ಕಡ್ಡಾಯವಾಗಿ ಧರಿಸಿ ಹೆಲ್ಮೆಟ್

blank

ಚಿತ್ರದುರ್ಗ: ದ್ವಿಚಕ್ರ ಮೋಟಾರು ವಾಹನ ಸವಾರಿ ಮಾಡುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಸುರಕ್ಷಿತವಾಗಿ ವಾಹನ ಚಾಲನೆ ಮಾಡಬೇಕು ಎಂದು ಡಿಸಿ ಟಿ. ವೆಂಕಟೇಶ್ ಹೇಳಿದರು.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ವಿತರಣೆ ಹಾಗೂ 9 ತಿಂಗಳಿಂದ 4 ವರ್ಷ ವಯಸ್ಸಿನೊಳಗಿನ ಮಕ್ಕಳಿರುವ ಪಾಲಕರಿಗೆ ದ್ವಿಚಕ್ರ ವಾಹನದಲ್ಲಿ ಸುರಕ್ಷಿತವಾಗಿ ಮಕ್ಕಳನ್ನು ಕರೆದೊಯ್ಯಲು ಬಳಸುವ ಶಿಶು ರಕ್ಷಾಕವಚವನ್ನು ಸಾಂಕೇತಿಕವಾಗಿ ವಿತರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಹೆದ್ದಾರಿಗಳು ಹಾದು ಹೋಗಿರುವುದರಿಂದ ಗ್ರಾಮೀಣ ಭಾಗದಲ್ಲಿ ರಸ್ತೆ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಜಾಗೃತರಾಗಿರಬೇಕು. ವಾಹನ ಚಾಲನೆ ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ರಸ್ತೆ ನಿಯಮಗಳನ್ನು ಚಾಲಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಎಸ್‌ಪಿ ಎಸ್.ಜೆ. ಕುಮಾರಸ್ವಾಮಿ, ಡಿವೈಎಸ್‌ಪಿ ಪಿ.ಕೆ. ದಿನಕರ್, ಆರ್‌ಟಿಒ ಕಚೇರಿ ಅಧೀಕ್ಷಕ ಹೇಮಂತ್ ಮತ್ತಿತರರು ಇದ್ದರು.
ಕೋಟ್
ಮಾಸಾಚರಣೆ ಅಂಗವಾಗಿ 70 ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಹಾಗೂ 10 ಶಿಶು ರಕ್ಷಾ ಕವಚಗಳನ್ನು ಸಾಂಕೇತಿಕವಾಗಿ ವಿತರಿಸಲಾಗಿದೆ. ವಾಹನ ಸವಾರರು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸಬೇಕು. ಇದರಿಂದ ಒಂದು ವೇಳೆ ಅಪಘಾತವಾದರೂ ತಲೆಗೆ ಪೆಟ್ಟು ಬಿಳುವುದನ್ನು ತಪ್ಪಿಸಿ,ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಲಿದೆ.
ಭರತ ಎಂ.ಕಾಳಿಸಿಂಗೆ,ಆರ್‌ಟಿಒ

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…