ಸಿನಿಮಾ

ಕಲಬುರಗಿಗೆ ಸಚಿವ ಸ್ಥಾನ ನೀಡಲು ಸಿರಗಾಪೂರ ಆಗ್ರಹ

ಕಲಬುರಗಿ: ಕರ್ನಾಟಕ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ 7 ಶಾಸಕರು ಆಯ್ಕೆಯಾಗಿ ಬಂದಿರುವುದರಿಂದ ಕಲಬುರಗಿ ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ನೀಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದಿದೆ.ಸರಕಾರ ರಚನೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶಾಸಕರನ್ನು ಕಡೆಗಣಿಸಬಾರದು.ಈ ಹಿಂದೆ ಇದ್ದ ಬಿಜೆಪಿ ಸರಕಾರ ಕಲಬುರಗಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡದೆ ಮೋಸ ಮಾಡಿತ್ತು.ಇಷ್ಟೆ ಅಲ್ಲದೆ ಕಲ್ಯಾಣ ಕರ್ನಾಟಕಕ್ಕೂ ಅನ್ಯಾಯ ಮಾಡಿದರ ಪರಿಣಾಮ ಇಂದು ಬಿಜೆಪಿ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ.ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿಯ ಐದು ಶಾಸಕರು ಚುನಾಯಿತರಾದರು ಕೂಡ ಒಂದೇ ಒಂದು ಮಂತ್ರಿ ಸ್ಥಾನ ನೀಡಲಿಲ್ಲ.ಹೀಗಾಗಿ ಜಿಲ್ಲೆ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ದೂರಿದ್ದಾರೆ.

ಕಳೆದ ವರ್ಷ ನೆರೆ ಬಂದು ಬೆಳೆಗಳು ನಾಶವಾದರೂ ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ನೀಡಿಲ್ಲ.ನಾಮಕೆ ವಾಸ್ತೆ ಉಸ್ತುವಾರಿ ಸಚಿವರಿದ್ದರು ಕೆಡಪಿ ಸಭೆ ನಡೆಸಿಲ್ಲ.ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಬೆರೆ ಜಿಲ್ಲೆಯವರಾಗಿದ್ದರು.ಆದ್ದರಿಂದ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತದೆ.ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಕಲಬುರಗಿ ಜಿಲ್ಲೆಗೆ ಕಡೆಗಣಿಸದೆ ಸರ್ಕಾರದಲ್ಲಿ ಹೆಚ್ಚಿನ ಸಚಿವ ಸ್ಥಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Latest Posts

ಲೈಫ್‌ಸ್ಟೈಲ್