೆಎಲ್​ಇ ಸಂಸ್ಥೆಯ ಚೇರ್ಮನ್ ಹಾಗೂ ಕೆಎಲ್​ಇ ತಾಂತ್ರಿಕ ವಿವಿ ಕುಲಪತಿ ಡಾ. ಪ್ರಭಾಕರ ಕೋರೆ ಅವರು ಅಧ್ಯಕ್ಷತೆ ವಹಿಸಿದ್ದರು.

ಉಪ ಕುಲಪತಿ ಡಾ. ಅಶೋಕ ಶೆಟ್ಟರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಎಲ್​ಇ ತಾಂತ್ರಿಕ ವಿವಿ ಆದ ನಂತರ ಪ್ರಥಮ ಘಟಿಕೋತ್ಸವ ಇದಾಗಿದೆ. ಸಂಶೋಧನೆಗೆ ಒತ್ತು ನೀಡುವ ಉದ್ದೇಶದಿಂದ ಕೆಎಲ್​ಇ ತಾಂತ್ರಿಕ ವಿವಿ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸುತ್ತಿದೆ. ಇಲ್ಲಿನ ಬೋಧಕ ಸಿಬ್ಬಂದಿ ಸುಮಾರು 700 ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. 450 ಪ್ರಬಂಧಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸೆಮಿನಾರ್​ಗಳಲ್ಲಿ ಪ್ರಸ್ತುತಪಡಿಸಿದ್ದಾರೆ. 16 ಹೊಸ ಯೋಜನೆಗಳಿಗೆ ಪೇಟೆಂಟ್ ಸಲ್ಲಿಸಿದ್ದು, 10ಕ್ಕೆ ಅನುಮೋದನೆ ಸಿಕ್ಕಿದೆ. ಎಲೆಕ್ಟ್ರಾನಿಕ್ ಚಿಪ್ ವಿನ್ಯಾಸಗೊಳಿಸಿದ ಐಐಟಿಯೇತರ ಭಾರತ ಏಕೈಕ ಸಂಸ್ಥೆ ನಮ್ಮದು. ಎಂಐಟಿ ವರದಿ ಪ್ರಕಾರ ಗುಣಮಟ್ಟದ ಶಿಕ್ಷಣ ನೀಡುವ ಐದು ಜಾಗತಿಕ ಸಂಸ್ಥೆಗಳಲ್ಲಿ ಕೆಎಲ್​ಇ ಸಂಸ್ಥೆಯೂ ಒಂದೆಂದು ಗುರುತಿಸಲಾಗಿದೆ. ಆಲ್​ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್(ಎಐಸಿಟಿಇ) ಪರೀಕ್ಷಾ ಸುಧಾರಣಾ ನೀತಿ-2018, ಕೆಎಲ್​ಇ ಟೆಕ್ ಪರೀಕ್ಷಾ ವ್ಯವಸ್ಥೆಯ ಮಾದರಿಯನ್ನು ಹೊಂದಿದೆ. ನ್ಯಾಷನಲ್ ಬೋರ್ಡ್ ಆಫ್ ಅಕ್ರಿಡೇಷನ್ (ಎನ್​ಬಿಎ)ಗೊಳಪಟ್ಟಿದ್ದು, ನವೀನ, ಗುಣಮಟ್ಟದ ಶಿಕ್ಷಣವನ್ನು ಸಂಸ್ಥೆಯು ಪ್ರತಿಫಲಿಸುತ್ತಿದೆ ಎಂದು ಖುಷಿ ಹಂಚಿಕೊಂಡರು. ನಂತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 15 ಚಿನ್ನ ಹಾಗೂ 16 ಬೆಳ್ಳಿ ಪದಕಗಳನ್ನು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು. 1062 ಪದವಿ ಹಾಗೂ 186 ಸ್ನಾತಕೋತ್ತರ ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದರು.

ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಅನಿಲ್ ನಂದಿ, ಅಕಾಡೆಮಿಕ್ ಡೀನ್ ಡಾ. ಪ್ರಕಾಶ ತಿವಾರಿ, ರಿಜಿಸ್ಟ್ರಾರ್ ಪ್ರೊ. ಎನ್.ಎಚ್. ಆಯಾಚಿತ್, ಇತರರು ಇದ್ದರು.

ಮೂಲತಃ ಸಾಗರದವಳು ನಾನು. ಎಸ್​ಎಸ್​ಎಲ್​ಸಿಯಲ್ಲಿ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದಿದ್ದೆ. ಪಿಯುಸಿಯಲ್ಲಿ ಒಳ್ಳೆಯ ಅಂಕಗಳು ಬಂದವು. ಮೊದಲಿನಿಂದಲೂ ಕಂಪ್ಯೂಟರ್ ಸೈನ್ಸ್ ಓದಬೇಕೆಂಬ ಇಚ್ಛೆ ಇತ್ತು. ಈ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದೇನೆ. ಎಂಎಸ್ ಮಾಡುವ ಆಸೆ ಇದೆ. | ಸಿಂಧು ಹೆಗಡೆ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

ಉದ್ಯೋಗ ಅವಕಾಶ ಜಾಸ್ತಿ ಎಂಬ ಕಾರಣಕ್ಕೆ ಆಟೋಮೇಷನ್ ಮತ್ತು ರೋಬೊಟಿಕ್ಸ್​ನಲ್ಲಿ ಇಂಜಿನಿಯರಿಂಗ್​ನಲ್ಲಿ ಪದವಿ ಪಡೆದೆ. ಈಗಾಗಲೇ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದೇನೆ. ಚಿನ್ನದ ಪದಕ ಪಡೆದಿರುವುದಕ್ಕೆ ಖುಷಿಯಾಗಿದೆ. ಉನ್ನತ ಅಧ್ಯಯನ ಮಾಡಬೇಕೆಂಬ ಇಚ್ಛೆ ಇದೆ. | ಅಂಜಲಿ ಜಿ. ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

ಸಿವಿಲ್ ಇಂಜಿನಿಯರಿಂಗ್​ನಲ್ಲಿ ಪದವಿ ಪಡೆದ ರೈತನ ಮಗ ಅನ್ನುವುದಕ್ಕೆ ನನಗೆ ಹೆಮ್ಮೆಯಾಗುತ್ತದೆ. ಕಟ್ಟಡ ನಿರ್ಮಾಣ ವಿಭಾಗದಲ್ಲಿ ಈಗ ಬೂಮ್ ಇದೆ. ಹಣದ ತೊಂದರೆ ಇದ್ದರೂ ಬಿಸಿಎಂ ಹಾಸ್ಟೆಲ್​ನಲ್ಲಿ ಉಳಿದುಕೊಂಡು ಅಧ್ಯಯನ ಮಾಡಿದೆ. ಚಿನ್ನದ ಪದಕ ಬಂದಿರುವುದಕ್ಕೆ ಸಂತೋಷವಾಗಿದೆ. | ವಿನಾಯಕ ಗೊಂದಿ ಚಿನ್ನದ ಪದಕದ ವಿದ್ಯಾರ್ಥಿ

ಬೆಳಗಾವಿ ನನ್ನೂರು. ಪಿಯುಸಿ ಮುಗಿದ ಮೇಲೆ ಬಹಳಷ್ಟು ಕಾಲೇಜ್​ಗಳು ಕಣ್ಣ ಮುಂದೆ ಇದ್ದವು. ನನ್ನ ಆಯ್ಕೆ ಕೆಎಲ್​ಇ ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಓದಬೇಕು ಅನ್ನುವುದಿತ್ತು. ಅಪ್ಪ-ಅಮ್ಮನ ಆಸೆಯಂತೆ ಚಿನ್ನದ ಪದಕ ಪಡೆದಿದ್ದೇನೆ. ಉನ್ನತ ಅಭ್ಯಾಸ ಮಾಡುವ ಉತ್ಕಟಾಕಾಂಕ್ಷೆ ಇದೆ. | ಶುಭಂ ಪಾಟೀಲ ಚಿನ್ನದ ಪದಕ ಪಡೆದ ವಿದ್ಯಾರ್ಥಿ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....