ಒಂದು ರಾತ್ರಿಯ ಕಥೆ!

Latest News

ಸಾಲ ಮರುಪಾವತಿಸದ ಮಹಿಳೆಯರ ಮನೆಗೆ ಬೀಗ ಜಡಿದ ಹಣಕಾಸು ಸಂಸ್ಥೆ: ಛಾವಣಿ ಏರಿ ಮನೆ ಪ್ರವೇಶಿಸುತ್ತಿರುವ ಮಹಿಳೆಯರು

ಮೈಸೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್​ ಸಂಸ್ಥೆ ಇಬ್ಬರು ಬಡ ಮಹಿಳೆಯರ ಮನೆಗೆ ಬೀಗ ಜಡಿದಿದೆ. ಪಡೆದಿದ್ದ ಸಾಲದ ಎರಡು...

ಕುರಿಯ ಡಬಲ್ ಮರ್ಡರ್ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸಿದ ಪುತ್ತೂರು ಪೊಲೀಸರು

ಪುತ್ತೂರು: ಕುರಿಯ ಗ್ರಾಮದ ಅಜಲಾಡಿಯಲ್ಲಿ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದ ಜೋಡಿ ಕೊಲೆ ಕೃತ್ಯದ ಆರೋಪಿಯನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

‘ಜೋಶ್’ ಚಿತ್ರದ ಮೂಲಕ ನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟ ರಾಕೇಶ್ ಅಡಿಗ, ಗಾಯಕರಾಗಿಯೂ ಖ್ಯಾತಿ ಪಡೆದಿದ್ದಾರೆ. ಹೀರೋ, ಪೋಷಕ ನಟ, ವಿಲನ್.. ಹೀಗೆ ಎಲ್ಲ ರೀತಿಯಲ್ಲೂ ಕಾಣಿಸಿಕೊಂಡ ಅವರೀಗ ತೆರೆ ಹಿಂದೆ ಸರಿದಿದ್ದಾರೆ! ಅರ್ಥಾತ್, ನಿರ್ದೇಶಕನ ಟೋಪಿ ಧರಿಸಿ, ಕ್ಯಾಮರಾ ಹಿಂದೆ ನಿಂತಿದ್ದಾರೆ. ಹೌದು, ರಾಕೇಶ್ ಚೊಚ್ಚಲ ಬಾರಿಗೆ ಆಕ್ಷನ್-ಕಟ್ ಹೇಳಿರುವ ‘ನೈಟ್ ಔಟ್’ ಸಿನಿಮಾ ಈ ವಾರ (ಏ.12) ಚಿತ್ರಮಂದಿರಕ್ಕೆ ಕಾಲಿಡುತ್ತಿದೆ.

ಬಣ್ಣದ ಲೋಕಕ್ಕೆ ಕಾಲಿಟ್ಟ ದಿನಗಳಿಂದಲೂ ರಾಕೇಶ್​ಗೆ ನಿರ್ದೇಶನದ ಕಡೆಗೆ ಒಲವು ಇತ್ತಂತೆ. ಆ ಕಾರಣಕ್ಕಾಗಿಯೇ ನಟನೆ ಜತೆಜತೆಗೆ ತೆರೆಹಿಂದಿನ ಕಲೆಗಳನ್ನು ಅವರು ಕರಗತ ಮಾಡಿಕೊಂಡಿದ್ದಾರೆ. ಅದರ ಫಲವೇ ‘ನೈಟ್ ಔಟ್’. ‘ನಾನು ಕಲಾವಿದನಾಗಿ ಅಭಿನಯಿಸುತ್ತಿದ್ದ ಚಿತ್ರಗಳಲ್ಲಿ ನಿರ್ದೇಶಕರ ಕೆಲಸವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೆ. ಸಾಕಷ್ಟು ತಯಾರಿ ಮಾಡಿಕೊಂಡ ನಂತರವೇ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದೇನೆ. ಮಾಮೂಲಿ ಕಥೆಗಳಿಗಿಂತ ಭಿನ್ನವಾಗಿ ಏನಾದರೂ ಹೇಳಬೇಕೆಂಬ ಕಾರಣಕ್ಕೆ, ಹೊಸ ಶೈಲಿಯ ಕಥೆಯೊಂದನ್ನು ಇದರಲ್ಲಿ ಹೇಳುತ್ತಿದ್ದೇನೆ. ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯಲ್ಲಿ ಈ ಸಿನಿಮಾ ಸಾಗಲಿದೆ. ಶೀರ್ಷಿಕೆಯೇ ಹೇಳುವಂತೆ ಒಂದು ರಾತ್ರಿ ನಡೆಯುವ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಹಾಗಾಗಿ, ರಾತ್ರಿ ಹೊತ್ತೇ ಹೆಚ್ಚು ಶೂಟಿಂಗ್ ಮಾಡಿದ್ದೇವೆ’ ಎಂದು ಮಾಹಿತಿ ನೀಡುತ್ತಾರೆ ರಾಕೇಶ್.

ಚೊಚ್ಚಲ ಬಾರಿಗೆ ಭರತ್ ನಾಯಕರಾಗಿ ನಟಿಸಿದ್ದು, ‘ಕೇವಲ ಆರು ಗಂಟೆಯಲ್ಲಿ ಏನೇನು ನಡೆಯುತ್ತದೆ ಅನ್ನೋದೆ ಈ ಚಿತ್ರದ ಕಥೆ. ಎಲ್ಲ ಪಾತ್ರಗಳು ಒಂದಕ್ಕೊಂದು ಕನೆಕ್ಟ್ ಆಗುತ್ತವೆ. ಥ್ರಿಲ್ಲರ್ ಜತೆ ಕಾಮಿಡಿಯೂ ಇದೆ. ಹಾಡುಗಳು ಮತ್ತು ಟ್ರೇಲರ್​ಗೆ ಸಿಕ್ಕಿರುವಷ್ಟೇ ಉತ್ತಮ ಪ್ರತಿಕ್ರಿಯೆ ಚಿತ್ರಕ್ಕೂ ಸಿಗಲಿದೆ ಎಂಬ ಭರವಸೆ ಇದೆ’ ಎನ್ನುತ್ತಾರೆ. ‘ಸಂಕಷ್ಟಕರ ಗಣಪತಿ’ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್​ವುಡ್ ಪ್ರವೇಶಿಸಿದ ನಟಿ ಶ್ರುತಿ ಗೊರಾಡಿಯಾ ‘ನೈಟ್ ಔಟ್’ಗೂ ಹೀರೋಯಿನ್. ‘ಇಲ್ಲಿ ನನ್ನ ಪಾತ್ರದ ಹೆಸರು ಶ್ರುತಿ ಎಂದೇ ಇದೆ. ಪುಟ್ಟ ಊರಿನಿಂದ ಬೆಂಗಳೂರಿಗೆ ಬರುವ ಮುಗ್ಧ ಹುಡುಗಿಯ ಪಾತ್ರ ನನ್ನದು. ಇಲ್ಲಿಗೆ ಬಂದ ಮೇಲೆ ಏನೇನು ಸವಾಲುಗಳನ್ನು ಆಕೆ ಎದುರಿಸುತ್ತಾಳೆ ಮತ್ತು ಅವುಗಳನ್ನು ಹೇಗೆಲ್ಲ ಬಗೆಹರಿಸಿಕೊಳ್ಳುತ್ತಾಳೆ ಎಂಬುದನ್ನು ತೋರಿಸಲಾಗಿದೆ. ನಾನಿಲ್ಲಿ ಡಿಗ್ಲಾಮರ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದರೂ, ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ’ ಎಂದು ಹೇಳಿಕೊಳ್ಳುತ್ತಾರೆ ಅವರು. ಪೋಷಕ ಪಾತ್ರಗಳಲ್ಲಿ ‘ಕಡ್ಡಿಪುಡಿ’ ಚಂದ್ರು, ಆಶಾರಾಣಿ, ಅಕ್ಷಯ್, ಚಂದನ್ ವಿಜಯ್, ಉಮಾ, ರಾಜಶೇಖರ್, ಸಾರಿಕಾ ಮುಂತಾದವರು ನಟಿಸಿದ್ದಾರೆ. ಬೆಂಗಳೂರು ಸುತ್ತಮುತ್ತ ಅಂದಾಜು 38 ದಿನ ಚಿತ್ರೀಕರಣ ಮಾಡಲಾಗಿದೆ. ನವೀನ್ ಕೃಷ್ಣ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಅರುಣ್ ಅಲೆಗ್ಸಾಂಡರ್ ಛಾಯಾಗ್ರಹಣ ಮಾಡಿದ್ದು, ಸಂಕಲನವನ್ನು ರಿತ್ವಿಕ್ ಮಾಡಿದ್ದಾರೆ. ಚಿತ್ರದ ಹಾಡುಗಳಿಗೆ ಸಮೀರ್ ಕುಲಕರ್ಣಿ ಸಂಗೀತ ಸಂಯೋಜಿಸಿದ್ದು, ಕೆ. ಕಲ್ಯಾಣ್, ವಿಶ್ವಜಿತ್ ರಾವ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. 100ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ.

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​ ಪಿಸಿ ThinkPadX1: ಚೀನಾದಲ್ಲಿ ಲೆನೊವೊ ಟೆಕ್...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ ಬಿರ್ಲಾರ ಕೋಪಕ್ಕೆ ಕಾರಣವಾದ ರಾಣಿ ಮುಖರ್ಜಿ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇಗುಲದ ಗರ್ಭಗುಡಿ ಓಪನ್​: 2...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಆರೋಗ್ಯದ ವದಂತಿಗಳಿಗೆ ಕಿವಿಗೊಡಬೇಡಿ:...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...