21.7 C
Bengaluru
Tuesday, January 21, 2020

ಒತ್ತುವರಿ ಕಟ್ಟಡ ತೆರವುಗೊಳಿಸಿದ ಪಾಲಿಕೆ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಹುಬ್ಬಳ್ಳಿ: ಶನಿವಾರ ಬೆಳ್ಳಂ ಬೆಳಗ್ಗೆ ಶಿರೂರು ಪಾರ್ಕ್ ಮುಖ್ಯರಸ್ತೆಯಲ್ಲಿ ಜೆಸಿಬಿಗಳು ಗರ್ಜಿಸಿದವು. ಮಹಾನಗರ ಪಾಲಿಕೆ ಜಾಗೆ ಒತ್ತುವರಿ ಮಾಡಿ ಕಟ್ಟಿದ್ದ ಕಟ್ಟಡ, ಶೆಡ್ ಧರೆಗುರುಳಿಸಿದವು.

ಇಲ್ಲಿನ ಕಾಡಸಿದ್ದೇಶ್ವರ ಕಾಲನಿಯಿಂದ ತೋಳನಕೆರೆವರೆಗೆ ನಡೆಸುತ್ತಿರುವ ಟೆಂಡರ್ ಶ್ಯೂರ್ ಕಾಮಗಾರಿಗಾಗಿ ಪಾಲಿಕೆ ಜಾಗ ಒತ್ತುವರಿ ಮಾಡಿ ಕಟ್ಟಿದ್ದ ಕಟ್ಟಡಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಶನಿವಾರ ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿದರು.

ಕಟ್ಟಡ ತೆರವುಗೊಳಿಸುವುದಕ್ಕೆ ಅತಿಕ್ರಮಣದಾರರು ವಿರೋಧ ವ್ಯಕ್ತಪಡಿಸಿದರು. ಆ ವೇಳೆ ಕಟ್ಟಡ ಮಾಲಕಿಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಎಚ್ಚೆತ್ತುಕೊಂಡ ವಿದ್ಯಾನಗರ ಠಾಣೆ ಪೊಲೀಸರು ಆಕೆಯನ್ನು ತಡೆದರು.

ಕವಿತಾ ಅಶೋಕ ಹೊಸಮನಿ (ರಿ.ನಂ. 5346 ಪ್ಲಾಟ್ ಸಂಖ್ಯೆ 76), ಚನ್ನಬಸಪ್ಪ ಪೊಲೀಸ್ ಪಾಟೀಲ (ರಿ.ನಂ. 5346 ಪ್ಲಾಟ್ ಸಂಖ್ಯೆ 37, 38) ಎಂಬುವರ ಕಟ್ಟಡದ ಮುಂಭಾಗ, ಶೆಡ್, ತೆರವುಗೊಳಿಸಲಾಯಿತು.

ಪಾಲಿಕೆ ವಲಯ ಕಚೇರಿ 5ರ ಸಹಾಯಕ ಆಯುಕ್ತ ಎಸ್.ಸಿ. ಬೇವೂರು, ಕಾರ್ಯನಿರ್ವಾಹಕ ಇಂಜಿನಿಯರ್ ಡಿ.ಎಂ. ಹಿರೇಮಠ, ಅಭಿವೃದ್ಧಿ ಅಧಿಕಾರಿ ಮಂಜುನಾಥ ಚವ್ಹಾಣ, ನಗರ ಯೋಜನಾ ವಿಭಾಗ ನಿರ್ದೇಶಕ ಬಿ.ವಿ. ಹಿರೇಮಠ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಎನ್​ಎ ಆಗದಿದ್ದರೂ ನಿರ್ಮಾಣ: ಶಿರೂರು ಪಾರ್ಕ್ ಮುಖ್ಯರಸ್ತೆ ಚೇತನಾ ಕಾಲೇಜ್ ಬಳಿ ಇರುವ 5 ಎಕರೆ 18 ಗುಂಟೆ ಜಾಗ ಕೃಷಿ ಭೂಮಿಯಾಗಿದ್ದು, ಈವರೆಗೆ ಎನ್​ಎ (ಕೃಷಿಯೇತರ ಉದ್ದೇಶ ಬಳಕೆ) ಮಾಡಿಸಿಲ್ಲ. ಕಟ್ಟಡ ನಿರ್ವಣಕ್ಕೆ ಪಾಲಿಕೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಇಲ್ಲಿ ಮನೆ, ವಾಣಿಜ್ಯ ಕಟ್ಟಡಗಳು ತಲೆ ಎತ್ತಿವೆ.

ಈ ಜಾಗ ದೇವೇಂದ್ರಪ್ಪ ಹಲಕುಂಠೆ ಎಂಬುವರಿಗೆ ಸೇರಿತ್ತು. 1996- 97ರಲ್ಲಿ 80, 90 ಸಾವಿರ ರೂ. ಕೊಟ್ಟು ಹಲವರು ಪ್ಲಾಟ್ ಖರೀದಿಸಿದರು. ಎನ್​ಎ ಮಾಡಿಸಿರಲಿಲ್ಲ. ಮುಂದೆ ಮಾಡಿಸುತ್ತೇನೆ ನೀವು ಕಟ್ಟಡ ಕಟ್ಟಿಸಿಕೊಳ್ಳಿ ಎಂದು ಮಾಲೀಕರು ಹೇಳಿದ್ದರು. ಹಾಗಾಗಿ, ನಾವು ಕಟ್ಟಡ ಕಟ್ಟಿಸಿಕೊಂಡಿದ್ದೇವೆ. ಈಗ ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ಸ್ಥಳೀಯ ಚನ್ನಬಸವನಗೌಡ ಪೊಲೀಸ್ ಪಾಟೀಲ ತಿಳಿಸಿದ್ದಾರೆ

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...