ಕಲಬುರಗಿಗೆ ಡಾ. ಜಾಧವ ಅಭ್ಯರ್ಥಿ

Latest News

VIDEO: ಕಗ್ಗತ್ತಲೆಯಲ್ಲಿ ಅಡಗಿ ನೆಗೆದರೂ ಗುರಿ ತಪ್ಪಿದ ಚಿರತೆ! ಸಾವಿಗೂ, ಜೀವಕೂ ಕೆಲವೇ ಸೆಕೆಂಡ್​ಗಳ ಅಂತರ

ನವದೆಹಲಿ: ಕಗ್ಗತ್ತಲೆಯಲ್ಲಿ ಅಡಗಿದ್ದು, ಆ ಮಾರ್ಗವಾಗಿ ಬಂದ ಬೈಕ್​ ಸವಾರರ ಮೇಲೆ ಚಿರತೆ ನೆಗೆದರೂ ಕೆಲವೇ ಸೆಕೆಂಡ್​ಗಳ ಅಂತರದಲ್ಲಿ ಸಾವಿನಿಂದ ಪಾರಾದರು. ಚಿರತೆ...

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಮಹಾರಾಷ್ಟ್ರ ಸರ್ಕಾರ: ಮೂರು ಪಕ್ಷಗಳ ಚುನಾವಣಾ ಪ್ರಣಾಳಿಕೆ ಆಧರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಬೆಂಬಲಿತ ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ಚುನಾವಣಾ...

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಚಿಂಚೋಳಿ ಶಾಸಕ ಡಾ. ಉಮೇಶ ಜಾಧವ ಅವರ ಕೈ ಹಿಡಿದಿರುವ ಕಮಲ ಪಕ್ಷ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಧಿಕೃತವಾಗಿ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ರಣಾಂಗಣಕ್ಕೆ ವೇದಿಕೆ ಸಿದ್ಧಪಡಿಸಿದೆ.

ಶಾಸಕ ಸ್ಥಾನಕ್ಕೆ ಅವರು ನೀಡಿದ್ದ ರಾಜೀನಾಮೆ ಇನ್ನೂ ಅಂಗೀಕಾರವಾಗದ್ದರಿಂದ ಅವರನ್ನು ಕಣಕ್ಕಿಳಿಸಿದರೆ ಎಲ್ಲಿ ನಾಮಪತ್ರ ತಿರಸ್ಕಾರವಾಗುತ್ತದೋ ಎಂಬ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೆಸರನ್ನು ಪ್ರಕಟಿಸುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳನ್ನು ಹಬ್ಬಿಸುವ ಮೂಲಕ ಡಾ. ಉಮೇಶ ಜಾಧವ ಮತ್ತು ಬಿಜೆಪಿಗೆ ಗೊಂದಲ ಮೂಡಿಸಿದ್ದವರಿಗೆ ಇದೀಗ ಉತ್ತರ ಸಿಕ್ಕಂತಾಗಿದೆ ಎಂದು ಕಮಲ ಪಕ್ಷದವರು ಹೇಳುತ್ತಿದ್ದಾರೆ.

ಗುರುವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ಜೆ.ಪಿ ನಡ್ಡಾ ಅವರು ಕರ್ನಾಟಕದ ಕೆಲ ಕ್ಷೇತ್ರಗಳ ಹೆಸರುಗಳನ್ನು ಪ್ರಕಟಿಸಿದ್ದು ಅದರಲ್ಲಿ ಕಲಬುರಗಿಗೆ ಡಾ. ಉಮೇಶ ಜಾಧವ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂದು ಘೋಷಿಸುತ್ತಲೇ ನಗರದಲ್ಲಿ ಡಾ. ಜಾಧವ ಮನೆ ಮುಂದೆ ನೆರೆದಿದ್ದ ಕಾರ್ಯಕರ್ತರು ಸಂಭ್ರಮ ಆಚರಿಸಿದರು.

ತಮ್ಮ ಹೆಸರು ಎಲ್ಲಿ ಕೈ ತಪ್ಪುತ್ತೋ ಎಂದು ಗೊಂದಲದಲ್ಲಿಯೇ ಇದ್ದ ಡಾ. ಉಮೇಶ ಜಾಧವ ಇದೀಗ ನಿಟ್ಟುಸಿರು ಬಿಟ್ಟಿದ್ದು, ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ. ಬಿಜೆಪಿ ಎಲ್ಲ ನಾಯಕರ, ಕಾರ್ಯಕರ್ತರ ಮತ್ತು ತಮ್ಮೆಲ್ಲ ಸ್ನೇಹಿತರ, ಅಭಿಮಾನಿಗಳ ಬೆಂಬಲದಿಂದ ಕೂಡಲೇ ಪ್ರಚಾರ ಕಾರ್ಯಕ್ಕೆ ಇಳಿಯುವುದಾಗಿ ಅವರು ಹೇಳಿದ್ದಾರೆ.

ಮೀಸಲು ಕ್ಷೇತ್ರ ಕಲಬುರಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ತಾವೇ ಸ್ಪರ್ಧಿಸುತ್ತಿದ್ದು, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಪಕ್ಷದ ಕಾರ್ಯಕರ್ತರಿಗೆ ಮತ್ತು ಜನತೆಗೆ ಡಾ ಜಾಧವ ಹೇಳುತ್ತಲೇ ಬಂದಿದ್ದರು. ಆದರೆ ಇವರಷ್ಟಕ್ಕೆ ಇವರೇ ಅಭ್ಯರ್ಥಿ ಎಂದು ಘೋಷಿಸಿಕೊಂಡರೆ ಹೇಗೆ? ಇವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಬಿಜೆಪಿ ಇವರ ಹೆಸರನ್ನು ಪ್ರಕಟಿಸಿಲ್ಲ. ಇಂಥದರಲ್ಲಿ ಇವರನ್ನು ಅದ್ಹೇಗೆ ಅಭ್ಯಥರ್ಿ ಎಂದು ಪರಿಗಣಿಸಲು ಸಾಧ್ಯ ಎಂದು ಕಾಂಗ್ರೆಸ್ಸಿನ ಕೆಲವರು ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಕೆಲವರು ಪ್ರಶ್ನಿಸುತ್ತಿದ್ದರು.

ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಮೂಲಕ ಬಿಜೆಪಿ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.

ಹೌದು, ಈ ಸಲ ಕಲಬುರಗಿ ಲೋಕಸಭಾ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ. ಈ ಸಲ ಮತದಾರರ ಆಶೀರ್ವಾದದಿಂದ ನನ್ನ ಗೆಲವು ಖಚಿತ. ಬಿಜೆಪಿ ಟಿಕೆಟ್ ತಮಗೆ ಖಚಿತ ಎನ್ನುವ ಸಂಪೂರ್ಣ ವಿಶ್ವಾಸ ನನಗೆ ಇತ್ತು. ಪಕ್ಷದ ನಾಯಕರು ನನ್ನನ್ನು ಕಣಕ್ಕೆ ಇಳಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈಗ ಈ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮೋದಿಯವರ ಕೈ ಇನ್ನಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸುತ್ತೇನೆ. ಇಡೀ ಬಿಜೆಪಿ ಪಡೆ ತಮ್ಮ ಹಿಂದಿರುವುದು ನನಗೆ ಸಂತಸ ತಂದಿದೆ.
ಡಾ. ಉಮೇಶ ಜಾಧವ ಬಿಜೆಪಿ ಅಭ್ಯರ್ಥಿ. ಕಲಬುರಗಿ ಲೋಕಸಭಾ ಕ್ಷೇತ್ರ.

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...