25.5 C
Bangalore
Monday, December 16, 2019

ಒಂದೇ ಸ್ಥಾನ ಏರಿಕೆ ಕಂಡ ಜಿಲ್ಲೆ !

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಗದಗ: ಮಾರ್ಚ್-ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇ. 74.05ರಷ್ಟು ಫಲಿತಾಂಶದೊಂದಿಗೆ ಗದಗ ಜಿಲ್ಲೆಯು 31ನೇ ಸ್ಥಾನ ಪಡೆದಿದೆ. ಕಳೆದ ಬಾರಿ ಶೇ. 67.52 ಫಲಿತಾಂಶದೊಂದಿಗೆ 32ನೇ ಸ್ಥಾನ ಪಡೆದಿತ್ತು.
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ, ರಾಜ್ಯಮಟ್ಟದ ರ್ಯಾಂಕಿಂಗ್​ನಲ್ಲಿ ಕಳೆದ ವರ್ಷ ಜಿಲ್ಲೆ 32 ಸ್ಥಾನದಲ್ಲಿದ್ದರೆ ಈ ವರ್ಷ 31 ನೇ ಸ್ಥಾನ ಗಳಿಸಿ ಒಂದು ಸ್ಥಾನ ಏರಿಕೆ ಕಂಡಿದೆ.
ಲಕ್ಷೆ್ಮೕಶ್ವರದ ಎಸ್​ಟಿಪಿಎಂಬಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪ್ರಜ್ವಲ ಸಾತಣ್ಣವರ ಶೇ. 99.68 ರಷ್ಟು ಅಂಕ ಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ನರೇಗಲ್​ನ ಅನ್ನದಾನ ವಿಜಯ ಬಾಲಕಿಯರ ಪ್ರೌಢಶಾಲೆಯ ಚೈತ್ರಾ ಗೌರಿ ಶೇ. 99.52 ತೃತೀಯ ಹಾಗೂ ಲಕ್ಷೆ್ಮೕಶ್ವರದ ಎಸ್​ಟಿಪಿಎಂಬಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕೃಷ್ಣಗೌಡ ಪಾಟೀಲ ಶೇ. 99.36ರಷ್ಟು ಅಂಕ ಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ.
ಗದಗ-ಬೆಟಗೇರಿ ಅವಳಿನಗರದಲ್ಲಿ 14, ಗದಗ ಗ್ರಾಮೀಣ 8, ಮುಂಡರಗಿಯಲ್ಲಿ 7, ರೋಣ 12, ನರಗುಂದ 6, ಶಿರಹಟ್ಟಿಯಲ್ಲಿ 11 ಸೇರಿ ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ 6,413 ಬಾಲಕರು, 6,475 ಬಾಲಕಿಯರು ಸೇರಿ ಒಟ್ಟು 12,888 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದರು. ಆ ಪೈಕಿ 4,423 ಬಾಲಕರು, 5,222 ಬಾಲಕಿಯರು ಸೇರಿ 9,645 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಗದಗ ಗ್ರಾಮೀಣ ಶೇ. 73.20ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ, ಮುಂಡರಗಿ ಶೇ. 72.71 ದ್ವಿತೀಯ, ಶಿರಹಟ್ಟಿ ಶೇ. 67.70 ತೃತೀಯ, ನರಗುಂದ ಶೇ. 67.49 ನಾಲ್ಕನೇ, ಗದಗ ಶಹರ ಶೇ. 67.03 ಐದನೇ ಹಾಗೂ ರೋಣ ಶೇ. 66.53ರಷ್ಟು ಫಲಿತಾಂಶದೊಂದಿಗೆ 6ನೇ ಸ್ಥಾನ ಪಡೆದಿದೆ.
ಕಳೆದ ಕೆಲ ವರ್ಷಗಳ ಸಾಧನೆ ಗಮನಿಸಿದರೆ 2006-07ನೇ ಸಾಲಿನಲ್ಲಿ 3, 2007-08ನೇ ಸಾಲಿನಲ್ಲಿ 4ನೇ ಸ್ಥಾನ ಪಡೆದಿತ್ತು. ನಂತರ ವರ್ಷಗಳಲ್ಲಿ ಏರಿಳಿತವನ್ನು ಕಂಡ ಜಿಲ್ಲೆ 2016-17ರಲ್ಲಿ 13ನೇ ಸ್ಥಾನ ಪಡೆದಿತ್ತು. ನಂತರ 2017-18ರಲ್ಲಿ ಮತ್ತೆ 19 ಸ್ಥಾನ ಕೆಳಗಿಳಿಯುವ ಮೂಲಕ 32 ಸ್ಥಾನಕ್ಕಿಳಿದಿತ್ತು. ಪ್ರಸಕ್ತ ಸಾಲಿನಲ್ಲಿ ಒಂದು ಸ್ಥಾನ ಮೇಲಕ್ಕೇರಿ 31ನೇ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಗುಂಪು ಚರ್ಚೆ, ರಸಪ್ರಶ್ನೆ, ಸಂವಾದ ಕಾರ್ಯಕ್ರಮ, ವ್ಯಕ್ತಿತ್ವ ವಿಕಸನ, ಪಾಲಕರ ಸಭೆ, ರಜಾ ದಿನಗಳಲ್ಲಿ ವಿಶೇಷ ತರಗತಿಗಳ ಮೂಲಕ ತರಬೇತಿ ನೀಡಲಾಗಿತ್ತು. ಮೇಲ್ವಿಚಾರಕರಿಗೆ ಮಾರ್ಗದರ್ಶನ ಜತೆಗೆ ‘ವಿಷಯ ವೇದಿಕೆ’ ಎಂಬ ಕಾರ್ಯಕ್ರಮದ ಮೂಲಕ ಪ್ರತಿ ತಿಂಗಳು ವಿಷಯ ಶಿಕ್ಷಕರಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ನೀಡಿತ್ತು. ಅದರ ಫಲವಾಗಿ ಶೇ. 67.52ರಷ್ಟಿದ್ದ ಫಲಿತಾಂಶ ಶೇ. 6.53ರಷ್ಟು ಏರಿಕೆ ಕಂಡು ಶೇ. 74.05ರಷ್ಟು ಫಲಿತಾಂಶ ಪಡೆದಿದೆ. ಆದರೆ, ಕೇವಲ 1 ರ್ಯಾಂಕ್ ಮೇಲಕ್ಕೇರಿರುವುದು ನಿರಾಸೆ ಮೂಡಿಸಿದೆ.
ಶೇ. 100 ಫಲಿತಾಂಶ ಪಡೆದ ಶಾಲೆಗಳು: ಗದಗ ಶಹರ ಭಾಗದ ರಾಜೀವಗಾಂಧಿ ನಗರದ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಗದಗ ಗ್ರಾಮೀಣ ಭಾಗದ ಮುಳಗುಂದ ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಅಸುಂಡಿ ಗ್ರಾಮದ ಹುಲಕೋಟಿ ಶಿಕ್ಷಣ ಸಂಸ್ಥೆ, ಶಿರಹಟ್ಟಿ ತಾಲೂಕಿನ ಲಕ್ಷೆ್ಮೕಶ್ವರ ಪಟ್ಟಣದ ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಛಬ್ಬಿಯ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆ, ಶಿರಹಟ್ಟಿ ಪಟ್ಟಣದ ಸರ್ಕಾರಿ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ, ಲಕ್ಷೆ್ಮೕಶ್ವರ ಅನುದಾನ ರಹಿತ ಎಕ್ಸಲೆಂಟ್ ಪ್ರೌಢಶಾಲೆ, ಲಕ್ಷೆ್ಮೕಶ್ವರ ಪಟ್ಟಣದ ಅನುದಾನ ರಹಿತ ಎಸ್​ಟಿಪಿಎಂಬಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಯಕ್ಲಾಸಪೂರ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆ, ಮುಂಡರಗಿ ಪಟ್ಟಣದ ಅನುದಾನ ರಹಿತ ಎಸ್​ಎಫ್​ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ರೋಣ ತಾಲೂಕಿನ ಗಜೇಂದ್ರಗಡ ಪಟ್ಟಣದ ಸರ್ಕಾರಿ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆ, ಇಟಗಿಯ ಸರ್ಕಾರಿ ಆದರ್ಶ ವಿದ್ಯಾಲಯ, ರೋಣ ಪಟ್ಟಣದ ಅನುದಾನಿತ ವೀರರಾಣಿ ಚನ್ನಮ್ಮ ಬಾಲಕಿಯರ ಪ್ರೌಢಶಾಲೆ, ರೋಣ ಪಟ್ಟಣದ ಅನುದಾನ ರಹಿತ ಗ್ರೀನ್​ವುಡ್ ಇಂಟರ್​ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನರಗುಂದ ತಾಲೂಕಿನ ಬೆನಕೊಪ್ಪ ಗ್ರಾಮದ ಸರ್ಕಾರಿ ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಲ್ಲಾಪೂರ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆ ಸೇರಿ ಜಿಲ್ಲೆಯಲ್ಲಿ 12 ಸರ್ಕಾರಿ, 2 ಅನುದಾನಿತ, 4 ಅನುದಾನ ರಹಿತ ಸೇರಿ ಒಟ್ಟು 18 ಪ್ರೌಢಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿವೆ.
“ಶೇ. 40ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ್ನು ಗುರುತಿಸಿ ದತ್ತು ಪಡೆದು ವಿಶೇಷ ತರಗತಿ, ಗುಂಪು ಅಧ್ಯಯನದ ಮೂಲಕ ಶೈಕ್ಷಣಿಕ ಮಟ್ಟವನ್ನು ಉನ್ನತೀಕರಿಸಲು ಪ್ರಯತ್ನಿಸಲಾಗುವುದು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಸಜ್ಜಾಗಲು ವಿಶೇಷ ತರಬೇತಿ ನೀಡಲಾಗುವುದು.”
|ಎನ್.ಎಚ್. ನಾಗೂರ, ಡಿಡಿಪಿಐ

- Advertisement -

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...