23.2 C
Bangalore
Saturday, December 14, 2019

ಕದಂಬೋತ್ಸವಕ್ಕೆ ಮರ್ಕಟದ ಛಾಯೆ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಶಿರಸಿ: ಬನವಾಸಿ ಭಾಗದಲ್ಲಿ ಕಾಣಿಸಿಕೊಂಡ ಮಂಗನ ಕಾಯಿಲೆ ಈಗ ಕದಂಬೋತ್ಸವಕ್ಕೂ ಕರಿ ನೆರಳಾಗಿದೆ. ಕದಂಬೋತ್ಸವ ನಡೆಯುವ ಜಾಗದ ಸಮೀಪದಲ್ಲೇ ಮಂಗವೊಂದು ಶುಕ್ರವಾರ ಸತ್ತುಬಿದ್ದಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಸಚಿವ ಆರ್.ವಿ. ದೇಶಪಾಂಡೆ ಮಾಧ್ಯಮಗಳೊಂದಿಗೆ ಮಾತನಾಡಿ, ‘ಬನವಾಸಿ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಕದಂಬೋತ್ಸವ ದಿನಾಂಕ ಮುಂದೂಡುವ ಕುರಿತು ಒತ್ತಾಯ ಬರುತ್ತಿದೆ. ಕದಂಬೋತ್ಸವ ಯಾವುದೇ ಆತಂಕವಿಲ್ಲದೆ ಸಂಭ್ರಮದಿಂದ ಆಚರಣೆ ಯಾಗಬೇಕು. ಆದರೆ, ಈ ಭಾಗದ ಜನರಲ್ಲಿ ಆತಂಕ ಕಾಡುತ್ತಿದೆ. ನರೂರಿನಲ್ಲಿ ಸತ್ತ ಮಂಗನಲ್ಲಿ ಕೆಎಫ್​ಡಿ ವೈರಸ್ ಪತ್ತೆಯಾಗಿದೆ. ಇನ್ನೂ ಕೆಲವೆಡೆ ಮಂಗ ಸತ್ತು ಬಿದ್ದಿರುವ ಬಗ್ಗೆ ವರದಿ ಬರುತ್ತಿವೆ. ಹೀಗಾಗಿ ಕದಂಬೋತ್ಸವದ ದಿನಾಂಕವನ್ನು ಮರುಪರಿಶೀಲಿಸಲು ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ’ ಎಂದು ತಿಳಿಸಿದರು.

‘ಈಗಾಗಲೇ ಮುಖ್ಯಮಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಕದಂಬೋತ್ಸವಕ್ಕೆ ಆಗಮಿಸಲು ಮನವಿ ಮಾಡಲಾಗಿತ್ತು. ಆದರೆ, ಈಗಿನ ಸಂಗತಿಯನ್ನೂ ಸಚಿವರ ಗಮನಕ್ಕೆ ತರುತ್ತೇವೆ. ಜಿಲ್ಲೆಯಲ್ಲಿ 66 ಮಂಗಗಳು ಸತ್ತಿವೆ. ಅವುಗಳಲ್ಲಿ ನಾಲ್ಕು ಮಂಗಗಳಲ್ಲಿ ವೈರಾಣು ಪತ್ತೆಯಾಗಿದೆ. ಈ ತಿಂಗಳ 10ರೊಳಗೆ 27 ಸಾವಿರ ವ್ಯಾಕ್ಸಿನ್ ಬರಲಿದೆ. ಯಾರೂ ಆತಂಕಪಡಬೇಕಾಗಿಲ್ಲ’ ಎಂದರು. ಸರ್ಕಾರ ಭದ್ರವಾಗಿದೆ. ಯಾವ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಪ್ರತಿಪಕ್ಷದ ಒಳ ಹೊಡೆತಕ್ಕೆ ನಮ್ಮವರು ಬಗ್ಗುವುದಿಲ್ಲ. ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ಹಣಕಾಸಿನ ತೊಂದರೆ ಆಗಿಲ್ಲ. 10 ಕೋಟಿ ರೂ.ಗಳಲ್ಲಿ ಬಾಕಿ ಇರುವ ಎರಡು ಕೋಟಿ ರೂ. ಬಿಡುಗಡೆಗೆ ಸೂಚನೆ ನೀಡಿದ್ದೇವೆ’ ಎಂದರು.

ರದ್ದತಿಗೆ ಒತ್ತಾಯ

ಕಾರವಾರ: ಮಂಗನ ಕಾಯಿಲೆ ಆತಂಕದ ಹಿನ್ನೆಲೆಯಲ್ಲಿ ಕದಂಬೋತ್ಸವವನ್ನು ರದ್ದುಪಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಅರವಿಂದ ರ್ಕಕೋಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬನವಾಸಿ ಸಮೀಪದ ಬಾಶಿ ಗ್ರಾಮದ ಸಮೀಪ ಮೃತಪಟ್ಟ 27 ಮಂಗಗಳಲ್ಲಿ ಕಾಯಿಲೆ ಇರುವುದು ಪತ್ತೆಯಾಗಿದೆ. ಬನವಾಸಿಯ ಕದಂಬೋತ್ಸವ ನಡೆಯುವ ವೇದಿಕೆಯ ಸಮೀಪವೇ ಮಂಗವೊಂದು ಮೃತಪಟ್ಟಿದೆ. ಇದರಿಂದ ಕದಂಬೋತ್ಸವಕ್ಕೆ ಬಂದವರಿಗೆ ಸೋಂಕು ತಗುಲಿದರೆ ಯಾರು ಹೊಣೆ ಎಂದು ರ್ಕಕೋಡಿ ಪ್ರಶ್ನಿಸಿದ್ದಾರೆ.

ಪ್ರತಿ ವರ್ಷ ಕದಂಬೋತ್ಸವವನ್ನು ಮಾಡಲೇಬೇಕು ಎಂಬುದು ಕಸಾಪ ಜಿಲ್ಲಾ ಘಟಕದ ಒತ್ತಾಯ. ಆದರೆ, ಈ ವರ್ಷ ಮಂಗನ ಕಾಯಿಲೆ ಹಿನ್ನೆಲೆಯಲ್ಲಿ ಕದಂಬೋತ್ಸವ ಬೇಡ ಎಂದು ಅವರು ಮನವಿ ಮಾಡಿದ್ದಾರೆ.

ಸೂಳೆಬೀಳು ಗ್ರಾಮದಲ್ಲೂ ಸಾವು

ಭಟ್ಕಳ: ತಾಲೂಕಿನ ಬೈಲೂರು ಪಂಚಾಯಿತಿ ವ್ಯಾಪ್ತಿಯ ಸೂಳೆಬೀಳು ಗ್ರಾಮದಲ್ಲಿ ಶನಿವಾರ ಮಂಗ ವೊಂದು ಮೃತಪಟ್ಟಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಬೈಲೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಹೆದ್ದಾರಿ ಪಕ್ಕದಲ್ಲಿ ಮಂಗವೊಂದು ಒದ್ದಾಡುತ್ತಿರುವುದನ್ನು ನೋಡಿದ ಸಾರ್ವಜನಿಕರು ಪಿಡಿಒ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪಿಡಿಒ ನಾಗೇಂದ್ರ ಮೊಗೇರ, ಪಶು ವೈದ್ಯ ಸೂರ್ಯಕಾಂತ ಗೊಂದೋಳಿ, ತಾಲೂಕು ಆರೋಗ್ಯಾಧಿಕಾರಿ ಮೂರ್ತಿರಾಜ ಭಟ್ ಪರಿಶೀಲಿಸಿ ಮಂಗವನ್ನು ಮರಣೋತ್ತರ ಪರೀಕ್ಷೆಗೆ ಒಳ ಪಡಿಸಿದ್ದಾರೆ.

ನಂತರ ಮಂಗನ ಅಂತ್ಯಕ್ರಿಯೆ ವಿಚಾರವಾಗಿ ಸ್ಥಳೀಯರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಸ್ಥಳೀಯರು ಮಂಗವನ್ನು ದಫನ್ ಮಾಡುವಂತೆ ತಿಳಿಸಿದರೆ, ವೈದ್ಯಾಧಿಕಾರಿಗಳು ದಹಿಸಲು ಸೂಚಿಸಿದ್ದರು. ಮೃತ ಮಂಗನ ಮೇಲಿನ ಉಣ್ಣೆ ಉಲ್ಬಣಿಸಿದರೆ ಕಾಯಿಲೆ ಹರಡುವ ಸಂಭವವಿದೆ. ಹೀಗಾಗಿ ಸುಡುವುದೇ ಸೂಕ್ತ ಎಂದು ಜನರಿಗೆ ತಿಳಿ ಹೇಳಿದ ನಂತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಥಳೀಯರಿಗೆ ಮಂಗನ ಕಾಯಿಲೆ ಕುರಿತಾದ ಆತಂಕ ದೂರಗೊಳಿಸಲು ಮುನ್ನೆಚ್ಚರಿಕೆಯ ಕ್ರಮದ ಕುರಿತು ವೈದ್ಯರು ಮಾಹಿತಿ ನೀಡಿದರು. ಈ ವೇಳೆ ಬೈಲೂರು ಪಂಚಾಯಿತಿ ಅಧ್ಯಕ್ಷ ಮಂಜುನಾಥ ನಾಯ್ಕ, ಸ್ಥಳೀಯರು ಇದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...