ಓಇಎಮ್

ಇಂದಿನ ವಿದ್ಯುನ್ಮಾನ ಉಪಕರಣಗಳೆಲ್ಲ ರೂಪುಗೊಳ್ಳುವುದು ಭಾರೀ ಸಂಖ್ಯೆಯ ಬಿಡಿಭಾಗಗಳ ಜೋಡಣೆಯಿಂದ. ಈ ಬಿಡಿಭಾಗಗ ಳೆಲ್ಲ ಅದೆಷ್ಟು ಸಂಕೀರ್ಣವಾಗಿರುತ್ತವೆ ಎಂದರೆ ಅವನ್ನೆಲ್ಲ ಒಂದೇ ಸಂಸ್ಥೆ ತಯಾರಿಸುವುದು ಹೆಚ್ಚೂಕಡಿಮೆ ಅಸಾಧ್ಯವೇ ಎನ್ನಬೇಕು.

ಹಾಗಾಗಿಯೇ ಇಂತಹ ಯಾವುದೇ ಉತ್ಪನ್ನದ ನಿರ್ವತೃ ಎಂದು ಒಂದೇ ಸಂಸ್ಥೆಯ ಹೆಸರಿದ್ದರೂ ಆ ಉತ್ಪನ್ನದೊಳಗಿರುವ ವಿವಿಧ ಭಾಗಗಳನ್ನು ಬೇರೆಬೇರೆ ಸಂಸ್ಥೆಗಳು ತಯಾರಿಸಿರುವುದು ಸಾಮಾನ್ಯ ಸಂಗತಿ. ಮೊಬೈಲ್ ಫೋನಿನ ಉದಾಹರಣೆಯನ್ನೇ ತೆಗೆದುಕೊಂಡರೆ ಬೇರೆಬೇರೆ ಸಂಸ್ಥೆಗಳು ನಿರ್ವಿುಸಿದ ಪ್ರಾಸೆಸರ್, ಕ್ಯಾಮೆರಾ, ಸ್ಪೀಕರುಗಳನ್ನೆಲ್ಲ ತೆಗೆದುಕೊಂಡು ಒಟ್ಟುಸೇರಿಸಿ ಇನ್ನೊಂದು ಸಂಸ್ಥೆ ಮೊಬೈಲನ್ನು ತಯಾರಿಸುತ್ತದೆ. ಕಂಪ್ಯೂಟರು-ಕ್ಯಾಮೆರಾ-ಟೀವಿಗಳಲ್ಲೂ ಅಷ್ಟೇ, ಅವುಗಳ ನಿರ್ದಿಷ್ಟ ಭಾಗಗಳನ್ನು ತಯಾರಿಸುವುದನ್ನಷ್ಟೇ ತಮ್ಮ ಕೆಲಸವಾಗಿಟ್ಟುಕೊಂಡ ಅನೇಕ ಸಂಸ್ಥೆಗಳಿವೆ.

ಹೀಗೆ ಬೇರೊಂದು ಸಂಸ್ಥೆಯ ಉತ್ಪನ್ನದಲ್ಲಿ ಬಳಸಲು ನಿರ್ದಿಷ್ಟ ಭಾಗಗಳನ್ನು ತಯಾರಿಸಿಕೊಡುವ ಸಂಸ್ಥೆಗಳನ್ನು ಒರಿಜಿನಲ್ ಇಕ್ವಿಪ್​ವೆುಂಟ್ ಮ್ಯಾನುಫಾಕ್ಚರರ್ (ಸಲಕರಣೆಯ ಮೂಲ ಉತ್ಪಾದಕ) ಅಥವಾ ‘ಓಇಎಮ್ ಎಂದು ಕರೆಯುತ್ತಾರೆ. ಉದಾಹರಣೆಗೆ ಎಬಿಸಿ ಎನ್ನುವ ಸಂಸ್ಥೆಯ ಮೊಬೈಲಿನಲ್ಲಿ ಎಕ್ಸ್ ಎನ್ನುವ ಸಂಸ್ಥೆಯ ಕ್ಯಾಮೆರಾ ಬಳಕೆಯಾಗಿದ್ದರೆ ಎಕ್ಸ್ ಸಂಸ್ಥೆಯನ್ನು ಓಇಎಮ್ ಎಂದು ಗುರುತಿಸಲಾಗುತ್ತದೆ.

ಅಂದಹಾಗೆ ಓಇಎಮ್ ಪರಿಕಲ್ಪನೆ ಬಳಕೆಯಲ್ಲಿರುವುದು ವಿದ್ಯುನ್ಮಾನ ಕ್ಷೇತ್ರದಲ್ಲಷ್ಟೇ ಅಲ್ಲ, ಯಂತ್ರೋಪಕರಣ – ವಾಹನ ಮುಂತಾದ ಇನ್ನೂ ಹಲವಾರು ಸಾಧನಗಳ ನಿರ್ವಣದಲ್ಲೂ ಓಇಎಮ್ಳ ನೆರವು ಪಡೆದುಕೊಳ್ಳುವುದು ಸಾಮಾನ್ಯ ಸಂಗತಿ.

Leave a Reply

Your email address will not be published. Required fields are marked *