More

  ಕನಕದಾಸ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

  ಬಾಗಲಕೋಟೆ: ಕನಕದಾಸ ಜಯಂತಿಯನ್ನು ಅದ್ದೂರಿ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಹೇಳಿದರು.

  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನಕದಾಸ ಜಯಂತಿ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ.೩೦ ರಂದು ಬೆಳಗ್ಗೆ ೯ ಗಂಟೆಗೆ ಜಿಲ್ಲಾಡಳಿತ ಭವನ ಆವರಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಾನಪದ ಕಲೆಗಳಾದ ಕರಡಿ ಮಜಲು ಮತ್ತು ಮಹಿಳಾ ಡೊಳ್ಳು ಕುಣಿತದ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ನಂತರ ೧೧ ಗಂಟೆಗೆ ನವನಗರದಲ್ಲಿರುವ ಕಲಾ ಭವನದಲ್ಲಿ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.

  ವೇದಿಕೆ ಕಾರ್ಯಕ್ರಮದಲ್ಲಿ ನುರಿತ ತಜ್ಞರಿಂದ ಸಂಗೀತ ಹಾಗೂ ವಿಶೇಷ ಉಪನ್ಯಾಸ ಆಯೋಜಿಸಲಾಗುವುದು. ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ, ಜನಪ್ರತಿನಿಽಗಳು ಹಾಗೂ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು. ಅಂದು ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಎಲ್ಲ ಮಹನೀಯರ ಜಯಂತಿ ಆಚರಿಸುವಂತೆ ಕನಕದಾಸರ ಜಯಂತಿಯನ್ನು ಎಲ್ಲೂ ಲೋಪದೋಷಗಳು ಆಗದಂತೆ ಅತ್ಯಂತ್ಯ ವಿಜ್ರಂಬಣೆಯಿಂದ ಆಚರಿಸಬೇಕು ಎಂದು ಹೇಳಿದರು.

  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಮಾತನಾಡಿ, ಭೀಮಪ್ಪಾ ಗೋರವರ ಸ್ಮರಣಾರ್ಥವಾಗಿ ಕೊಡಮಾಡುವ ಕನಕ ಸಿರಿ ಪ್ರಶಸ್ತಿಗೆ ಈ ವರ್ಷ ಚಂದ್ರಕಲಾ ಬಿದರಿ ಅವರನ್ನು ಆಯ್ಕೆ ಮಾಡಲಾಗಿದೆ. ಕನಕದಾಸ ಜಯಂತಿ ದಿನದಂದು ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

  ಸಭೆಯಲ್ಲಿ ಬಾಗಲಕೋಟೆ ನಗರಸಭೆ ಆಯುಕ್ತ ರಮೇಶ ಜಾಧವ ಹಾಗೂ ಸಮುದಾಯ ಮುಖಂಡರು ಉಪಸ್ಥಿತರಿದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 20

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts