More

  ಕಲುಷಿತ ನೀರಿಗೆ ಮತ್ತೊಂದು ಬಲಿ


  ಯಾದಗಿರಿ: ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮತ್ತೋರ್ವ ವೃದ್ಧೆ ಗುರುವಾರ ಬಲಿಯಾದ ಘಟನೆ ನಡೆದಿದೆ.

  ಗ್ರಾಮದ ನರಸಮ್ಮ (73) ಸಾವಿಗೀಡಾಗಿದ್ದು, ಇದರಿಂದ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮಂಗಳವಾರ ಗ್ರಾಮದಲ್ಲಿ ಸಾವಿತ್ರಿ ಮತ್ತು ಸಾಯಮ್ಮ ಎಂಬುವವರು ಸಾವನ್ನಪ್ಪಿದ್ದರು. ಅಲ್ಲದೆ ವಾಂತಿಭೇದಿ ಮುಂದುವರೆದಿದ್ದು, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಅಸ್ವಸ್ಥರ ಚಿಕಿತ್ಸೆ ಮುಂದುವರೆದಿದೆ.

  ಏತನ್ಮಧ್ಯೆ ಗ್ರಾಮದಲ್ಲಿ ಪೂರೈಕೆಯಾಗುತ್ತಿರುವ ನೀರು ಕುಡಿಯುವುದಕ್ಕೆ ಯೋಗ್ಯವಿಲ್ಲ ಎಂದು ಡಿಬಿಎಚ್ಎಲ್ ಲ್ಯಾಬ್ನಿಂದ ವರದಿ ಬಂದಿದೆ. ಕಳೆದೊಂದು ವಾರದಿಂದ ಅನಪುರದಲ್ಲಿ ಟ್ಯಾಂಕ್ನಿಂದ ಕಲುಷಿತ ನೀರು ಪೂರೈಕೆ ಮಾಡಲಾಗಿತ್ತು. ಇದರ 4 ಸ್ಯಾಂಪಲ್ಗಳನ್ನು ಜಿಲ್ಲಾ ಆರೋಗ್ಯ ಇಲಾಖೆ ಕಲಬುರಗಿಯ ಲ್ಯಾಬ್ ಕಳಿಸಿತ್ತು. ನಾಲ್ಕರಲ್ಲೂ ನೀರು ಸೇವನೆಗೆ ಯೋಗ್ಯವಲ್ಲ ಎಂಬ ವರದಿ ಬಂದ ಕಾರಣ ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿದೆ.

  ಗುರುವಾರ ಬೆಳಗ್ಗೆ ಗ್ರಾಮಕ್ಕೆ ಜಿಲ್ಲಾಕಾರಿ ಸ್ನೇಹಲ್ ಆರ್., ಜಿಪಂ ಸಿಇಒ ಅಮರೇಶ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ಸ್ವಚ್ಛತೆ ಕಾಪಾಡುವಂತೆ ಗ್ರಾಪಂ ಅಕಾರಿಗಳಿಗೆ ಸೂಚನೆ ನೀಡಿದ ಅವರು, ಮನೆಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸುವಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕತರ್ೆಯರಿಗೆ ನಿದರ್ೇಶನ ನೀಡಿದರು.

  ಇನ್ನೂ ಅನಪುರ ಗ್ರಾಪಂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದೇವರ ಜಾತ್ರೆಗಳು, ಉತ್ಸವಗಳು ನಡೆದ ಬಗ್ಗೆ ತಕ್ಷಣ ಮಾಹಿತಿ ಪಡೆದುಕೊಳ್ಳಬೇಕು. ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರರಿಗೆ ಸೂಚನೆ ನೀಡಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts