ಚಿತ್ರದುರ್ಗ: ಕೋಟೆನಾಡಿನ ವೀರವನಿತೆ ಒನಕೆ ಓಬವ್ವ ಭಾವಚಿತ್ರ ಮೆರವಣಿಗೆಯೂ ನಗರದ ಪ್ರಮುಖ ರಸ್ತೆಗಳಲ್ಲಿ ಸೋಮವಾರ ಅದ್ದೂರಿಯಾಗಿ ನಡೆಯಿತು. ಜಾನಪದ ಕಲಾತಂಡಗಳು ಮೆರುಗು ನೀಡಿದವು.
ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊಳಲ್ಕೆರೆ ರಸ್ತೆಯ ಓಬವ್ವ ದೇಗುಲ ಮುಂಭಾಗದಿಂದ ಹಮ್ಮಿಕೊಂಡಿದ್ದ ಓಬವ್ವ ಭಾವಚಿತ್ರ ಮೆರವಣಿಗೆಗೆ ಎಡಿಸಿ ಕುಮಾರಸ್ವಾಮಿ ಚಾಲನೆ ನೀಡಿದರು.
ಎಎಸ್‌ಪಿ ಕುಮಾರಸ್ವಾಮಿ, ಎಸಿ ಕಾರ್ತಿಕ್, ತಹಸೀಲ್ದಾರ್ ಡಾ.ನಾಗವೇಣಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಡಿಡಿಪಿಐ ಮಂಜುನಾಥ್, ಛಲವಾದಿ ಸಮುದಾಯದ ಮುಖಂಡರಾದ ನಿರಂಜನಮೂರ್ತಿ, ಭಾರ್ಗವಿ ದ್ರಾವಿಡ್, ಆರ್.ನಾಗರಾಜ್, ಶೇಷಪ್ಪ, ಎಸ್.ಎಲ್.ರವಿಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ಇತರರಿದ್ದರು.