ಔಷಧ ಬೆಳೆಗಳಿಗೆ ಬೇಕಿದೆ ಸುಧಾರಿತ ಮಾರುಕಟ್ಟೆ

blank

ಚಿತ್ರದುರ್ಗ: ಸಾಕಷ್ಟು ಪ್ರಾಮುಖ್ಯತೆ ಹೊಂದಿರುವ ಮತ್ತು ಬೇಡಿಕೆ ಇರುವ ಔಷಧ ಮತ್ತು ಸುಗಂಧ ದ್ರವ್ಯ ಬೆಳೆಗಳಿಗೆ ಆದ್ಯತೆ ನೀಡಿದರೆ ರೈತರು ಆರ್ಥಿಕವಾಗಿ ಸಬಲರಾಗ ಬಹುದೆಂದು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ನಿವೃತ್ತ ವಿಸ್ತರಣಾ ನಿರ್ದೇಶಕ ಡಾ.ಪಿ.ಎಂ.ಗಂಗಾಧರಪ್ಪ ಹೇಳಿದರು.
ನಗರದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಔಷಧ ಮತ್ತು ಸುಗಂಧ ದ್ರವ್ಯ ಬೆಳೆಗಳ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಗಿಡಮೂಲಿಕೆಗಳಲ್ಲಿ ಯಾವುದೇ ಅಡ್ಡಪರಿಣಾಮ ಇರದು. ಹೆಚ್ಚಿನ ಪ್ರಮಾಣದಲ್ಲಿ ಅಲೋಪತಿಕ್ ಬಳಸುವ ಪಾಶ್ಚಿಮಾತ್ಯರಲ್ಲೂ ಆಯುರ್ವೇದಿಕ್ ಪದ್ಧತಿಗೆ ಒಲವು ವ್ಯಕ್ತವಾಗುತ್ತಿದೆ. ಔಷಧ, ಸುಗಂಧ ದ್ರವ್ಯ ಬೆಳೆಗೆ ನಮ್ಮ ಹವಾಗುಣ ಉತ್ತಮವಾಗಿದೆ. ಬರಡು ಭೂಮಿಯಲ್ಲೂ ಉತ್ತಮ ಬೆಳೆ ಕಾಣಬಹುದು. ಆದರೆ, ಮಾರುಕಟ್ಟೆ ಸಮಸ್ಯೆಯಿಂದ ರೈತರು ಈ ಬೆಳೆಗಳಿಗೆ ಹಿಂದೇಟು ಹಾಕುತ್ತಿದ್ದು, ಮಾರುಕಟ್ಟೆ ವ್ಯವಸ್ಥೆ ಸಾಕಷ್ಟು ಸುಧಾರಿಸಬೇಕಿದೆ ಎಂದರು.
ಹಿರಿಯೂರು ತಾಲೂಕಿನ ಬಬ್ಬೂರು ಫಾರಂನ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಸುರೇಶ ಡಿ.ಏಕಬೋಟೆ ಮಾತನಾಡಿ, ಚಿತ್ರದುರ್ಗ ಜಿಲ್ಲೆಯಲ್ಲಿ ಅಡಕೆ, ತೆಂಗು, ಶೇಂಗಾ, ಮೆಕ್ಕೆಜೋಳ, ಈರುಳ್ಳಿ ಸೇರಿ ಮತ್ತಿತರ ಪಾರಂಪರಿಕ ಬೆಳೆ ಇದೆ. ಔಷಧ ಮತ್ತು ಸುಗಂಧ ದ್ರವ್ಯ ಬೆಳೆಗಳಿಗೆ ರೈತರನ್ನು ಪ್ರೋತ್ಸಾಹಿಸಬೇಕಿದ್ದು, ಈ ನಿಟ್ಟಿನಲ್ಲಿ ಐಎಟಿ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಈ ಹಿಂದೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ವಿವಿಯಿಂದ ಗೋಡಂಬಿ ಕೃಷಿ ಕುರಿತು ಜಾಗೃತಿ ಮೂಡಿಸಿದ್ದರಿಂದಾಗಿ ಜಿಲ್ಲೆಯಲ್ಲಿ ಈಚಿನ ಕೆಲವು ತಿಂಗಳಲ್ಲಿ 10 ಸಾವಿರ ಗೋಡಂಬಿ ಗಿಡಗಳ ನಾಟಿಯಾಗಿದೆ. ಔಷಧ, ಸುಗಂಧ ದ್ರವ್ಯ ಬೆಳೆಗಳೆಡೆ ಜಾಗೃತಿ ಆಂದೋಲನ ನಡೆಸಬೇಕಿದೆ ಎಂದರು.
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ ಪ್ರಾಧ್ಯಾಪಕ ಡಾ.ರವಿಕುಮಾರ್, ಸಹಾಯಕ ಪ್ರಾಧ್ಯಾಪಕ ಡಾ.ಸದಾಶಿವ ನಡುಕೇರಿ ಉಪನ್ಯಾಸ ನೀಡಿದರು. ಐಎಟಿ ಕಾರ‌್ಯದರ್ಶಿ ಜಿ.ಟಿ.ವೀರಭದ್ರರೆಡ್ಡಿ, ಜಯರಾಮರೆಡ್ಡಿ, ಹನುಮಂತರೆಡ್ಡಿ, ತಿಪ್ಪೇಸ್ವಾಮಿ ಇತರರು ಇದ್ದರು.
ಶಿವಮೊಗ್ಗ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತಾಲೂಕು ಬಬ್ಬೂರು ಫಾರಂ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಚಿತ್ರದುರ್ಗ ರೆಡ್ಡಿ ಸಮಾಜ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…