ಕಪ್ಪುಪಟ್ಟಿ ಧರಿಸಿ ಹೋರಾಟ

Latest News

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಚಾಂಪಿಯನ್ ಪಟ್ಟ ಅಲಂಕರಿಸಿದ ಆರು ತಂಡ

ಸಣ್ಣುವಂಡ ಕಿಶೋರ್ ನಾಚಪ್ಪ ಪೊನ್ನಂಪೇಟೆಕೋದಂಡ ಎ.ಪೂವಯ್ಯ ಜ್ಞಾಪಕಾರ್ಥ ಹಾಕಿಕೂರ್ಗ್ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ, ಪ್ರೌಢಶಾಲಾ ಬಾಲಕ, ಬಾಲಕಿಯರ...

ಜನರಿಗೆ ದುಃಸ್ವಪ್ನವಾಗಿ ಕಾಡಿದ್ದ ‘ಒಸಮಾ ಬಿನ್​ ಲಾಡೆನ್​’ ಇನ್ನಿಲ್ಲ; ಸಾಯುವ ವೇಳೆ ಆತ ‘ಕೃಷ್ಣ’ ನಾಗಿ ಬದಲಾಗಿದ್ದ…

ಗುವಾಹಟಿ: ಪಶ್ಚಿಮ ಅಸ್ಸಾಂನ ಗೋಲ್ಪಾರ ಜಿಲ್ಲೆಯ ಸುತ್ತಮುತ್ತಲಿನ ಜನರನ್ನು ಇನ್ನಿಲ್ಲದಂತೆ ಕಾಡಿದ್ದ ಒಸಮಾ ಬಿನ್​ ಲಾಡೆನ್​ ಮೃತಪಟ್ಟಿದ್ದಾನೆ. ಈ ಒಸಮಾ ಬಿನ್​ ಲಾಡೆನ್​ ಒಂದು ಕಾಡಾನೆ. ಅಲ್ಲಿನ...

ನರಗುಂದ: ಸೇವಾ ನಿರತ ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕರಿಗೆ ಸರ್ಕಾರ ಜಾರಿಗೊಳಿಸಿದ ಹೊಸ ಸಿಆರ್ ಮತ್ತು ವೃಂದ ನೇಮಕಾತಿ ಆದೇಶ ವಿರೋಧಿಸಿ ತಾಲೂಕಿನ ಅರಿಷಿಣಗೋಡಿ, ಕುರುಗೋವಿನಕೊಪ್ಪ ಗ್ರಾಮಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರು ಜು. 1ರಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಹೋರಾಟ ಆರಂಭಿಸಿದ್ದಾರೆ. ನಗರದಲ್ಲಿ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ನರಗುಂದ ತಾಲೂಕಾಧ್ಯಕ್ಷ ಎಸ್.ವಿ. ಕ್ಯಾಮನಗೌಡ್ರ ಮಾತನಾಡಿ, ವೃಂದ ನೇಮಕಾತಿ ಸುತ್ತೋಲೆಯಿಂದ ರಾಜ್ಯದ 82 ಸಾವಿರ ಪದವೀಧರ ಶಿಕ್ಷಕರಿಗೆ ಅನ್ಯಾಯವಾಗುತ್ತದೆ. 10ರಿಂದ 25 ವರ್ಷಗಳ ಸೇವಾನುಭವ ಹೊಂದಿರುವ ಶಿಕ್ಷಕರಿಗೆ ಸೇವಾ ಜೇಷ್ಠತೆ ಆಧರಿಸಿ ಮುಂಬಡ್ತಿ ನೀಡಬೇಕು. ಆದೇಶ ಜಾರಿ ಪೂರ್ವದಲ್ಲಿ ನೇಮಕವಾದ ಅರ್ಹ ಶಿಕ್ಷಕರನ್ನು ಹೊಸ ವೃಂದದಲ್ಲಿ ವಿಲೀನ ಮಾಡಬೇಕು. 7-8-2017ರ ನಂತರ ನೇರ ನೇಮಕವಾದವರಿಗೆ ಈ ಹೊಸ ನಿಯಮ ಜಾರಿಗೊಳಿಸಬೇಕು. ಇಲ್ಲದಿದ್ದರೆ 9-7-2019ರಿಂದ ಎಲ್ಲ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ಮಾಡಲಾಗುವುದು ಎಂದರು. ಶಿಕ್ಷಕರಾದ ಪಿ.ಟಿ. ದೇವಾಂಗಮಠ, ಎಸ್.ಎಂ. ನೇರಣಕಿ, ಎಚ್.ಎನ್. ಬ್ಯಾಟಿ, ಬಿ.ಆರ್. ಪಟ್ಟಣಶೆಟ್ಟಿ, ಎನ್.ಎಚ್. ಜಾಧವ, ಎಸ್.ಕೆ. ಕುರಿ, ಜಿ.ಬಿ. ಕಂಠೆಣ್ಣವರ, ಪ್ರಮೋದ ಜಾಧವ, ಎಂ.ಎಸ್. ಯಾದವಾಡ, ಎ.ಬಿ. ಕಲ್ಲಯ್ಯನಮಠ, ಡಿ.ಆರ್. ಗದ್ದನಕೇರಿ, ವಿ.ಎಂ. ಖ್ಯಾಡದ, ಕೆ.ಎಸ್. ಹಟ್ಟಿ, ವಿದ್ಯಾ ನಾಯಕ, ಜಿ.ಎಚ್. ಕಾಂಬಳೆ, ವಿ.ಜಿ. ಮೊರಬ ಇತರರಿದ್ದರು.

ಬೋಧನೆ ಬಹಿಷ್ಕರಿಸಿದ ಶಿಕ್ಷಕರು

ಮುಂಡರಗಿ ತಾಲೂಕಿನ ವಿವಿಧ ಶಾಲೆಗಳಲ್ಲಿರುವ ಪದವೀಧರ ಶಿಕ್ಷಕರು ಅವರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಮೂರು ದಿನಗಳಿಂದ (ಜು. 1ರಿಂದ) 6 ರಿಂದ 8ನೇ ತರಗತಿಯ ಮಕ್ಕಳ ಪಾಠ ಬೋಧನೆ ಬಹಿಷ್ಕರಿಸಿದ್ದು, ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗಿದ್ದಾರೆ. ಪದವಿ ಪಡೆದಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಬಡ್ತಿ ನೀಡದೇ ಇರುವ ಕ್ರಮ ಖಂಡಿಸಿ ಪದವೀಧರ ಶಿಕ್ಷಕರು 6ರಿಂದ 8ನೇ ತರಗತಿಗಳ ಪಾಠ ಬೋಧನೆ ಸ್ಥಗಿತಗೊಳಿಸಿದ್ದಾರೆ. 30 ವರ್ಷಗಳಿಂದ 1ರಿಂದ 7ನೇ ತರಗತಿಯವರೆಗೂ ಪಾಠ ಮಾಡುತ್ತಿದ್ದ ಪದವಿ ಪಡೆದ ಶಿಕ್ಷಕರಿಗೆ ಬಡ್ತಿ ನೀಡದೆ ಇರುವ ಸರ್ಕಾರದ ಕ್ರಮಕ್ಕೆ ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ. ಶಾಲೆಗಳಲ್ಲಿರುವ ಪದವಿ ಶಿಕ್ಷಕರಿಗೆ ಬಡ್ತಿ ನೀಡುವ ಬದಲಾಗಿ ಸರ್ಕಾರ ಹೊಸದಾಗಿ ಪದವಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಹೊರಟಿರುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ‘ಶಾಲೆಗಳಲ್ಲಿ 6, 7 ಹಾಗೂ 8ನೇ ತರಗತಿಯ ಮಕ್ಕಳು ಪಾಠ ಪ್ರವಚನಗಳಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಸರ್ಕಾರ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಂಡು ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ಪಟ್ಟಣದ ಸರ್ಕಾರಿ ಕೋಟೆ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಮು ಭಜಂತ್ರಿ ಒತ್ತಾಯಿಸಿದ್ದಾರೆ.

- Advertisement -

Stay connected

278,530FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....