25.7 C
Bangalore
Sunday, December 15, 2019

ಒಂದೂವರೆ ವರ್ಷದಲ್ಲಿ ಭೀಮಣ್ಣ ಆಸ್ತಿ ಮೌಲ್ಯ 1.93 ಕೋಟಿ ಹೆಚ್ಚಳ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಕಾರವಾರ/ಯಲ್ಲಾಪುರ: ಕಳೆದ ಒಂದೂವರೆ ವರ್ಷದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಕುಟುಂಬದ ಆಸ್ತಿ ಮೌಲ್ಯ 1.93 ಕೋಟಿ ರೂ. ಹೆಚ್ಚಿದೆ.

2018ರ ಏಪ್ರಿಲ್​ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭೀಮಣ್ಣ ನಾಯ್ಕ ಶಿರಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆಗ ಅವರು ಸಲ್ಲಿಸಿದ ಅಫಿಡವಿಟ್​ನಂತೆ ಕುಟುಂಬದ ಆಸ್ತಿ ಮೌಲ್ಯ 31.22 ಕೋಟಿ ಇತ್ತು. ಈಗ ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರು ನೀಡಿರುವ ಅಫಿಡವಿಟ್​ನಲ್ಲಿ ಒಟ್ಟಾರೆ ಆಸ್ತಿ ಮೌಲ್ಯ 33.15 ಕೋಟಿ ರೂ.ಗಳಾಗಿವೆ. 2008 ರಲ್ಲಿ ಅವರು ಸಮಾಜವಾದಿ ಪಕ್ಷದಿಂದ ಚುನಾವಣೆಗೆ ನಿಂತಾಗ ಆಸ್ತಿಯ ಮೌಲ್ಯ 3.24 ಕೋಟಿ ರೂ. ಗಳಿತ್ತು. ಅವರ ಕುಟುಂಬದ ಒಟ್ಟಾರೆ ಚಿರಾಸ್ತಿ ಮೌಲ್ಯ 9.82 ರೂ.ಕೋಟಿಗಳಾಗಿವೆ. ಚರ ಆಸ್ತಿಯ ಮೌಲ್ಯ 23.32 ಕೋಟಿ ರೂ.ಗಳಾಗಿವೆ. ಭೀಮಣ್ಣ ಸ್ವಂತಕ್ಕೆ, ಪತ್ನಿ ಹಾಗೂ ಮಗ ಸೇರಿ ಅವರಿಗೆ ಏಳು ವಾಹನಗಳಿವೆ. ಶಿರಸಿಯ ಬನವಾಸಿ ಹಾಗೂ ಸಾಗರದ ಆನಂದಪುರ ಸೇರಿ ವಿವಿಧೆಡೆ ಕೃಷಿ ಜಮೀನುಗಳಿವೆ. ಶಿರಸಿಯಲ್ಲಿ ವಾಣಿಜ್ಯ ಕಟ್ಟಡವಿದೆ. ಕುಟುಂಬದ ಬಳಿ ಒಟ್ಟು 1.13 ಕೆಜಿ ಬಂಗಾರದ ಆಭರಣಗಳಿವೆ.

ಪತ್ನಿಯೇ ಶ್ರೀಮಂತೆ!: ಭೀಮಣ್ಣ ಅವರಿಗಿಂತ ಅವರ ಪತ್ನಿ ಗೀತಾ ಅವರೇ ಶ್ರೀಮಂತೆಯಾಗಿದ್ದಾರೆ. ಅವರ ಬಳಿ ಒಟ್ಟಾರೆ 16.56 ಕೋಟಿ ರೂ. ಸ್ಥಿರ ಹಾಗೂ 51 ಲಕ್ಷ ರೂ. ಚರ ಆಸ್ತಿಗಳಿವೆ. ಭೀಮಣ್ಣ ಅವರ ಬಳಿ 5.51 ಕೋಟಿ ರೂ. ಸ್ಥಿರ, 6.61 ಕೋಟಿ ರೂ. ಮೌಲ್ಯದ ಚರ ಆಸ್ತಿಗಳಿವೆ. ಪುತ್ರನ ಬಳಿ 1.25 ಕೋಟಿ ಸ್ಥಿರ, 2.70 ಕೋಟಿ ರೂ. ಚರ ಆಸ್ತಿಗಳಿವೆ.

ಸಾಲವೂ ಹೆಚ್ಚಳ: ಭೀಮಣ್ಣ ಅವರ ಕುಟುಂಬದ ಸಾಲ ಕಳೆದ ವರ್ಷ 23.06 ಕೋಟಿ ಇತ್ತು. ಈಗ 36.24 ರೂ. ಕೋಟಿಗೆ ಹೆಚ್ಚಿದೆ. ಭೀಮಣ್ಣ ಹೆಸರಲ್ಲಿ 14.92, ಪತ್ನಿ ಗೀತಾ ಹೆಸರಲ್ಲಿ 20.32 ಕೋಟಿ ರೂ. ಪುತ್ರ ಅಶ್ವಿನ್ ಹೆಸರಲ್ಲಿ 98 ಲಕ್ಷ ರೂ. ಸಾಲವಿದೆ. 2008 ರಲ್ಲಿ ಅವರ ಕುಟುಂಬ 1.15 ಕೋಟಿ ರೂ. ಸಾಲ ಹೊಂದಿತ್ತು.

1 ಕ್ರಿಮಿನಲ್ ಪ್ರಕರಣ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನೆಲಮಂಗಲ ಠಾಣೆಯಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 171 ಎಚ್ ಮತ್ತು ಇ ಅಡಿ ಪ್ರಕರಣ ದಾಖಲಾಗಿದೆ. ಅದಿನ್ನೂ ವಿಚಾರಣೆ ಹಂತದಲ್ಲಿದೆ.<

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...