ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ

Latest News

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ಬಾಲ್ಯದ ಜೀವನವೇ ಚೆಂದ

ಮಂಡ್ಯ: ಯಾವುದೇ ರೀತಿಯ ಒತ್ತಡವಿಲ್ಲದೆ, ಮುಕ್ತವಾಗಿ ಆಲೋಚಿಸುವ ಬಾಲ್ಯದ ಜೀವನವೇ ಚೆಂದ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು. ನಗರದ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ...

ಬಾಲಜಗತ್ ಶಾಲೆಯಲ್ಲಿ ಆಹಾರ ಮೇಳ

ಕೆ.ಆರ್.ಸಾಗರ: ಇಲ್ಲಿನ ಹುಲಿಕೆರೆ-ಕೆ.ಆರ್.ಸಾಗರ ರಸ್ತೆಯ ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗುರುವಾರ ವಿದ್ಯಾರ್ಥಿಗಳಿಗೆ ಆಹಾರ ಮೇಳ ಏರ್ಪಡಿಸಲಾಗಿತ್ತು. ಆದಿಚುಂಚನಗಿರಿ ಮೈಸೂರು...

ರಾಮನಗರ: ಮೈತ್ರಿ ಧರ್ಮದ ಆಧಾರದ ಮೇಲೆ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ಡಿ.ಕೆ. ಸುರೇಶ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕೆಂದು ಮಾಜಿ ಶಾಸಕ ಕೆ.ರಾಜು ಹೇಳಿದರು.

ವಿವೇಕಾನಂದನಗರದ ಆಂಜನೇಯಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜಂಟಿಪ್ರಚಾರಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು. ರಾಜ್ಯದ 28 ಸಂಸದರ ಪೈಕಿ ಕ್ಷೇತ್ರದ ಅಭಿವೃದ್ಧಿಗೆ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಿದವರಲ್ಲಿ ಡಿ.ಕೆ. ಸುರೇಶ್ ಮೊದಲ ಸ್ಥಾನದಲ್ಲಿದ್ದಾರೆ. ಅವರ ಕಾರ್ಯ ವೈಖರಿಯನ್ನು ಎರಡೂ ಪಕ್ಷಗಳ ಮುಖಂಡರು ಮೆಚ್ಚಿಕೊಂಡಿದ್ದೇವೆ. ಪಂಚಾಯಿತಿ ಮಟ್ಟದಲ್ಲಿ ನರೇಗಾ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿವೆ. ಎಲ್ಲ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುವ ಮೂಲಕ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭಾವನೆ ಮೂಡಿಸಿದ್ದಾರೆ. ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಕಾಣಬೇಕಾದರೆ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಬೇಕು. ಅಲ್ಲದೆ ನಮ್ಮ ಪಕ್ಷದ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಲು ಕಾಂಗ್ರೆಸ್​ನ ಸಹಕಾರ ಪ್ರಮುಖವಾಗಿದೆ. ಅದರಲ್ಲೂ ಸಚಿವ ಡಿ.ಕೆ. ಶಿವಕುಮಾರ ಅವರ ಪಾತ್ರ ಮಹತ್ವದ್ದು. ಹಾಗಾಗಿ ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಮೈತ್ರಿ ಧರ್ಮ ನಿಭಾಯಿಸುವ ಕರ್ತವ್ಯವಿದೆ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ರಮೇಶ್ ಮಾತನಾಡಿ, ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವ ಮೂಲಕ ಇತರ ರಾಜ್ಯಗಳಿಗೆ ಈ ಯೋಜನೆ ಮಾದರಿಯಾಯಿತು. ನೀರಾವರಿ ಯೋಜನೆಯ ಜಾರಿ ಮತ್ತು ಅಭಿವೃದ್ಧಿ ಕಾರ್ಯವನ್ನು ಜನ ಮೆಚ್ಚಿದ್ದಾರೆ. ಹಾಗಾಗಿ ಬೂತ್ ಮಟ್ಟದಲ್ಲಿ ನಮ್ಮ ಪಕ್ಷಗಳ ಮತಗಳು ಡಿ.ಕೆ.ಸುರೇಶ್ ಅವರಿಗೆ ಚಲಾವಣೆಯಾಗುವಂತೆ ಶ್ರಮಿಸಬೇಕೆಂದು ಕಾರ್ಯಕರ್ತರಲ್ಲಿ ಕೋರಿದರು. ಬಳಿಕ ನಗರದ ರಾಯರದೊಡ್ಡಿ, ವಿವೇಕಾನಂದನಗರ, ಶಾಂತಿಲಾಲ್, ಕುಮಾರಸ್ವಾಮಿ ಬಡಾವಣೆಗಳಲ್ಲಿ ಜೆಡಿಎಸ್, ಕಾಂಗ್ರೆಸ್ ಮುಖಂಡರು ಕಾರ್ಯಕರ್ತರ ಜತೆಗೂಡಿ ಪ್ರಚಾರ ನಡೆಸಿದರು. ಮನೆ ಮನೆಗೆ ತೆರಳಿ ದೋಸ್ತಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಮೂಲಕ ಕಾಂಗ್ರೆಸ್ ಪರ ಮತ ಯಾಚಿಸಿದರು.

ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಎ.ಬಿ. ಚೇತನ್​ಕುಮಾರ್, ಜೆಡಿಎಸ್ ಅಧ್ಯಕ್ಷ ರಾಜಶೇಖರ್, ನಗರಸಭೆ ಮಾಜಿ ಅಧ್ಯಕ್ಷರಾದ ಬಾಬು, ಚಿಕ್ಕವೀರೇಗೌಡ, ಮಹಿಳಾ ಘಟಕ ಅಧ್ಯಕ್ಷೆ ಶೋಭಾಗೌಡ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಾಂತಪ್ಪ, ಮುಖಂಡರಾದ ಪತಿ, ಮಲ್ಲಪ್ಪ, ರವಿ, ಜಯಶೀಲಾ, ಅಂಬುಜಮ್ಮ, ದೊರೆಸ್ವಾಮಿ, ವಾಸು, ಪ್ರಕಾಶ್, ನಾರಾಯಣ, ಕುಮಾರ್, ಆನಂದ್​ರಾವ್ ಇತರರು ಇದ್ದರು.

 

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...