ಆಲೂರು: ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದೆ. ವೃತ್ತಿಯ ಜತೆಗೆ ಎಲ್ಲರೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ತಹಸೀಲ್ದಾರ್ ಮಲ್ಲಿಕಾರ್ಜುನ್ ಸಲಹೆ ನೀಡಿದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಆಲೂರು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.
ಪತ್ರಕರ್ತರು ಸದಾ ಒತ್ತಡದಲ್ಲಿರುತ್ತಾರೆ. ಆದರೆ ದೈಹಿಕವಾಗಿ ದೇಹ ದಂಡಿಸುವುದು ಬಹಳ ಕಡಿಮೆ. ಹೆಚ್ಚು ಸಮಯವನ್ನು ಒತ್ತಡದಲ್ಲೇ ಕಳೆಯಬೇಕಾಗಿದೆ. ಮಾನಸಿಕ ಆರೋಗ್ಯ ಜತೆಗೆ ದೈಹಿಕ ಆರೋಗ್ಯವೂ ಮುಖ್ಯವಾಗಿದೆ ಎಂದರು.
ಪಂದ್ಯಾವಳಿಯಲ್ಲಿ ಆಲೂರು ತಾಲೂಕಿನ ಆರ್‌ಡಿಪಿಆರ್, ಕಂದಾಯ, ಪೊಲೀಸ್ ಇಲಾಖೆ, ವಕೀಲರ ಸಂಘ, ಪಟ್ಟಣ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡಗಳು ಪಾಲ್ಗೊಂಡಿದ್ದವು. ಕಂದಾಯ ಇಲಾಖೆ ನೌಕರರ ತಂಡ ಪ್ರಥಮ, ಆಲೂರು ಪಟ್ಟಣ ಪಂಚಾಯಿತಿ ತಂಡ ದ್ವಿತೀಯ, ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೃತೀಯ ಬಹುಮಾನ ಪಡೆಯಿತು.
ಶಾಸಕ ಸಿಮೆಂಟ್ ಮಂಜು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಾಹೇರ ಬೇಗಂ, ಸದಸ್ಯರಾದ ಹರೀಶ್, ಧರ್ಮ, ಸಂತೋಷ್, ತೌಫಿಕ್ ಅಹಮದ್, ಅಬ್ದುಲ್ ಖುದ್ದೂಸ್, ತಾಲೂಕು ಜೆಡಿಎಸ್ ಅಧ್ಯಕ್ಷ ಕೆ.ಎಸ್.ಮಂಜೇಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿನಾಕಲಗೂಡು, ಮುಖಂಡರಾದ ಲಿಂಗರಾಜು, ಬಸವರಾಜ್, ಬಿಜೆಪಿ ಅಧ್ಯಕ್ಷೆ ಉಮಾ ರವಿಪ್ರಕಾಶ್, ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಮಹೇಶ್, ವಕೀಲರ ಮಂಜೇಗೌಡ, ವೀರಶೈವ ಸಂಘದ ಅಧ್ಯಕ್ಷ ರೇಣುಕಾ ಪ್ರಸಾದ್, ಉಪಾಧ್ಯಕ್ಷ ಡಿ.ಎಸ್.ಜಯಣ್ಣ, ಖಜಾಂಚಿ ಟೀಕರಾಜು, ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್, ಶಾಂತಕೃಷ್ಣ, ಅಜ್ಜೇನಹಳ್ಳಿ ರಂಗಯ್ಯ, ರೈತ ಸಂಘದ ಅಧ್ಯಕ್ಷ ಧರ್ಮರಾಜ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪೃಥ್ವಿರಾಮ್, ಮಾಜಿ ಅಧ್ಯಕ್ಷ ರಾಘವೇಂದ್ರ, ನಟರಾಜ್ ನಾಕಲಗೂಡು ಹಾಜರಿದ್ದರು.